ಜಾ.ದಳ ಶೇ.100ರಷ್ಟು ಸಹಕಾರ ನೀಡುತ್ತೆ : ಬಿಎಸ್‌ವೈ ವಿಶ್ವಾಸ

ದಾವಣಗೆರೆ: ಈಗಾಗಲೇ ನಾನು ಬಹಿರಂಗವಾಗಿಯೇ ಹೇಳಿದ್ದೇನೆ. ಎಚ್.ಡಿ. ಕುಮಾರಸ್ವಾಮಿ ಅವರೊಂದಿಗೆ ಮಾತಾಡಿರುವೆ. ಎಲ್ಲಿ ಜಾ. ದಳ ಅಭ್ಯರ್ಥಿಗಳು ಸ್ಪರ್ಧಿಸುವುದಿಲ್ಲವೋ ಅಲ್ಲಿ ಬಿಜೆಪಿಗೆ ಸಹಕಾರ ನೀಡಬೇಕು ಎಂದಿದ್ದೇನೆ. ನೂರಕ್ಕೆ ನೂರು ಸಹಕಾರ ನೀಡುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ದಾವಣಗೆರೆಯ ಅನಗೋಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸಿದ್ದರಾಮಯ್ಯ ಅವರ ಜಾ.ದಳ -ಬಿಜೆಪಿ ಬಿ ಟೀಮ್ ಹೇಳಿಕೆಗೆ ತಿರುಗೇಟು ನೀಡಿದದರು. ಪ್ರತಿಪಕ್ಷ ನಾಯಕ ಎಂಬುದನ್ನು ಮರೆತು ಅವರು ಹೇಳಿಕೆ ನೀಡುತ್ತಿದ್ದಾರೆಂದು ಟೀಕಿಸಿದರು.

ಮೈಸೂರನಲ್ಲಿಯೇ ಸೋತು ಹೀಗೆ ಮಾತಾಡುವುದು ಸರಿಯಲ್ಲ. ಇವರ ಸೊಕ್ಕಿನ ದಿಮಾಕಿನ ಮಾತುಗಳಿಗೆ ಚುನಾವಣೆ ಉತ್ತರ ನೀಡಲಿದೆ ಎಂದು ಬಿಎಸ್‌ವೈ ಅಭಿಪ್ರಾಯಪಟ್ಟರು.

ಸಚಿವ ಸಂಪುಟ ವಿಸ್ತರಣೆ ಬಗ್ಗೆ ಸುಳಿವು : ಶೀಘ್ರವೇ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಯಡಿಯೂರಪ್ಪ ಸುಳಿವು ನೀಡಿದ್ದಾರೆ. ಸಂಪುಟ ವಿಸ್ತರಣೆ ಬಗ್ಗೆ ಮುಖ್ಯಮಂತ್ರಿ ಬೊಮ್ಮಾಯಿ ಉತ್ತರಿಸಲಿದ್ದಾರೆ. ಇಷ್ಟರಲ್ಲೇ ಸಂಪುಟ ವಿಸ್ತರಣೆ ಆಗುವ ನಿರೀಕ್ಷೆ ನನಗೂ ಇದೆ ಎಂದು.

× Chat with us