ಬೆಂಗಳೂರು: ದಕ್ಷ ಹಾಗೂ ಸದೃಢ ಆಡಳಿತವಿದ್ದರೆ ಅಸಾಧ್ಯವೂ ಸಾಧ್ಯ ಎಂಬುದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಬಿಎಸ್‌ಎನ್‌ಎಲ್‌ಗೆ ಮಹತ್ವದ ತಿರುವು ಸಿಕ್ಕಿ ಸೇವಾ ವಿಸ್ತರಣೆಯೊಂದಿಗೆ ಚಂದಾದಾರರ ಸಂಖ್ಯೆಯೂ ಹೆಚ್ಚಳವಾಗಿರುವುದೇ ಕಾರಣವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೆಂದ್ರ ತಿಳಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಪ್ರಧಾನಿ ನರೇಂದ್ರ ಮೋದಿ ಅವರ ಸದೃಢ ನಾಯಕತ್ವದಲ್ಲಿ BSNL ಐತಿಹಾಸಿಕ ತಿರುವು ಪಡೆದಿರುವುದು ಹೆಮ್ಮೆಯ ಸಂಗತಿ. BSNL ಸಂಸ್ಥೆಯನ್ನು ಲಾಭದಾಯಕ ಹಾದಿಗೆ ಕೊಂಡೊಯ್ಯಲೇಬೇಕೆಂಬ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿ ಜೀ ಅವರ ಸರ್ಕಾರ ಸಂಕಲ್ಪ ತೊಟ್ಟು BSNLನ ಆರ್ಥಿಕ ಸ್ಥಿತಿಯನ್ನು ಬಲಪಡಿಸಲು 1.64 ಲಕ್ಷ ಕೋಟಿ ರೂ. ಪುನಶ್ಚೇತನ ಪ್ಯಾಕೇಜ್ ನೀಡಿದ್ದರು ಎಂದು ಮಾಹಿತಿ ನೀಡಿದ್ದಾರೆ.
ರಾಷ್ಟ್ರವ್ಯಾಪಿ 4G ರೋಲ್‌ಔಟ್‌ಗಾಗಿ 44,993 ಕೋಟಿ ರೂ. ಸ್ಪೆಕ್ಟ್ರಮ್ ಹಂಚಿಕೆ ಮಾಡಲಾಗಿತ್ತು, ಆತ್ಮನಿರ್ಭರ ಭಾರತ ದೃಷ್ಟಿಗೆ ಅನುಗುಣವಾಗಿ ಸ್ವದೇಶಿ 4G ನಿಯೋಜನೆ ಮಾಡುವ ಮೂಲಕ 40,399 ಕೋಟಿ ರೂ.ಗಳ ಸಾಲ ನೀಡಿ, ಫೈಬರ್ ನೆಟ್‌ವರ್ಕ್ ಮತ್ತು ಗ್ರಾಮೀಣ ಸಂಪರ್ಕವನ್ನು ವಿಸ್ತರಿಸಲು BBNL ನೊಂದಿಗೆ ವಿಲೀನ ಮಾಡಿದ ಪರಿಣಾಮವಾಗಿ ಇಂದು ಬಿಎಸ್ಎನ್ಎಲ್ ತನ್ನ ಯಶೋಗಾಥೆ ಆರಂಭಿಸುವಂತಾಗಿದೆ. ಕಾಂಗ್ರೆಸ್ ಆಡಳಿತದಲ್ಲಿ ಮುಳುಗುತ್ತಿದ್ದ BSNL ಸಂಸ್ಥೆ NDA ಸರ್ಕಾರದ ಅವಧಿಯಲ್ಲಿ ಪುಟಿದೇಳುತ್ತಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.
ಚಾಮರಾಜನಗರ: ಚಾ.ನಗರ-ನಂಜನಗೂಡು ಹೆದ್ದಾರಿಯಲ್ಲಿರುವ ಪಣ್ಯದಹುಂಡಿ ಬಳಿ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಸ್ವಾಧಿನಪಡಿಸಿಕೊಂಡಿರುವ ಭೂಮಿಯ ದರ ನಿಗದಿ ಕಗ್ಗಂಟಿನ ವಿಚಾರ ಅಂತಿಮ…
ಮೈಸೂರು: ಪ್ರಸಿದ್ಧ ಯಾತ್ರಾ ಸ್ಥಳ ಚಾಮುಂಡಿ ಬೆಟ್ಟದ ಸಮಗ್ರ ಅಭಿವೃದ್ಧಿ ಕಾಮಗಾರಿಯು ಕೇಂದ್ರ ಸರ್ಕಾರದ ಪ್ರಸಾದ ಯೋಜನೆಯಡಿ ಜನವರಿ ಮೊದಲ…
ಗಿರೀಶ್ ಹುಣಸೂರು ಬಿಡಿ ಮೊಟ್ಟೆಗೆ ೭.೫೦ ರೂ.; ರಫ್ತು ಹೆಚ್ಚಳದಿಂದ ಭಾರೀ ಹೊಡೆತ ಮೈಸೂರು: ಮಾಗಿ ಚಳಿಗಾಲ ಆರಂಭ, ಚಂಡಮಾರುತದಿಂದ ಹವಾಮಾನ…
ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…
ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…