Mysore
28
clear sky

Social Media

ಗುರುವಾರ, 06 ಫೆಬ್ರವರಿ 2025
Light
Dark

ಮತ್ತೊಮ್ಮೆ ನಾನೇ ರಾಜ್ಯಾಧ್ಯಕ್ಷ ಆಗುತ್ತೇನೆಂಬ ವಿಶ್ವಾಸವಿದೆ: ಬಿ.ವೈ.ವಿಜಯೇಂದ್ರ

ಶಿವಮೊಗ್ಗ: ಜಿಲ್ಲಾಧ್ಯಕ್ಷ ಚುನಾವಣೆಗೂ ಪೈಪೋಟಿ ಇತ್ತು. ಇದೀಗ ರಾಜ್ಯಾಧ್ಯಕ್ಷ ಸ್ಥಾನಕ್ಕೂ ಅದೇರೀತಿ ಪೈಪೋಟಿ ಇದೆ. ಆದರೆ ಮತ್ತೊಮ್ಮೆ ನಾನೇ ರಾಜ್ಯಾಧ್ಯಕ್ಷನಾಗುತ್ತೆಂಬ ವಿಶ್ವಾಸವಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.

ಶಿವಮೊಗ್ಗದಲ್ಲಿ ಇಂದು(ಫೆಬ್ರವರಿ.3) ಬಿಜೆಪಿ ರಾಜ್ಯಾಧ್ಯಕ್ಷ ವಿಚಾರವಾಗಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಬಿಜೆಪಿಯಲ್ಲಿ ಆಂತರಿಕ ಪ್ರಜಾಪ್ರಭುತ್ವದ ವ್ಯವಸ್ಥೆ ಇದೆ. ಒಂದು ವಾರದ ಬಳಿಕ ಎಲ್ಲವೂ ಸರಿಯಾಗಲಿದೆ. ವ್ಯವಸ್ಥಿತವಾಗಿ ಸಂಘಟನೆ, ಚುನಾವಣೆ ನಡೆಯುವುದು ಬಿಜೆಪಿಯಲ್ಲಿ ಮಾತ್ರ. ಮಂಡಲ ಮಟ್ಟದಿಂದ ರಾಜ್ಯಮಟ್ಟದವರೆಗೂ ಚುನಾವಣೆ ನಡೆಯುತ್ತದೆ. ರಾಜ್ಯ, ರಾಷ್ಟ್ರೀಯ ಅಧ್ಯಕ್ಷರ ಚುನಾವಣೆ ವ್ಯವಸ್ಥಿತವಾಗಿ ನಡೆಯುತ್ತಿದೆ. ಪಕ್ಷದ ಕಾರ್ಯಕರ್ತರು ಹೋರಾಟ ಮಾಡಿಕೊಂಡು ಬಂದಿದ್ದಾರೆ ಎಂದರು.

ಇನ್ನೂ ನಮ್ಮ ಪಕ್ಷದಿಂದ ರಾಜ್ಯದಲ್ಲಿ ಕಾಂಗ್ರೆಸ್ ಭ್ರಷ್ಟ​ ಸರ್ಕಾರದ ವಿರುದ್ಧ ನಿರಂತರ ಹೋರಾಟ ಮಾಡುತ್ತಿದ್ದೇವೆ. ನಾನು ಅಧ್ಯಕ್ಷನಾಗಿ ಕೆಲಸ ಮಾಡಿದ ರೀತಿ ಕಾರ್ಯಕರ್ತರಿಗೆ ಗೊತ್ತಿದೆ. ಅಲ್ಲದೇ
ಎಲ್ಲವನ್ನು ಕೇಂದ್ರದ ವರಿಷ್ಠರು ಗಮನಿಸುತ್ತಿದ್ದು, ಎಲ್ಲವೂ ಒಳ್ಳೆಯದಾಗುತ್ತದೆ ಎಂಬ ವಿಶ್ವಾಸವಿದೆ. ಹೀಗಾಗಿ
ನಾನು ಮತ್ತೆ ಬಿಜೆಪಿ ರಾಜ್ಯಾಧ್ಯಕ್ಷನಾಗುತ್ತೇನೆಂಬ ಪೂರ್ಣ ವಿಶ್ವಾಸವಿದೆ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಂದ ಪಕ್ಷಕ್ಕೆ ಡ್ಯಾಮೇಜ್‌ ಆಗಿದೆ ಎಂಬ ಬಗ್ಗೆ ಮಾತನಾಡಿದ ಅವರು, ಅವರಿಂದ ಪಕ್ಷಕ್ಕೆ ಡ್ಯಾಮೇಜ್ ಏನು ಡ್ಯಾಮೇಜ್‌ ಆಗಬೇಕೋ ಆಗೋಗಿದೆ. ಆದರೆ ನಾನು ಕಳೆದ ವರ್ಷದಿಂದ ಯಾರ ವಿರುದ್ಧವಾಗಲಿ ಅಥವಾ ಪಕ್ಷದ ವಿರುದ್ಧವಾಗಲಿ ಬಹಿರಂಗ ಹೇಳಿಕೆ ನೀಡಿಲ್ಲ. ನನಗೆ ಪಕ್ಷದ ರಾಜ್ಯಾಧ್ಯಕ್ಷನಾಗಿ ನನ್ನ ಕರ್ತವ್ಯದ ಬಗ್ಗೆ ಅರಿವಿದೆ. ಕಳೆದ ಒಂದು ವರ್ಷದಿಂದ ದೊಡ್ಡ ಜವಾಬ್ದಾರಿಯನ್ನು ನಿರ್ವಹಿಸುತ್ತಾ ಬಂದಿದ್ದೇನೆ ಎಂದು ತಿಳಿಸಿದರು.

Tags: