ಬೆಂಗಳೂರು: ಕೆಪಿಎಸ್‌ಸಿಯೂ ಕೆಎಎಸ್ ಪೂರ್ವಭಾವಿ ಪರೀಕ್ಷೆಯಲ್ಲಿ ಅಕ್ರಮ ನಡೆದಿದ್ದು, ರಾಜ್ಯ ಸರ್ಕಾರ ಅದನ್ನು ತಡೆಯಲು ಸಂಪೂರ್ಣ ವಿಫಲವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದ್ದಾರೆ.
ಈ ಕುರಿತು ಸಾಮಾಜಿಕ ಮಾಧ್ಯಮ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ದೇಶಾದ್ಯಂತ ತನ್ನ ಯಡವಟ್ಟುಗಳಿಂದಲೇ ಚರ್ಚೆಯಲ್ಲಿರುವ KPSCಯ ಅಕ್ರಮಗಳು ದಿನದಿಂದ ದಿನಕ್ಕೆ ಹೊಸ ತಿರುವು ಪಡೆದುಕೊಂಡು ಬಯಲಾಗುತ್ತಿವೆ. ಲಕ್ಷಾಂತರ ಉದ್ಯೋಗ ಆಕಾಂಕ್ಷಿಗಳಿಗೆ ಪ್ರತಿಯೊಂದು ಪರೀಕ್ಷೆಗಳಲ್ಲೂ ಗೊಂದಲಗಳನ್ನು ಸೃಷ್ಟಿಸಿ ಅಕ್ರಮಗಳ ಮೂಲಕ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯುವ ಮುನ್ನವೂ ಗೊಂದಲ ಸೃಷ್ಟಿಸಿ, ಪರೀಕ್ಷೆಯ ನಂತರವೂ ಸಂಕಟ ತಂದೊಡ್ಡಿತ್ತು. ಇದೀಗ KPSCಯ ಭಾರಿ ಅಕ್ರಮ ಬಯಲಾಗುವ ಮೂಲಕ ಉದ್ಯೋಗದಾತ ಸಂಸ್ಥೆಯ ಹುಳುಕು ಸರಿಪಡಿಸುವಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರವೂ ಸಂಪೂರ್ಣ ವಿಫಲವಾಗಿದೆ ಎಂದು ಕಿಡಿಕಾರಿದ್ದಾರೆ.
ಕರ್ನಾಟಕದ ಆಡಳಿತದಲ್ಲಿ ದಕ್ಷತೆ ತುಂಬಬೇಕಾದ ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನು ಆಯ್ಕೆ ಮಾಡಬೇಕಾದ ಕರ್ನಾಟಕ ಲೋಕಸೇವಾ ಆಯೋಗದ ವ್ಯವಸ್ಥೆಗೆ ಅಕ್ರಮಗಳ ಸುರುಳಿ ಸುತ್ತಿಕೊಂಡಿರುವಾಗ ಉದ್ಯೋಗಾಕಾಂಕ್ಷಿತ ರಾಜ್ಯದ ಅಭ್ಯರ್ಥಿಗಳಿಗೆ ನ್ಯಾಯ ಸಿಗುವುದಾದರೂ ಹೇಗೆ ಎಂಬ ಪ್ರಶ್ನೆ ಉದ್ಭವಿಸಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.
ರಾಜ್ಯದಲ್ಲಿರುವ ದಪ್ಪಚರ್ಮದ ಹಾಗೂ ಭ್ರಷ್ಟಾಚಾರದ ಕಪ್ಪುಮಸಿ ಅಂಟಿಸಿಕೊಂಡಿರುವ ರಾಜ್ಯ ಸರ್ಕಾರ ಈಗಲಾದರೂ ಎಚ್ಚೆತ್ತುಕೊಂಡು ಅಕ್ರಮವೆಸಗಿದವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಂಡು ಲಕ್ಷಾಂತರ ಪ್ರತಿಭಾವಂತ ಉದ್ಯೋಗಾಕಾಂಕ್ಷಿಗಳಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ನ್ಯಾಯಯುತ ಮಾರ್ಗದೆಡೆಗೆ ಹೆಜ್ಜೆ ಹಾಕಲಿ ಎಂದು ಎಚ್ಚರಿಸುತ್ತೇನೆ ಎಂದು ತಿಳಿಸಿದ್ದಾರೆ.
ಬೆಳಗಾವಿ : ಸರ್ಕಾರ ರಾಜ್ಯದಲ್ಲಿ 2022ರಲ್ಲಿ ಒಟ್ಟು 3,30,000 ಹೆಕ್ಟೇರ್ ಪರಿಭಾವಿತ (ಡೀಮ್ಡ್) ಅರಣ್ಯ ಪ್ರದೇಶ ಇರುವುದಾಗಿ ಸರ್ವೋಚ್ಛ ನ್ಯಾಯಾಲಯಕ್ಕೆ…
ಬೆಂಗಳೂರು : ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್ ಹುದ್ದೆಗಳಿಗೆ ಪಾರದರ್ಶಕವಾಗಿ ಕೌನ್ಸೆಲಿಂಗ್ ನಡೆಸಿ ಕರ್ನಾಟಕ ವಿದ್ಯುತ್ ಪ್ರಸರಣ…
ಬೆಳಗಾವಿ : ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡುವ ದಿಸೆಯಲ್ಲಿ ಅರಣ್ಯ ಇಲಾಖೆಯಲ್ಲಿ ಶೇ. 3 ಪೊಲೀಸ್ ಇಲಾಖೆಯಲ್ಲಿ ಶೇ.3 ಹಾಗೂ ವಿವಿಧ…
ಬೆಳಗಾವಿ : ಆರ್ಥಿಕ ಇಲಾಖೆಯ ಅನುಮತಿ ಪಡೆದು ಖಾಲಿ ಹುದ್ದೆಗಳನ್ನು ಹಂತಹಂತವಾಗಿ ಭರ್ತಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.…
ಭಾರತೀಯ ಜಲಪ್ರದೇಶದಲ್ಲಿ ಅಕ್ರಮ ಮೀನುಗಾರಿಕೆಗಾಗಿ ಭಾರತೀಯ ಕೋಸ್ಟ್ ಗಾರ್ಡ್ ಪಾಕಿಸ್ತಾನಿ ದೋಣಿಯನ್ನು ವಶಪಡಿಸಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಂಧಿತ ವ್ಯಕ್ತಿಗಳನ್ನು…
ಮೈಸೂರು : ಡಿಸೆಂಬರ್ 21 ರಂದು ಜಿಲ್ಲೆಯಾದ್ಯಂತ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. 5 ವರ್ಷದೊಳಗಿನ ಪ್ರತಿ ಮಗುವಿಗೆ…