ಬೆಂಗಳೂರು: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಇದೀಗ ಪೂರ್ಣ ಪ್ರಮಾಣದಲ್ಲಿ ರಾಜಕೀಯ ಅಖಾಡಕ್ಕಿಳಿಯುತ್ತಿದ್ದಾರೆ. ಮಗನ ವಿರುದ್ಧ ಹಾಗೂ ಕುಟುಂಬದ ವಿರುದ್ಧ ನಾನಾ ರೀತಿಯ ಗಂಭೀರ ಆರೋಪಗಳ ಸುರಿಮಳೆಯ ನಡುವೆಯೂ ಬಿಎಸ್‌ವೈ ಪುತ್ರನನ್ನು ಕಾಪಾಡಲು ಪಣ ತೊಟ್ಟಿದ್ದಾರೆ. ಇದರ ಭಾಗ ಎಂಬಂತೆ ರಾಜ್ಯ ಬಿಜೆಪಿ ಕಚೇರಿಗೆ ಯಡಿಯೂರಪ್ಪ ನಿರಂತರವಾಗಿ ಭೇಟಿ ನೀಡುತ್ತಿದ್ದು, ತನ್ನ ರಾಜಕೀಯ ಇರುವಿಕೆಯನ್ನು ತೋರಿಸುತ್ತಿದ್ದಾರೆ.
ಬಿಜೆಪಿ ಬಣ ರಾಜಕೀಯ ದಿನದಿಂದ ದಿನಕ್ಕೆ ತೀವ್ರತೆಯನ್ನು ಪಡೆದುಕೊಳ್ಳುತ್ತಿದೆ. ಬಿ.ವೈ.ವಿಜಯೇಂದ್ರ ಅವರನ್ನು ಅಧ್ಯಕ್ಷ ಸ್ಥಾನದಿಂದ ಹೇಗಾದರು ಮಾಡಿ ಇಳಿಸಲೇಬೇಕು ಎಂದು ವಿರೋಧಿ ಬಣ ಪಣತೊಟ್ಟಿದೆ. ದಾವಣಗೆರೆಯಲ್ಲಿ ಜಿ.ಎಂ.ಸಿದ್ದೇಶ್ವರ ಅವರ ಹುಟ್ಟುಹಬ್ಬದ ಸಂದರ್ಭದಲ್ಲಿ ರೆಬೆಲ್ ಬಣದ ನಾಯಕರು ನೀಡಿದ ಹೇಳಿಕೆಗಳೇ ಇದಕ್ಕೆ ಸಾಕ್ಷಿಯಾಗಿವೆ. ಬಿಎಸ್‌ವೈ ವಿರುದ್ಧ ನೇರವಾಗಿ ಮಾಜಿ ಶಾಸಕ ಅರವಿಂದ ಲಿಂಬಾವಳಿ ತಿರುಗಿ ಬಿದ್ದಿದ್ದಾರೆ. ಕೆಜೆಪಿಗೆ ಹೋಗಿದ್ದ ಯಡಿಯೂರಪ್ಪ ಮರಳಿ ಬಿಜೆಪಿಗೆ ಬಂದಿದ್ಯಾಕೆ ಎಂದು ನೇರವಾಗಿಯೇ ಪ್ರಶ್ನಿಸಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಬದಲಾವಣೆ ವಿಚಾರವಾಗಿ ವರಿಷ್ಠರು ಸ್ಪಷ್ಟ ನಿರ್ಧಾರಕ್ಕೆ ಬರುತ್ತಿಲ್ಲ. ಬೇರೆ ರಾಜ್ಯಗಳ ರಾಜ್ಯಾಧ್ಯಕ್ಷರ ನೇಮಕ ಆದರೂ ಕರ್ನಾಟಕಕ್ಕೆ ಸಂಬಂಧಿಸಿದಂತೆ ದೆಹಲಿ ನಾಯಕರು ನಿರ್ಧಾರವನ್ನು ಕೈಗೊಳ್ಳಲು ಹಿಂದೇಟು ಹಾಕುತ್ತಿದ್ದಾರೆ. ಇದು ಒಂದು ರೀತಿಯಲ್ಲಿ ವಿರೋಧಿ ಪಾಳಯದ ಕೈ ಮೇಲಾಗುವಂತೆ ಮಾಡುತ್ತಿದೆ.
ಈ ಬೆಳವಣಿಗೆಯ ನಡುವೆಯೂ ಬಿ.ಎಸ್.ಯಡಿಯೂರಪ್ಪ ಸಕ್ರಿಯವಾಗಿದ್ದಾರೆ. ಪ್ರತಿನಿತ್ಯ ಬಿಜೆಪಿ ರಾಜ್ಯ ಕಚೇರಿಗೆ ಆಗಮಿಸಿ ಪಕ್ಷದ ಕಾರ್ಯಕರ್ತರಲ್ಲೂ ಹುರುಪು ತುಂಬಿಸುತ್ತಿದ್ದಾರೆ. ಬಿಎಸ್‌ವೈ ಈ ನಡೆ ದೆಹಲಿಯ ನಾಯಕರಿಗೆ ನೀಡುತ್ತಿರುವ ಪರೋಕ್ಷ ಸಂದೇಶವಾಗಿದೆ ಎಂದೇ ವಿಶ್ಲೇಷಣೆ ಮಾಡಲಾಗುತ್ತಿದೆ.
ಮೈಸೂರಿನಲ್ಲಿ ಅಧಿಕಾರಿಗಳ ನಿರ್ಲಕ್ಷ್ಯದಿಂದ ಪೌರಕಾರ್ಮಿಕರು ಸಮವಸ್ತ್ರ, ಗುಣಮಟ್ಟದ ಬೆಳಗಿನ ಉಪಾಹಾರ ಮೊದಲಾದ ಸೌಲಭ್ಯಗಳಿಲ್ಲದೇ ಬವಣೆ ಪಡುತ್ತಿರುವುದು, ನಗರ ಪಾಲಿಕೆಯಲ್ಲಿ ೮೪…
ದೇಶದ ಪ್ರಗತಿಗೆ ಶಿಕ್ಷಣ ಪ್ರಮುಖವಾಗಿದೆ. ಶಾಲಾ, ಕಾಲೇಜು ಹಂತದ ಪರೀಕ್ಷೆಗಳು ಮತ್ತು ಸರ್ಕಾರಿ ಹುದ್ದೆಗಳ ನೇಮಕಾತಿಗೆ ನಡೆಯುವ ಪರೀಕ್ಷಾ ಕೊಠಡಿಯಲ್ಲಿ…
ಅಂಚೆ ಕಚೇರಿಗಳಲ್ಲಿ ಗ್ರಾಹಕರು ಹಣ ಕಟ್ಟುವ ಉಳಿತಾಯ ಖಾತೆ, ಆರ್‌ಡಿ , ಪಿಪಿಎಫ್, ಎಂಐಎಸ್ ಹಾಗೂ ಅಂಚೆ ಕಚೇರಿಯ ವಿವಿಧ…
ರಾಜ್ಯಗಳ ಆಡಳಿತ ಸಂವಿಧಾನಬದ್ಧವಾಗಿ ನಡೆಯುವಂತೆ ಮೇಲುಸ್ತುವಾರಿಯಾಗಿ ಕೇಂದ್ರ ಸರ್ಕಾರದ ಶಿಫಾರಸಿನಂತೆ ರಾಷ್ಟ್ರಪತಿ ಅವರು ರಾಜ್ಯಪಾಲರನ್ನು ನೇಮಕ ಮಾಡುವುದು ೧೯೫೦ರಿಂದ ನಡೆದುಕೊಂಡು…
‘ಕುಸೂ ಕುಸೂ ಹೇಳಪ್ಪ ಹೇಳು ನನ್ನ ಕಂದಾ. ಅವ್ವಾ... ನಾಳಕ ಬಾವುಟದ ಹಬ್ಬ. ಬಾವುಟ ಏರಿಸೋ ಹಬ್ಬ. ಇಸ್ಕೂಲಿಗೆ ಹೊತ್ತಿಗೆ…
ಸಂವಿಧಾನ ನಮಗೆ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ನೀಡಿದೆ. ಆದರೆ ವಾಸ್ತವದಲ್ಲಿ ನಾವು ಎಷ್ಟು ಮುಕ್ತರಾಗಿದ್ದೇವೆ? ಭ್ರಷ್ಟಾಚಾರ, ಪರಿಸರ ನಾಶ, ಮಾಲಿನ್ಯ ಹಾಗೂ…