ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ನಿರಂತರವಾಗ ಅಗತ್ಯ ವಸ್ತುಗಳ ಮೇಲೆ ದರ ಏರಿಕೆ ಮಾಡಿ, ರಾಜ್ಯದ ಜನತೆಗೆ ಹೊರೆ ಮಾಡಿದೆ. ಹಾಗಾಗಿ ಸರ್ಕಾರ ತಕ್ಷಣ ಕೂಡಲೇ ಬೆಲೆ ಹಿಂಪಡೆಯಬೇಕೆಂದು ಆಗ್ರಹಿಸಿ ಬುಧವಾರ ಪ್ರತಿಭಟನೆ ನಡೆಸಲಾಗುವುದು ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.
ಬೆಂಗಳೂರಿನಲ್ಲಿ ಇಂದು(ಏಪ್ರಿಲ್.1) ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,
ರಾಜ್ಯ ಸರ್ಕಾರ ಮುಸ್ಲಿಮರಿಗೆ ಶೇ.4% ಮೀಸಲಾತಿ ನೀಡುವ ಮೂಲಕ ತುಷ್ಟೀಕರಣ ನೀತಿ ಅನುಸರಿಸುತ್ತಿದೆ. ಜನಸಾಮಾನ್ಯರು ದಿನನಿತ್ಯ ಬಳಸುವ ಹಾಲಿನ ಬೆಲೆ ಒಂದು ವರ್ಷದ ಅವಧಿಯಲ್ಲಿ 9 ರೂಪಾಯಿ ಹೆಚ್ಚಳ ಮಾಡಿದೆ ಎಂದು ಕಿಡಿಕಾರಿದರು.
ರಾಜ್ಯ ಕಾಂಗ್ರೆಸ್ ಸರ್ಕಾರ ನಿರಂತರ ಬೆಲೆ ಏರಿಕೆಯ ನೀತಿಯಿಂದ ಜನರನ್ನು ನೆಮ್ಮದಿಯಿಂದ ಬದುಕಲು ಬಿಡುತ್ತಿಲ್ಲ. ಈ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಹಾಲು, ವಿದ್ಯುತ್, ಮೆಟ್ರೋ ಹಾಗೂ ಬಸ್ ಟಿಕೆಟ್ ದರ ಸೇರಿದಂತೆ ಅಗತ್ಯ ವಸ್ತುಗಳ ಮೇಲೆ ನಿರಂತರವಾಗಿ ಬೆಲೆ ಏರಿಸುತ್ತಿದೆ. ಈ ಎಲ್ಲಾ ಬೆಲೆ ಏರಿಕೆಯನ್ನು ರಾಜ್ಯ ಸರ್ಕಾರ ಹಿಂಪಡೆಯಬೇಕೆಂದು ಆಗ್ರಹಿಸಿ ನಾಳೆ(ಏಪ್ರಿಲ್.2) ಬೆಳಿಗ್ಗೆಯಿಂದ ಫ್ರೀಡಂ ಪಾರ್ಕ್‌ನಲ್ಲಿ ಅಹೋರಾತ್ರಿ ಪ್ರತಿಭಟನೆ ನಡೆಸಲಾಗುವುದು. ಈ ಧರಣಿಯಲ್ಲಿ ನಾನು ಸಹ ಭಾಗವಹಿಸುತ್ತಿದ್ದೇನೆ ಎಂದು ಹೇಳಿದರು.
‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…
ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…
ಹೆಚ್. ಡಿ. ಕೋಟೆ ತಾಲ್ಲೂಕು ಕೇಂದ್ರ ಸ್ಥಳದಲ್ಲಿ ಕೆಲವು ಸರ್ಕಾರಿ ಇಲಾಖೆಗಳು ಹಾಗೂ ಹಾಸ್ಟೆಲ್‌ಗಳು ಖಾಸಗಿ ಕಟ್ಟಡಗಳಲ್ಲಿ ಕಾರ್ಯನಿರ್ವಣೆ ಮಾಡುತ್ತಿವೆ.…
ಜಿ.ಪಿ.ಬಸವರಾಜು ಯಾಂತ್ರಿಕ ಬದುಕಿನ ಹಲವು ಪ್ರಶ್ನೆಗಳಿಗೆ ಉತ್ತರಗಳನ್ನು ತೋರಿಸುವ ನಾಟಕ ‘ಅಮೃತಬಳ್ಳಿ ಕಷಾಯ’ ಮಾಯಾ ನಗರಿಯಂತೆ ಕಾಣುವ ಮುಂಬೈ ನಗರ…
ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು ಕರ್ನಾಟಕ ಪೊಲೀಸ್ ಅಕಾಡೆಮಿ ಮೈಸೂರು ಸದಾ ಜಾಗೃತವಾಗಿರುವ ಸಮಯಪಾಲನೆಯ ವಿವೇಚನೆ ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು…
ಕೆ.ಬಿ.ರಮೇಶನಾಯಕ ಉತ್ತನಹಳ್ಳಿ ಗ್ರಾಮದ ಬಳಿ ಯುವ ದಸರಾ, ಸಾತಗಳ್ಳಿ ವಿಟಿಯು ಸಮೀಪ ಕಂಬಳ ಕ್ರೀಡೆ ಆಯೋಜನೆ; ವೀಕ್ಷಕರ ಬೇಡಿಕೆಗೆ ತಕ್ಕಂತೆ…