ಬೆಂಗಳೂರು: ಭ್ರಷ್ಟ ರಾಜ್ಯ ಸರ್ಕಾರದ ವಿರುದ್ಧ ಇಂದಿನಿಂದ ಜನಾಕ್ರೋಶ ಯಾತ್ರೆ ಮಾಡುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಇಂದು(ಏಪ್ರಿಲ್.7) ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಜನಾಂದೋಲನಕ್ಕೆ ಇಂದು ಮೈಸೂರಿನಲ್ಲಿ ಚಾಲನೆ ನೀಡಿದ್ದಾರೆ. ಈ ಜನಾಕ್ರೋಶ ಯಾತ್ರೆ ಒಟ್ಟು ನಾಲ್ಕು ಹಂತಗಳಲ್ಲಿ ಹೋರಾಟ ನಡೆಸುತ್ತೇವೆ. ಮೊದಲ ಹಂತವಾಗಿರುವ ಇಂದಿನ ದಿನ ಮೈಸೂರು, ಕೊಡಗು ಮತ್ತು ಮಂಡ್ಯ ಮಾಡಲಾಗುತ್ತದೆ ಎಂದು ಹೇಳಿದರು.
ಕಾಂಗ್ರೆಸ್ ಸರ್ಕಾರದ ಬೆಲೆ ಏರಿಕೆ, ತುಷ್ಟೀಕರಣ, ದಲಿತರಿಗೆ ಮೀಸಲಿದ್ದ ಅನುದಾನ ದುರ್ಬಳಕೆಯನ್ನು ಖಂಡಿಸಿ ರಾಜ್ಯಾದ್ಯಂತ ಜನಾಕ್ರೋಶ ಯಾತ್ರೆ ಮಾಡಲಾಗುವುದು. ನಾವು ಈ ಹೋರಾಟವನ್ನು ಜನಪರ ಹಿತಕ್ಕಾಗಿ ಮಾಡುತ್ತಿದ್ದೇವೆ. ಅಲ್ಲದೇ ನಮ್ಮ ಪಕ್ಷ ಚುನಾವಣೆ ಇಲ್ಲದಿದ್ದರು ಮಾಡುತ್ತಿದೆ. ಆದರೆ ಕಾಂಗ್ರೆಸ್ ಪಕ್ಷ ಚುನಾವಣೆ ಸಂದರ್ಭಗಳಲ್ಲಿ ಮಾತ್ರ ಮಾಡುತ್ತದೆ ಎಂದು ವಾಗ್ದಾಳಿ ನಡೆಸಿದರು.





