ಬೆಂಗಳೂರು: ನಮ್ಮ ರಾಜ್ಯದಲ್ಲಿರುವುದು ಕಾಂಗ್ರೆಸ್ ಸರ್ಕಾರವಲ್ಲ, ಬೆಲೆ ಏರಿಕೆ ಸರ್ಕಾರ ಎಂದು ಬಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಲೇವಡಿಸಿದ್ದಾರೆ.
ವಿಧಾನಸೌಧದ ಆವರಣದಲ್ಲಿ ಇಂದು(ಮಾರ್ಚ್.5) ವಿದ್ಯುತ್ ಮೀಟರ್ ದರ ಏರಿಕೆ ವಿಚಾರದ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಈ ರಾಜ್ಯದಲ್ಲಿ ಬೆಲೆ ಏರಿಕೆ ಮಾಡುವ ಸರ್ಕಾರವಿದೆ. ಹಾಗಾಗಿಯೇ ಪ್ರತಿನಿತ್ಯ ಬಳಸುವ ಎಲ್ಲಾ ವಸ್ತುಗಳ ಮೇಲೆ ಬೆಲೆಗಳು ಏರಿಕೆ ಆಗುತ್ತಿವೆ. ಅವುಗಳಲ್ಲಿ ಹಾಲು ಮತ್ತು ವಿದ್ಯುತ್ ಮೀಟರ್ ಬೆಲೆ ಏರಿಕೆ ಮಾಡಿರುವುದರಿಂದ ರಾಜ್ಯದ ಜನತೆಗೆ ಹೊರೆಯಾಗುತ್ತಿದೆ ಎಂದು ಕಿಡಿಕಾರಿದರು.
ಸಿಎಂ ಸಿದ್ದರಾಮಯ್ಯ ಅವರು ನಿಜವಾಗಿಯೂ ಅಹಿಂದ ನಾಯಕೇ ಆಗಿದ್ದರೇ ಹಿಂದುಳಿದ ವರ್ಗಗಳ ಅಭಿವೃದ್ಧಿ ಮಾಡಲಿ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಕಳೆದ 20 ತಿಂಗಳಿನಿಂದ ಯಾವುದೇ ಅಭಿವೃಧ್ಧಿ ಕಾಮಗಾರಿಗೆ ಚಾಲನೆ ನೀಡಿಲ್ಲ. ಅಲ್ಲದೇ ಸರ್ಕಾರಕ್ಕೆ ತಮ್ಮ ಪಕ್ಷದ ಶಾಸಕರಿಗೆ ಅನುದಾನ ನೀಡಲು ಸಾಧ್ಯವಾಗುತ್ತಿಲ್ಲ. ಎಸ್‌ಸಿ ಮತ್ತು ಎಸ್‌ಟಿ ಅವರಿಗೆ ಟೆಂಡ್‌ಗೆ ಮೀಸಲಾತ ನೀಡಿದ್ದಾರೆ. ಆದರೆ ಎಲ್ಲಿ ಕೆಲಸದ ಟೆಂಡರ್ ಕರೆದಿದ್ದಾರೆ? ಇನ್ನು ಈ ಮಧ್ಯೆ ಮುಸಲ್ಮಾನರಿಗೆ ಶೇ.4 ರಷ್ಟು ಮೀಸಲಾತಿ ನೀಡಲು ಮುಂದಾಗಿದ್ದಾರೆ ಎಂದು ವಾಗ್ದಾಳಿ ನಡೆಸಿದರು.





