ರಾಜ್ಯ

ದಕ್ಷ, ಸದೃಢ ಆಡಳಿತವಿದ್ದರೆ ಅಸಾಧ್ಯವೂ ಸಾಧ್ಯ: ಬಿ.ವೈ.ವಿಜಯೇಂದ್ರ

ಬೆಂಗಳೂರು: ದಕ್ಷ ಹಾಗೂ ಸದೃಢ ಆಡಳಿತವಿದ್ದರೆ ಅಸಾಧ್ಯವೂ ಸಾಧ್ಯ ಎಂಬುದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಬಿಎಸ್‌ಎನ್‌ಎಲ್‌ಗೆ ಮಹತ್ವದ ತಿರುವು ಸಿಕ್ಕಿ ಸೇವಾ ವಿಸ್ತರಣೆಯೊಂದಿಗೆ ಚಂದಾದಾರರ ಸಂಖ್ಯೆಯೂ ಹೆಚ್ಚಳವಾಗಿರುವುದೇ ಕಾರಣವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೆಂದ್ರ ತಿಳಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಪ್ರಧಾನಿ ನರೇಂದ್ರ ಮೋದಿ ಅವರ ಸದೃಢ ನಾಯಕತ್ವದಲ್ಲಿ BSNL ಐತಿಹಾಸಿಕ ತಿರುವು ಪಡೆದಿರುವುದು ಹೆಮ್ಮೆಯ ಸಂಗತಿ. BSNL ಸಂಸ್ಥೆಯನ್ನು ಲಾಭದಾಯಕ ಹಾದಿಗೆ ಕೊಂಡೊಯ್ಯಲೇಬೇಕೆಂಬ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿ ಜೀ ಅವರ ಸರ್ಕಾರ ಸಂಕಲ್ಪ ತೊಟ್ಟು BSNLನ ಆರ್ಥಿಕ ಸ್ಥಿತಿಯನ್ನು ಬಲಪಡಿಸಲು 1.64 ಲಕ್ಷ ಕೋಟಿ ರೂ. ಪುನಶ್ಚೇತನ ಪ್ಯಾಕೇಜ್ ನೀಡಿದ್ದರು ಎಂದು ಮಾಹಿತಿ ನೀಡಿದ್ದಾರೆ.

ರಾಷ್ಟ್ರವ್ಯಾಪಿ 4G ರೋಲ್‌ಔಟ್‌ಗಾಗಿ 44,993 ಕೋಟಿ ರೂ. ಸ್ಪೆಕ್ಟ್ರಮ್ ಹಂಚಿಕೆ ಮಾಡಲಾಗಿತ್ತು, ಆತ್ಮನಿರ್ಭರ ಭಾರತ ದೃಷ್ಟಿಗೆ ಅನುಗುಣವಾಗಿ ಸ್ವದೇಶಿ 4G ನಿಯೋಜನೆ ಮಾಡುವ ಮೂಲಕ 40,399 ಕೋಟಿ ರೂ.ಗಳ ಸಾಲ ನೀಡಿ, ಫೈಬರ್ ನೆಟ್‌ವರ್ಕ್ ಮತ್ತು ಗ್ರಾಮೀಣ ಸಂಪರ್ಕವನ್ನು ವಿಸ್ತರಿಸಲು BBNL ನೊಂದಿಗೆ ವಿಲೀನ ಮಾಡಿದ ಪರಿಣಾಮವಾಗಿ ಇಂದು ಬಿಎಸ್ಎನ್ಎಲ್ ತನ್ನ ಯಶೋಗಾಥೆ ಆರಂಭಿಸುವಂತಾಗಿದೆ. ಕಾಂಗ್ರೆಸ್ ಆಡಳಿತದಲ್ಲಿ ಮುಳುಗುತ್ತಿದ್ದ BSNL ಸಂಸ್ಥೆ NDA ಸರ್ಕಾರದ ಅವಧಿಯಲ್ಲಿ ಪುಟಿದೇಳುತ್ತಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ತಿರುವಿನಲ್ಲಿ ಉರುಳಿಬಿದ್ದ ಲಾರಿ: ತಪ್ಪಿದ ಭಾರೀ ಅನಾಹುತ

ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…

6 hours ago

ದುಬಾರೆ ಆನೆ ಶಿಬಿರದಲ್ಲಿ19 ವರ್ಷದ ಗಂಡಾನೆ ಸಾವು

ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…

7 hours ago

ಪ್ರೀತಿಗೆ ನಿರಾಕರಣೆ: ಮೈಸೂರಿನಲ್ಲಿ ಬೆಚ್ಚಿಬೀಳಿಸಿದ ಒನ್‌ ಸೈಡ್‌ ಲವ್‌ ಕೃತ್ಯ

ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…

8 hours ago

ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣ: ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಅಧ್ಯಕ್ಷ ಶಿವಕುಮಾರ್ ಅರೆಸ್ಟ್​!

ಮಂಡ್ಯ: ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…

10 hours ago

ಭಾರೀ ಮಳೆಗೆ ರೈತರ ಬೆಳೆ ನಾಶ: ಲಕ್ಷಾಂತರ ರೂ. ನಷ್ಟ, ಮನೆ ಗೋಡೆ ಕುಸಿತ

ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…

10 hours ago

ಸ್ಕೂಲ್ ಬಸ್‌ ಹರಿದು ಒಂದೂವರೆ ವರ್ಷದ ಮಗು ಸಾವು

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…

11 hours ago