ಬೆಂಗಳೂರು: ಪಿಎಸ್‌ಐ ಪರೀಕ್ಷೆ ಫಲಿತಾಂಶ ಪ್ರಕಟ ಮಾಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಟ್ವೀಟ್ ಮಾಡಿ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣವಾದ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸುವ ಅಭಿಲಾಷೆ ಹೊತ್ತು ಕಾಯುತ್ತಿರುವ ಪರೀಕ್ಷಾರ್ಥಿಗಳ ಗೊಂದಲಗಳಿಗೆ ತೆರೆ ಎಳೆಯುವಂತೆ ರಾಜ್ಯ ಸರ್ಕಾರಕ್ಕೆ ಒತ್ತಾಯ ಮಾಡಿದ್ದಾರೆ.
ಈಗಾಗಲೇ ಅನೇಕ ಕಾರಣಗಳಿಂದ ನೇಮಕಾತಿ ವಿಳಂಬವಾಗಿದೆ. ಕಳೆದ ನಾಲ್ಕು ವರ್ಷಗಳಿಂದಲೂ ಸಾವಿರಾರು ಉದ್ಯೋಗಾಕಾಂಕ್ಷಿಗಳು ಅಂತಿಮ ಆಯ್ಕೆ ಪಟ್ಟಿ ಎದುರು ನೋಡುತ್ತಿರುವುದು ಈ ಸರ್ಕಾರದ ಅರಿವಿಗೆ ಬಾರದಿರುವುದು ದುರ್ದೈವವೇ ಸರಿ ಎನ್ನುವಂತಾಗಿದೆ.
ಈ ಹಿನ್ನೆಲೆಯಲ್ಲಿ ಟ್ವೀಟ್ ಮಾಡಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿರುವ ವಿಜಯೇಂದ್ರ ಅವರು, ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸುವ ಅಭಿಲಾಷೆ ಹೊತ್ತು ಕಾಯುತ್ತಿರುವ ಪರೀಕ್ಷಾರ್ಥಿಗಳ ಗೊಂದಲಗಳಿಗೆ ತೆರೆ ಎಳೆಯುವ ಕಾಳಜಿ ತೋರಲಿ ಎಂದು ಆಗ್ರಹಿಸಿದ್ದಾರೆ.