ರಾಜ್ಯ

ಡಿಸಿಎಂ ಡಿಕೆಶಿ, ಸಿಎಂ ಸಿದ್ದರಾಮಯ್ಯ ಅವರನ್ನು ಖುಷಿ ಪಡಿಸಲು ಬಿಜೆಪಿಯನ್ನು ಟೀಕಿಸಿದ್ದಾರೆ: ಬಿ.ವೈ.ವಿಜಯೇಂದ್ರ

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಸಿಎಂ ಸಿದ್ದರಾಮಯ್ಯ ಅವರನ್ನು ಖುಷಿ ಪಡಿಸಲು ಬಿಜೆಪಿ ಅವರನ್ನು ಟೀಕಿಸಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಕಿಡಿಕಾರಿದ್ದಾರೆ.

ಬೆಂಗಳೂರಿನಲ್ಲಿ ಇಂದು(ಮಾರ್ಚ್‌.8) ಬಜೆಟ್‌ ಬಗ್ಗೆ ಬಿಜೆಪಿಗರು ಮಾತನಾಡುವ ಸ್ಥಿತಿಯಲ್ಲಿದ್ದಾರೆ ಎಂಬ ಡಿಕೆ ಶಿವಕುಮಾರ್ ಹೇಳಿಕೆ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಸಿಎಂ ಸಿದ್ದರಾಮಯ್ಯ ಅವರನ್ನು ಖುಷಿ ಪಡಿಸಿದರೆ ರಾಜ್ಯದ ಮುಖ್ಯಮಂತ್ರಿ ಆಗಬಹುದೆಂಬ ಭ್ರಮೆಯಲ್ಲಿ ಡಿ.ಕೆ.ಶಿವಕುಮಾರ್‌ ಇದ್ದಾರೆ. ಆದರೆ ಅದು ಅವರ ಭ್ರಮೆ ಎಂಬುದು ಅವರಿಗೆ ಅರಿವೇ ಇಲ್ಲ. ಆದಾಗ್ಯೂ ಡಿಕೆಶಿ ಇತ್ತೀಚಿನ ದಿನಗಳಲ್ಲಿ ಬಿಜೆಪಿ ಬಗ್ಗೆ ಟೀಕೆ ಮಾಡುತ್ತಿದ್ದರೆ, ಸಿದ್ದರಾಮಯ್ಯನವರು ಖುಷಿಯಾಗಿರುತ್ತಾರೆಂದು ತಿಳಿದಿರಹುದು. ಆದರೆ ಅದರಲ್ಲಿ ಡಿಕೆಶಿ ಸಂಪೂರ್ಣವಾಗಿ ವಿಫಲರಾಗುತ್ತಾರೆ ಎಂದರು.

ಇದೇ ಸಂದರ್ಭದಲ್ಲಿ ಬೆಂಗಳೂರು ನಗರ ವಿವಿಗೆ ಮಾಜಿ ಪ್ರಧಾನಿ ಡಾ.ಮನಮೋಹನ್‌ ಸಿಂಗ್‌ ಹೆಸರಿಡುವ ವಿಚಾರದ ಬಗ್ಗೆ ಮಾತನಾಡಿದ ಅವರು, ಈ ವಿಚಾರಕ್ಕೆ ಸಂಬಂಧಿಸಿದಂತೆ ನಾವು ಸದನದ ಚರ್ಚೆಯಲ್ಲಿ ಉತ್ತರ ನೀಡುತ್ತೇವೆ ಎಂದು ಹೇಳಿದರು.

ಅರ್ಚನ ಎಸ್‌ ಎಸ್

Recent Posts

ಭಾರೀ ಮಳೆಗೆ ಕೊಚ್ಚಿ ಹೋದ ಚೆಕ್ ಡ್ಯಾಂ: 15 ಅಡಿಗೂ ಹೆಚ್ಚು ಪ್ರವಾಹ

ಹನೂರು: ತಾಲ್ಲೂಕಿನ ಶಾಗ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಾಜರ್ ದೊಡ್ಡಿ ಗ್ರಾಮದಲ್ಲಿ ಒಡಿಪಿ ಸಂಸ್ಥೆಯಿಂದ ನಿರ್ಮಾಣ ಮಾಡಿದ್ದ ಚೆಕ್ ಡ್ಯಾಂ…

15 hours ago

ಭಾರೀ ಮಳೆಗೆ ಮನೆ ಕುಸಿತ: ಲಕ್ಷಾಂತರ ರೂ. ನಷ್ಟ

ಹನೂರು: ತಾಲ್ಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೈಶಂಪಾಳ್ಯ ಗ್ರಾಮದಲ್ಲಿ ಭಾನುವಾರ ರಾತ್ರಿ ಸುರಿದ ಭಾರೀ ಮಳೆಗೆ ಮನೆ ಸಂಪೂರ್ಣ…

16 hours ago

ಧರ್ಮಸ್ಥಳ ಸೌಜನ್ಯ ಪ್ರಕರಣ: ಮರು ತನಿಖೆಗೆ ಸುಪ್ರೀಂಕೋರ್ಟ್ ಮಹತ್ವದ ಆದೇಶ

ನವದೆಹಲಿ: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನವದೆಹಲಿಯಲ್ಲಿ ನಡೆದ ವಿಚಾರಣೆಯಲ್ಲಿ, ಹಲವು…

17 hours ago

ಕಾಡಾನೆ ದಾಳಿ: ವ್ಯಕ್ತಿ ಸಾವು

ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…

19 hours ago

ಗಣೇಶ ವಿಸರ್ಜನೆ ಮೆರವಣಿಗೆ ರಾಜಕೀಯ ದಾಳವಾಗದಿರಲಿ…

ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…

23 hours ago

ಕಾಂಗ್ರೆಸ್‌ನಲ್ಲೀಗ ಆತಂಕದ ಕಾರ್ಮೋಡ…

ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…

23 hours ago