ರಾಜ್ಯ

ಸಿದ್ದರಾಮಯ್ಯ ಆರೋಪಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿರುಗೇಟು

ಬೆಂಗಳೂರು: ವಕ್ಫ್‌ ಆಸ್ತಿ ಕಬಳಿಕೆ ಬಗ್ಗೆ ಮೌನವಾಗಿರಲು 150 ಕೋಟಿ ರೂ ಆಮಿಷ ಆರೋಪಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಆರೋಪಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿರುಗೇಟು ನೀಡಿದ್ದಾರೆ.

ಈ ಬಗ್ಗೆ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಸಿಬಿಐ, ಇಡಿ ತನಿಖೆಗಳಿಗೆ ಬೆಚ್ಚಿ ಬಿದ್ದಿರುವ ನೀವು ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ನೀಡಿದ ಅನುಮತಿಯನ್ನು ಪ್ರಶ್ನಿಸಿ ಘಟಾನುಘಟಿ ಹಿರಿಯ ವಕೀಲರನ್ನು ಕರೆಸಿಕೊಂಡು ಕಾನೂನು ರಕ್ಷಣೆ ಪಡೆಯಲು ವ್ಯರ್ಥ ಪ್ರಯತ್ನ ನಡೆಸಿದ್ದೀರಿ. ಉಚ್ಛ ನ್ಯಾಯಾಲಯದ ತೀರ್ಪಿನಿಂದ ಮುಖಭಂಗಕ್ಕೀಡಾದ ನಿಮಗೆ ಇನ್ನೊಬ್ಬರ ಬಗ್ಗೆ ಸಿಬಿಐ ತನಿಖೆಗೆ ಆದೇಶ ನೀಡಲು ಯಾವ ನೈತಿಕತೆ ಇದೆ ಎಂದು ಪ್ರಶ್ನೆ ಮಾಡಿದ್ದಾರೆ.

ಅನ್ವರ್‌ ಮಾಣಿಪ್ಪಾಡಿ ವರದಿಯಲ್ಲಿರುವುದು ಕಾಂಗ್ರೆಸ್ಸಿಗರು ಆಕ್ರಮಿಸಿರುವ ವಕ್ಫ್‌ ಆಸ್ತಿಗಳ ಕುರಿತೇ ಹೊರತು ಬಿಜೆಪಿಯವರನ್ನು ಕುರಿತು ಅಲ್ಲ. ಕಾಂಗ್ರೆಸ್ಸಿಗರ ವಿರುದ್ಧ ಇರುವ ಆರೋಪಕ್ಕೆ ಯಾರಾದರೂ 150 ಕೋಟಿ ರೂಪಾಯಿಗಳ ಆಮಿಷವನ್ನು ಒಡ್ಡಲು ಸಾಧ್ಯವೇ? ಈ ಬಗ್ಗೆ ಸಿಎಂ ಸಿದ್ದರಾಮಯ್ಯರಿಗೆ ಕನಿಷ್ಠ ವಿವೇಕವೂ ಇಲ್ಲವಲ್ಲ ಎಂದು ಲೇವಡಿ ಮಾಡಿದ್ದಾರೆ.

ನಿಮ್ಮ ಸರ್ಕಾರ ವಕ್ಫ್‌ ಹೆಸರಿನಲ್ಲಿ ರೈತರು ಹಾಗೂ ಹಿಂದೂ ಧಾರ್ಮಿಕ ಸ್ಥಳಗಳನ್ನು ಕಬಳಿಸಲು ಹೊರಟಿರುವ ಪ್ರಕರಣ, ಪಂಚಮಸಾಲಿ ಮೀಸಲಾತಿಯ ಹೋರಾಟಗಾರರ ಮೇಲೆ ಅಮಾನುಷವಾಗಿ ನಡೆದ ಪೊಲೀಸ್‌ ದಬ್ಬಾಳಿಕೆಯ ಲಾಠಿ ಚಾರ್ಜ್‌ ಹಿನ್ನೆಲೆಯಲ್ಲಿ ಭುಗಿಲೆದ್ದಿರುವ ಘಟನೆಯನ್ನು ಹಾಗೂ ಬಾಣಂತಿಯರ ಸರಣಿ ಸಾವಿನ ಪ್ರಕರಣ, ದಿನವೂ ಸರಣಿ ರೂಪದಲ್ಲಿ ಹೊರಬರುತ್ತಿರುವ ಮುಡಾದ ಹಗರಣ ಗಂಭೀರ ಸ್ವರೂಪ ಪಡೆಯುತ್ತಿರುವ ಹಿನ್ನೆಲೆಯಲ್ಲಿ ವಿಧಾನಮಂಡಲದ ಉಭಯ ಸದನಗಳ ಚರ್ಚೆಯನ್ನು ದಿಕ್ಕುತಪ್ಪಿಸಲು ಹಾಗೂ ರಾಜ್ಯದ ಜನತೆಯ ಗಮನವನ್ನು ಬೇರೆಡೆ ಸೆಳೆಯಲು ಇಂತಹ ಕ್ಷುಲ್ಲಕ ಕಪೋಲಕಲ್ಪಿತ ವಿಷಯವನ್ನು ರಂಧ್ರ ಪೂರಿತ ದೋಣಿಯಂತೆ ತೇಲಿಬಿಟ್ಟಿರುವುದು ನಿಮ್ಮ ರಾಜಕೀಯ ಪ್ರಬುದ್ಧತೆಗೆ ತುಕ್ಕು ಹಿಡಿದಿರುವುದನ್ನು ಪ್ರತಿಬಿಂಬಿಸುತ್ತದೆ ಎಂದು ತಿರುಗೇಟು ನೀಡಿದ್ದಾರೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಕೇರ್ ಟೇಕರ್ ಕೆಲಸಕ್ಕೆ ಸೇರಿ ಮನೆ ದರೋಡೆ; ಆರೋಪಿ ಬಂಧನ

ಮಡಿಕೇರಿ: ವಯೋವೃದ್ಧರೊಬ್ಬರ ಮನೆಯಲ್ಲಿ ಹೋಂ ನರ್ಸಿಂಗ್(ಕೇರ್ ಟೇಕರ್) ಕೆಲಸಕ್ಕೆಂದು ಸೇರಿಕೊಂಡು ಚಿನ್ನಾಭರಣ ಹಾಗೂ ನಗದು ಕಳ್ಳತನ ಮಾಡಿದ ಆರೋಪಿಯನ್ನು ಬಂಧಿಸುವಲ್ಲಿ…

7 hours ago

ಮಹದೇಶ್ವರ ಬೆಟ್ಟ : ವಿವಿಧ ಸೇವೆಗಳಿಂದ 1.16 ಕೋಟಿ ಸಂಗ್ರಹ

ಹನೂರು: ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಎರಡನೇ ಶನಿವಾರ ಹಾಗೂ ಯುಗಾದಿ ಜಾತ್ರಾ…

7 hours ago

ಹೊರ್ಮುಜ್‌ ಜಲಸಂಧಿ ಶತ್ರುಗಳಿಗೆ ಮಾತ್ರ ಮುಚ್ಚಿದೆ : ಇರಾನ್

ಟೆಹ್ರಾನ್ : ಅಮೆರಿಕ-ಇಸ್ರೇಲ್ ಸಂಘರ್ಷದ ನಡುವೆಯೂ ಹೊರ್ಮುಜ್ ಜಲಸಂಧಿಯನ್ನು ಸಂಪೂರ್ಣವಾಗಿ ಮುಚ್ಚಲಾಗಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ. ಶತ್ರು ರಾಷ್ಟ್ರ ಮತ್ತು…

8 hours ago

ಹುಣಸೂರು | ಗುಡುಗು-ಸಿಡಿಲು ಸಹಿತ ಸಾಧಾರಣ ಮಳೆ

ಹುಣಸೂರು : ತಾಲ್ಲೂಕಿನ ಹನಗೋಡು ಹೋಬಳಿ ವ್ಯಾಪ್ತಿ ಸೇರಿದಂತೆ ನಾಗರಹೊಳೆ ರಾಷ್ಟ್ರೀಯ ಉದ್ಯಾನದ ಅಂಚಿನ ಗ್ರಾಮಗಳಲ್ಲಿ ಸೋಮವಾರ ಸಂಜೆ ಗುಡುಗು-ಸಿಡಿಲು…

9 hours ago

ಕುಕ್ಕರಹಳ್ಳಿ ಕೆರೆಯಲ್ಲಿ ಕಟ್ಟಡ ನಿರ್ಮಾಣಕ್ಕೆ ವಿರೋಧ ; ಪ್ರತಿಭಟನೆ

ಮೈಸೂರು : ಕುಕ್ಕರಹಳ್ಳಿ ಕೆರೆಯ ಪರಿಸರ ಸಂರಕ್ಷಣೆ ಮಾಡಬೇಕು ಎಂದು ಒತ್ತಾಯಿಸಿ ಪರಿಸರ ಸಂರಕ್ಷಿಸಿ ಹೋರಾಟ ಸಮಿತಿ ವತಿಯಿಂದ ಕುಕ್ಕರಹಳ್ಳಿ…

9 hours ago

2 ಸಾವಿರ ಬೋಧಕ ಹುದ್ದೆಗಳಿಗೆ ನೇಮಕಾತಿ : ಉನ್ನತ ಶಿಕ್ಷಣ ಸಚಿವ ಸುಧಾಕರ್‌

ಬೆಂಗಳೂರು : ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಎಂಜಿನಿಯರಿಂಗ್ ಕಾಲೇಜು, ಪಾಲಿಟೆಕ್ನಿಕ್ ಎಂಜಿನಿಯರಿಂಗ್ ಕಾಲೇಜು ಹಾಗೂ ವಿವಿಯಲ್ಲಿ ಖಾಲಿ ಇರುವ…

9 hours ago