ಬೆಂಗಳೂರು: ಗ್ಯಾರಂಟಿ ಅನುಷ್ಟಾನ ಸಮಿತಿಯ ಕಾಂಗ್ರೆಸ್ ಕಾರ್ಯಕರ್ತರಿಗೆ ಸರ್ಕಾರಿ ವೇತನ ನೀಡಲಾಗುತ್ತಿದೆ. ಇದನ್ನು ಖಂಡಿಸಿ ರಾಜ್ಯಪಾಲರಿಗೆ ದೂರು ನೀಡುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಇಂದು(ಮಾರ್ಚ್.12) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಸರ್ಕಾದ ಬಳಿ ಶಿಕ್ಷಕರಿಗೆ, ಅಂಗನವಾಡಿ ಕಾರ್ಯಕರ್ತರಿಗೆ ಗೌರವ ಧನ ನೀಡಲು ಹಣವಿಲ್ಲ. ಆದರೆ ಕಾಂಗ್ರೆಸ್ ಕಾರ್ಯಕರ್ತರಿಗೆ ವೇತನ ಭತ್ಯೆ ನೀಡಲು ಹಣವಿದೆ ಎಂದು ಆರೋಪಿಸಿದ್ದಾರೆ.
ಗ್ಯಾರಂಟಿ ಅನುಷ್ಟಾನ ಸಮಿತಿಗೆ ಶಾಸಕರ ಮಕ್ಕಳನ್ನು ಹಾಗೂ ಪುಡಾರಿಗಳನ್ನು ನೇಮಿಸಿದ್ದಾರೆ. ಇದನ್ನು ಖಂಡಿಸುತ್ತೇನೆ ಸರ್ಕಾರದ ಕ್ರಮ ಖಂಡಿಸಿ ರಾಜ್ಯಪಾಲರಿಗೆ ದೂರು ನೀಡುತ್ತೇವೆ ಎಂದು ಸರ್ಕಾರ ವಿರುದ್ಧ ಕಿಡಿಕಾರಿದ್ದಾರೆ.





