ರಾಜ್ಯ

ಬಿಜೆಪಿ ನೂತನ ಪದಾಧಿಕಾರಿಗಳ ಸಭೆ ಕರೆದ ಬಿ.ವೈ.ವಿಜಯೇಂದ್ರ

ಬೆಂಗಳೂರು: ರಾಜ್ಯದ ಬಿಜೆಪಿ ನೂತನ ಪದಾಧಿಕಾರಿಗಳ ಪಟ್ಟಿ ಬಿಡುಗಡೆ ಮಾಡಲಾಗಿದೆ. ಬೇರೆಬೇರೆ ಸಮಾಜಗಳು, ಪಂಗಡಗಳು, ಮುಂಬೈ ಕರ್ನಾಟಕ, ಕಿತ್ತೂರು ಕರ್ನಾಟಕ, ಕಲ್ಯಾಣ ಕರ್ನಾಟಕ ಸೇರಿ ಎಲ್ಲ ಭಾಗಗಳನ್ನು ಗುರುತಿಸಿ ಪದಾಧಿಕಾರಿಗಳ ಆಯ್ಕೆ ನಡೆದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದರು.

ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಹೆಚ್ಚೆಚ್ಚು ಯುವಕರಿಗೆ ಆದ್ಯತೆ ಕೊಡಲಾಗಿದೆ. ಹಿರಿಯರಿಗೂ ಅವಕಾಶವನ್ನು ಪಕ್ಷ ಮಾಡಿಕೊಟ್ಟಿದೆ. ಇದರ ಉದ್ದೇಶ ಒಂದೇ ಆಗಿದೆ. ನಮ್ಮ ಮುಂದೆ ದೊಡ್ಡ ಸವಾಲಿದೆ. ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಅಧಿಕಾರದಲ್ಲಿದೆ. ಕಾಂಗ್ರೆಸ್ ವಿರುದ್ಧ ಹೋರಾಟ ಮಾಡುವುದು ಹಾಗೂ ಮುಂದಿನ ಲೋಕಸಭಾ ಚುನಾವಣೆಯನ್ನು ಬಿಜೆಪಿ ಮತ್ತು ಜೆಡಿಎಸ್ ಪಕ್ಷ ಒಂದಾಗಿ ರಾಜ್ಯದ ಎಲ್ಲ 28 ಕ್ಷೇತ್ರಗಳಲ್ಲೂ ಜಯಭೇರಿ ಬಾರಿಸುವ ಮೂಲಕ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿಜಿ ಅವರಿಗೆ ಬಲ ತುಂಬುವ ಕಾರ್ಯ ಮಾಡಬೇಕಿದೆ ಎಂದು ತಿಳಿಸಿದರು.

ನಾಡಿದ್ದು, ಮಂಗಳವಾರ ಬಿಜೆಪಿ ಕೇಂದ್ರ ಕಚೇರಿ ಜಗನ್ನಾಥ ಭವನದಲ್ಲಿ ಎಲ್ಲ ನೂತನ ಪದಾಧಿಕಾರಿಗಳ ಸಭೆ ಕರೆದಿದ್ದೇನೆ. ಮುಂದಿನ ಲೋಕಸಭಾ ಚುನಾವಣೆ ವರೆಗೆ ನಾವು ವಿಶ್ರಾಂತಿ ಪಡೆಯುವ ಪ್ರಶ್ನೆಯೇ ಇಲ್ಲ. ನಾವೆಲ್ಲರೂ ಒಗ್ಗಟ್ಟಾಗಿ, ಒಂದಾಗಿ ಪಕ್ಷದ ಸಂಘಟನೆಗೆ ಬಲ ತುಂಬಬೇಕೆಂಬ ಸಂದೇಶ ಕೊಡಲಿದ್ದೇನೆ ಎಂದು ಹೇಳಿದರು.

andolanait

Recent Posts

ಕನ್ನಡ ಭಾಷ ಶಿಕ್ಷಕರ ಪ್ರತ್ಯೇಕ ನೇಮಕಕ್ಕೆ ಸರ್ಕಾರ ಅಸ್ತು ; ಸ್ವಾಗತಾರ್ಹ

ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್‌ಟಿಆರ್ ಹಾಗೂ ಎಚ್‌ಎಸ್‌ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…

5 mins ago

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

4 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

6 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

7 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

8 hours ago

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

11 hours ago