ರಾಜ್ಯ

ಬರಿದಾಗಿರುವ ಬೊಕ್ಕಸ ತುಂಬಿಕೊಳ್ಳಲು ವಿದ್ಯುತ್‌ ಬಿಲ್‌ ದರ ಏರಿಕೆ: ಬಿ.ವೈ.ವಿಜಯೇಂದ್ರ

ಬೆಂಗಳೂರು: ರಾಜ್ಯ ಸರ್ಕಾರ ಬರಿದಾಗಿರುವ ಬೊಕ್ಕಸವನ್ನು ತುಂಬಿಕೊಳ್ಳಲು ವಿದ್ಯುತ್‌ ಬಿಲ್‌ ದರ ಏರಿಕೆ ಮಾಡಿ ಜನಸಾಮಾನ್ಯರ ಹಣವನ್ನು ಲೂಟಿ ಮಾಡಿ ಹಗಲು ದರೋಡೆ ಮಾಡಲು ಹೊರಟಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ನಿನ್ನೆಯಷ್ಟೇ ವಿದ್ಯುತ್ ಬಿಲ್ ದರ ಏರಿಕೆ ಮಾಡಿದ್ದ ಕಾಂಗ್ರೆಸ್ ಸರ್ಕಾರ ವಿದ್ಯುತ್ ಸ್ಮಾರ್ಟ್ ಮೀಟರ್ ಹೆಸರಿನಲ್ಲಿ 15,500 ಕೋಟಿ ರೂ. ಹಗರಣ ನಡೆಸುವ ಮೂಲಕ ಜನರ ಹಣ ಲೂಟಿ ಮಾಡಿರುವುದು ಬಯಲಾಗಿದೆ. ದೇಶದ ಇತರ ರಾಜ್ಯಗಳಲ್ಲಿ ಸ್ಮಾರ್ಟ್ ಮೀಟರ್ ಅಳವಡಿಕೆಗೆ 9,00 ರೂ. ಪಾವತಿಸಿದರೆ, ನಮ್ಮ ರಾಜ್ಯದಲ್ಲಿ ಮಾತ್ರ ಬರೋಬ್ಬರಿ 8,510 ರೂ. ದರ ನಿಗದಿ ಮಾಡಿರುವುದು ಹಗಲು ದರೋಡೆಯಲ್ಲದೇ ಬೇರೇನೂ ಅಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

ಬರಿದಾಗಿರುವ ಬೊಕ್ಕಸ ತುಂಬಿಸಿಕೊಳ್ಳಲು ಜನಸಾಮಾನ್ಯರ ಮೇಲೆ ಒಂದಿಲ್ಲೊಂದು ಬೆಲೆ ಏರಿಕೆಯ ಬರೆ ಎಳೆಯುತ್ತಿರುವ ರಾಜ್ಯ ಸರ್ಕಾರ ಸ್ಮಾರ್ಟ್ ಮೀಟರ್ ಅಳವಡಿಸುವುದನ್ನು ಕಡ್ಡಾಯಗೊಳಿಸಿ ಶೇ.400-800 ರಷ್ಟು ದರ ಏರಿಕೆ ಮಾಡಿರುವುದು ಗ್ಯಾರಂಟಿ ನಂಬಿ ಮತ ನೀಡಿದ ನಾಡಿನ ಜನರ ದುರ್ದೈವವೇ ಸರಿ ಎಂದು ಕಿಡಿಕಾರಿದ್ದಾರೆ.

ದಪ್ಪ ಚರ್ಮದ ಕಾಂಗ್ರೆಸ್‌ ಸರ್ಕಾರ ಲೂಟಿಕೋರತನ ನಿಲ್ಲಿಸಿ ವಿದ್ಯುತ್ ಸ್ಮಾರ್ಟ್ ಮೀಟರ್ ದರವನ್ನು ಈ ಹಿಂದಿನಂತೆಯೇ ನಿಗದಿಪಡಿಸದಿದ್ದರೆ ನಮ್ಮ ಬಜೆಪಿ ಪಕ್ಷ ನಾಡಿನ ಜನಸಾಮಾನ್ಯರ ಪರವಾಗಿ ಹೋರಾಟಕ್ಕಿಳಿಯಲಿದೆ ಎಂದು ಎಚ್ಚರಿಸಬಯಸುತ್ತೇನೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಕೊಪ್ಪಳದ ಗವಿಸಿದ್ದೇಶ್ವರ ಸ್ವಾಮಿಗಳಿಂದ ಈ ಬಾರಿ ದಸರಾ ಉದ್ಘಾಟನೆ

ಬೆಂಗಳೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026ಕ್ಕೆ ಈ ಬಾರಿ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಹಾಸಂಸ್ಥಾನ ಮಠದ ಪೀಠಾಧಿಪತಿಗಳಾದ ಶ್ರೀ…

10 hours ago

ಕಾಡಾನೆ ದಾಳಿಗೆ 75 ತೆಂಗಿನ ಮರ ನಾಶ: ಬೆಳೆ ಪರಿಹಾರಕ್ಕೆ ರೈತ ಕುಟುಂಬದ ಮನವಿ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಾಳ್ಯ ಗ್ರಾಮದಲ್ಲಿ ಕಾಡಾನೆಗಳ ನಿರಂತರ ದಾಳಿಯಿಂದ ಕಷ್ಟಪಟ್ಟು ಬೆಳೆದಿದ್ದ ತೆಂಗಿನ ಮರ ಸಂಪೂರ್ಣ ನಾಶವಾಗಿರುವುದರಿಂದ…

15 hours ago

ಅ.29ರಿಂದ ನ.11ರವರೆಗೆ ಹಾಸನಾಂಬಾ ಜಾತ್ರಾ ಮಹೋತ್ಸವ

ಹಾಸನ: ಹಾಸನದ ಅಧಿದೇವತೆ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವಕ್ಕೆ ದಿನಾಂಕ ನಿಗದಿಯಾಗಿದೆ. ಈ ಕುರಿತು ಹಾಸನ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಮಾಹಿತಿ…

16 hours ago

ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್ ನೀಡಿದ ಸುಪ್ರೀಂಕೋರ್ಟ್‌

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದ್ದು, CWMA ನೀಡಿರುವ ಆದೇಶವನ್ನು ಪಾಲಿಸುವಂತೆ ಸುಪ್ರೀಂಕೋರ್ಟ್‌ ಸೂಚನೆ ನೀಡಿದೆ.…

17 hours ago

ಕೋಟೆ ಟಿಎಪಿಸಿಎಂಎಸ್: ನಾಳೆ ಮೈತ್ರಿ ಪಕ್ಷದ 8 ಸದಸ್ಯರ ರಾಜೀನಾಮೆ ಭವಿಷ್ಯ ನಿರ್ಧಾರ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕು ಟಿಎಪಿಸಿಎಂಎಸ್‌ನ ಎಂಟು ಜನ ನಿರ್ದೇಶಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಅಂಗೀಕಾರ ಮಾಡಲು ಮತ್ತು…

17 hours ago

ಓದುಗರ ಪತ್ರ: ಸಿಗಲಿ ನ್ಯಾಯ!

ಸಿಗಲಿ ನ್ಯಾಯ! ಮರುಜೀವ ಬಂದಿದೆ ಹೊಸಬೆಳಕು ಮೂಡಿದೆ ಸುಪ್ರೀಂಕೋರ್ಟಿನ ಸೌಜನ್ಯಾ ಪ್ರಕರಣದ ಮರುತನಿಖೆಯ ಆದೇಶ! ಸಲಾಂ ಸುಪ್ರೀಂಗೆ! ನಡೆಯಲಿ ತನಿಖೆ…

23 hours ago