ರಾಜ್ಯ

ರಾಜ್ಯದಲ್ಲಿರುವುದು ಕಾಂಗ್ರೆಸ್‌ ಸರ್ಕಾರವಲ್ಲ, ಬೆಲೆ ಏರಿಕೆ ಸರ್ಕಾರ: ಬಿ.ವೈ.ವಿಜಯೇಂದ್ರ

ಬೆಂಗಳೂರು: ನಮ್ಮ ರಾಜ್ಯದಲ್ಲಿರುವುದು ಕಾಂಗ್ರೆಸ್‌ ಸರ್ಕಾರವಲ್ಲ, ಬೆಲೆ ಏರಿಕೆ ಸರ್ಕಾರ ಎಂದು ಬಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಲೇವಡಿಸಿದ್ದಾರೆ.

ವಿಧಾನಸೌಧದ ಆವರಣದಲ್ಲಿ ಇಂದು(ಮಾರ್ಚ್‌.5) ವಿದ್ಯುತ್ ಮೀಟರ್ ದರ ಏರಿಕೆ ವಿಚಾರದ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಈ ರಾಜ್ಯದಲ್ಲಿ ಬೆಲೆ ಏರಿಕೆ ಮಾಡುವ ಸರ್ಕಾರವಿದೆ. ಹಾಗಾಗಿಯೇ ಪ್ರತಿನಿತ್ಯ ಬಳಸುವ ಎಲ್ಲಾ ವಸ್ತುಗಳ ಮೇಲೆ ಬೆಲೆಗಳು ಏರಿಕೆ ಆಗುತ್ತಿವೆ. ಅವುಗಳಲ್ಲಿ ಹಾಲು ಮತ್ತು ವಿದ್ಯುತ್‌ ಮೀಟರ್‌ ಬೆಲೆ ಏರಿಕೆ ಮಾಡಿರುವುದರಿಂದ ರಾಜ್ಯದ ಜನತೆಗೆ ಹೊರೆಯಾಗುತ್ತಿದೆ ಎಂದು ಕಿಡಿಕಾರಿದರು.

ಸಿಎಂ ಸಿದ್ದರಾಮಯ್ಯ ಅವರು ನಿಜವಾಗಿಯೂ ಅಹಿಂದ ನಾಯಕೇ ಆಗಿದ್ದರೇ ಹಿಂದುಳಿದ ವರ್ಗಗಳ ಅಭಿವೃದ್ಧಿ ಮಾಡಲಿ. ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಕಳೆದ 20 ತಿಂಗಳಿನಿಂದ ಯಾವುದೇ ಅಭಿವೃಧ್ಧಿ ಕಾಮಗಾರಿಗೆ ಚಾಲನೆ ನೀಡಿಲ್ಲ. ಅಲ್ಲದೇ ಸರ್ಕಾರಕ್ಕೆ ತಮ್ಮ ಪಕ್ಷದ ಶಾಸಕರಿಗೆ ಅನುದಾನ ನೀಡಲು ಸಾಧ್ಯವಾಗುತ್ತಿಲ್ಲ. ಎಸ್‌ಸಿ ಮತ್ತು ಎಸ್‌ಟಿ ಅವರಿಗೆ ಟೆಂಡ್‌ಗೆ ಮೀಸಲಾತ ನೀಡಿದ್ದಾರೆ. ಆದರೆ ಎಲ್ಲಿ ಕೆಲಸದ ಟೆಂಡರ್‌ ಕರೆದಿದ್ದಾರೆ? ಇನ್ನು ಈ ಮಧ್ಯೆ ಮುಸಲ್ಮಾನರಿಗೆ ಶೇ.4 ರಷ್ಟು ಮೀಸಲಾತಿ ನೀಡಲು ಮುಂದಾಗಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಅರ್ಚನ ಎಸ್‌ ಎಸ್

Recent Posts

ಓದುಗರ ಪತ್ರ: ಐತಿಹಾಸಿಕ ಸಂಗತಿ!

ಐತಿಹಾಸಿಕ ಸಂಗತಿ! ಸರ್ಕಾರದ ನಿರ್ದೇಶನದ ಮೇರೆಗೆ ಬೆಳಗಾವಿ ನಗರಪಾಲಿಕೆ ‘ಗಡಿ ವಿಷಯದಲ್ಲಿ ಮಹಾಜನ್ ವರದಿಯೇ ಅಂತಿಮ’ಎಂಬ ನಿರ್ಣಯ ಅಂಗೀಕರಿಸಿರುವುದು ಐತಿಹಾಸಿಕ…

3 hours ago

ಓದುಗರ ಪತ್ರ: ಟ್ರಾಫಿಕ್ ದಂಡ: ಸುಪ್ರೀಂ ಸಲಹೆ ಸ್ವಾಗತಾರ್ಹ

ಟ್ರಾಫಿಕ್ ನಿಯಮ ಉಲ್ಲಂಘಿಸಿ ದಂಡ ಪಾವತಿಸದೆ ಬಾಕಿ ಉಳಿಸಿಕೊಂಡಿರುವವರಿಂದ ಹಣ ವಸೂಲಿ ಮಾಡಲು, ಆ ದಂಡದ ಮೊತ್ತವನ್ನು ಅವರ ಮನೆ…

3 hours ago

ಓದುಗರ ಪತ್ರ: ಆಕಾಶದಲ್ಲಿ ಶೌರ‍್ಯಪ್ರದರ್ಶನಕ್ಕೊಂದು ಸಲಾಂ

ತನ್ನ ಪ್ರಾಣವನ್ನೇ ಒತ್ತೆಯಿಟ್ಟು ದುಬೈನಿಂದ ಇಸ್ರೇಲ್‌ನ ಅವೀವ್‌ಗೆ ತೆರಳುತ್ತಿದ್ದ -ದುಬೈ ವಿಮಾನ ಹೈಜಾಕ್ ತಪ್ಪಿಸಿದ ಭಾರತೀಯ ಪೈಲಟ್ ಕ್ಯಾಪ್ಟನ್ ಸ್ಮಿತ್…

3 hours ago

ಬ್ರೇಕ್ ಕಿತ್ತ ಬಸ್ಸಿನಲ್ಲಿ ಇಳಿಜಾರಿನಲ್ಲಿ ಸಾಗುತ್ತಿದ್ದೇವೆ…

ಡಾ . ಚೇತನ ಗುರುರಾಜು, ಮುಖ್ಯ ಶಿಕ್ಷಕಿ, ಅರಿವು ವಿದ್ಯಾಸಂಸ್ಥೆ, ಮೈಸೂರು  ಸಾಮಾಜಿಕ ಮಾಧ್ಯಮಗಳ ಬಲೆಗೆ ಸಿಲುಕಿವೆ ಹಲವು ದೇಶಗಳು…

3 hours ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಸ್ವಾವಲಂಬನೆಯ ಸಂಕೇತ ಮಹಾತ್ಮ ಗಾಂಧೀಜಿ ಮಹಾತ್ಮ ಗಾಂಧೀಜಿ ಅವರು ಭಾರತದ ಸ್ವಾತಂತ್ರ್ಯ ಹೋರಾಟದ ಮಹಾನ್ ನಾಯಕ ಹಾಗೂ ರಾಷ್ಟ್ರಪಿತ ಎಂದು…

3 hours ago

ಜಗದ ಸೌಹಾರ್ದ ನದಿ ಗಾಂಧಿ

ಪರಶುರಾಮ್, ನಿರ್ದೇಶಕರು, ಒಡನಾಡಿ ಸೇವಾ ಸಂಸ್ಥೆ ಗಾಂಧಿ ವಿಚಾರಗಳನ್ನು ಸಂವಾದದ ಮೂಲಕ ಮುನ್ನಡೆಸಲು ಸಾಧ್ಯವೇ? ಅಥವಾ ಅನುಸರಿಸಲು ಸಾಧ್ಯವಾಗದಿರುವ ನಡೆಯನ್ನು…

3 hours ago