Categories: ರಾಜ್ಯ

ಸ್ನೇಹಮಯಿ ಕೃಷ್ಣ ವಿರುದ್ಧ ಸುಳ್ಳು ದೂರು ನೀಡಿ ಬೆದರಿಕೆ: ಬಿ.ವೈ.ವಿಜಯೇಂದ್ರ ಗಂಭೀರ ಆರೋಪ

ಬೆಂಗಳೂರು: ಮುಡಾ ಪ್ರಕರಣದಲ್ಲಿ ತಂಬಾ ಭಯಭೀತರಾಗಿರುವ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾಮಾಜಿಕ ಕಾರ್ಯಕರ್ತ ಹಾಗೂ ಈ ಪ್ರಕರಣದ ರೂವಾರಿ ಸ್ನೇಹಮಯಿ ಕೃಷ್ಣರನ್ನು ಎದುರಿಸಲು ಅವರ ಹಿಂಬಾಲಕರ ಮೂಲಕ ಸುಳ್ಳು ದೂರುಗಳನ್ನು ಕೊಡಿಸುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದ್ದಾರೆ.

ಮೈಸೂರಿನಲ್ಲಿ ಸ್ನೇಹಮಯಿ ಕೃಷ್ಣ ವಿರುದ್ಧ ಕಾಂಗ್ರೆಸ್‌ ಮುಖಂಡರ ಮೂಲಕ ದೂರು ದಾಖಲಿಸಿರುವ ಕುರಿತು ತಮ್ಮ ʼಎಕ್ಸ್‌ʼ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಸಂವಿಧಾನಾತ್ಮಕವಾಗಿ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಂಬಿಕೆಯಿಂದ ಕಾನೂನಾತ್ಮಕವಾಗಿ ನ್ಯಾಯದ ದಾರಿಯಲ್ಲಿ ಹೋರಾಡುತ್ತಿರುವ ಕಾರ್ಯಕರ್ತರನ್ನು ಹತ್ತಿಕ್ಕುವ ಪ್ರಯತ್ನ ನಡೆಸಲಾಗುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಪೊಲೀಸ್‌ ಬಲ ಪ್ರಯೋಗಿಸಿ ಸುಳ್ಳು ದೂರುಗಳನ್ನು ದಾಖಲಿಸಿ ದೂರುದಾರರನ್ನು ಬೆದರಿಸುವುದು ಹಾಗೂ ದೇಶದ ಪ್ರಜೆಯ ಹೋರಾಟದ ಹಕ್ಕನ್ನು ದಮನ ಮಾಡುವುದು ಕಾಂಗ್ರೆಸ್‌ನವರ ಕೆಲಸವಾಗಿದೆ. ಇದು ಮುಂದುವರೆದಲ್ಲಿ ಬಿಜೆಪಿ ಅವರ ರಕ್ಷಣೆಗೆ ನಿಲ್ಲುತ್ತದೆ ಎಂದು ಧೈರ್ಯ ಹೇಳಿದ್ದಾರೆ.

 

ಆಂದೋಲನ ಡೆಸ್ಕ್

Recent Posts

ಕಾಡಾನೆ ದಾಳಿ ; ಜಮೀನಿನ ಶೀಟಿನ ಮನೆ, ಟೊಮೆಟೊ ಬೆಳೆ ನಾಶ

ಗುಂಡ್ಲುಪೇಟೆ : ತಾಲ್ಲೂಕಿನ ಮಂಚಹಳ್ಳಿ ಗ್ರಾಮದ ಮಂಜುನಾಥ ಎಂಬವರ ಜಮೀನಿಗೆ ಶನಿವಾರ ರಾತ್ರಿ ಕಾಡಾನೆ ನುಗ್ಗಿ ಕಟಾವು ಮಾಡಿ ಜಮೀನಿನ…

4 mins ago

ಏಪ್ರಿಲ್.‌11ರಂದು ಬೆಂಗಳೂರಿನಲ್ಲಿ ಜೆಡಿಎಸ್‌ ಜನತಾ ಸಮಾವೇಶ

ಬೆಂಗಳೂರು: ಹಾಸನ ಹಾಗೂ ವಿಜಯಪುರದಲ್ಲಿ ನಡೆಸಿದ ಮಾದರಿಯಲ್ಲೇ ಬೆಂಗಳೂರಿನಲ್ಲೂ ಜೆಡಿಎಸ್ ಪಕ್ಷದ ರಜತ ಮಹೋತ್ಸವ ಹಾಗೂ ಜನತಾ ಸಮಾವೇಶವನ್ನು ನಡೆಸಲು…

1 hour ago

ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನ: ಇಬ್ಬರು ಸಾವು

ಬೆಂಗಳೂರು: ಸಾಲಗಾರರ ಕಾಟದಿಂದ ಮನನೊಂದ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನಿಸಿದ್ದು ತಾಯಿ-ಮಗಳು ಸಾವನ್ನಪ್ಪಿದರೆ, ಮತ್ತಿಬ್ಬರು ಸಾವು ಬದುಕಿನ ನಡುವೆ…

1 hour ago

ತಮಿಳುನಾಡು ಚುನಾವಣೆ: ಎರಡು ಕ್ಷೇತ್ರಗಳಿಂದ ನಟ ವಿಜಯ್‌ ಸ್ಪರ್ಧೆ

ಚೆನ್ನೈ: ಏಪ್ರಿಲ್.23ರಂದು ನಡೆಯಲಿರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ಎರಡು ಕ್ಷೇತ್ರಗಳಿಂದ ಸ್ಪರ್ಧೆ ಮಾಡುವುದಾಗಿ ನಟ ವಿಜಯ್‌ ಘೋಷಣೆ ಮಾಡಿದ್ದಾರೆ. ಚೆನ್ನೈನ…

1 hour ago

ಹಳ್ಳಿಗಳಲ್ಲಿ ಗೃಹ ಬಳಕೆಯವರಿಗೆ 45 ದಿನಕ್ಕೆ ಒಂದು ಸಿಲಿಂಡರ್:‌ ಸಚಿವ ಮುನಿಯಪ್ಪ

ಬೆಂಗಳೂರು: ಹಳ್ಳಿಗಳಲ್ಲಿ ಗೃಹ ಬಳಕೆಯವರಿಗೆ 45 ದಿನಕ್ಕೆ ಒಂದು ಸಿಲಿಂಡರ್ ಪೂರೈಕೆ ಮಾಡಲಾಗುತ್ತದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು…

2 hours ago

ಹನೂರು| ಕಾಡಾನೆ ದಾಳಿ: ಆಟೋ ಜಖಂ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಂಚಾಪುರ ಗ್ರಾಮದಿಂದ ಒಡೆಯರ ಪಾಳ್ಯ ಗ್ರಾಮಕ್ಕೆ ವ್ಯಾಪಾರ ಮಾಡಲು…

3 hours ago