ಮಂಡ್ಯ: ಸಿಎಂ ಸಿದ್ದರಾಮಯ್ಯ ಅವರು ಈ ಬಾರಿ ಮಂಡನೆ ಮಾಡಲಿರುವ ಬಜೆಟ್ ರೈತರ ಪರವಾಗಿ ಬಜೆಟ್ ಮಂಡನೆ ಮಾಡಬೇಕು ಎಂದು ಒತ್ತಾಯಿಸಿದರು.
ಜಿಲ್ಲೆಯ ಕೊತ್ತತ್ತಿ ಗ್ರಾಮದ ಜಮೀನಿನಲ್ಲಿ ಇಂದು(ಮಾರ್ಚ್.4) ಭತ್ತ ನಾಟಿದ ಬಳಿಕ ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಯಾವುದೇ ರೈತಪರ ಅಭಿವೃದ್ಧಿ ಕಾರ್ಯಗಳಾಗಲಿ ಅಥವಾ ತೀರ್ಮಾನಗಳನ್ನು ಮಾಡಿಲ್ಲ. ಹೀಗಾಗಿ ರಾಜ್ಯ ಸರ್ಕಾರಕ್ಕೆ ರೈತರ ಸಂಕಷ್ಟಕ್ಕೆ ಸ್ಪಂದಿಸುವ ಉತ್ತಮ ಬುದ್ಧಿಯನ್ನು ತಾಯಿ ಚಾಮುಂಡೇಶ್ವರಿ ದೇವಿ ಕರುಣಿಸಲಿ ಎಂದು ಹೇಳಿದರು.
ಕಾಂಗ್ರೆಸ್ ಸರ್ಕಾರ ರಾಜ್ಯದ ಜನತೆಗೆ ಒಂದು ಕಡೆ ಗ್ಯಾರಂಟಿ ನೀಡುವುದಾಗಿ ಹೇಳುತ್ತಾರೆ. ಇನ್ನೊಂದು ಕಡೆ ಕಿತ್ತುಕೊಳ್ಳುವ ಕೆಲಸ ನಡೆಸುತ್ತಿದ್ದಾರೆ. ಇದು ಬಡವರ ವಿರೋಧಿ ಸರ್ಕಾರವಾಗಿದೆ. ಅಲ್ಲದೇ ಈ ಸರ್ಕಾರದ ಅಭಿವೃದ್ಧಿ ಶೂನ್ಯವಾಗಿದೆ ಎಂದು ವಾಗ್ದಾಳಿ ನಡೆಸಿದರು.
ಇನ್ನು ಈ ಬಾರಿ ವಿಧಾನಸೌಧದಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ನಮ್ಮ ಇಜೆಪಿ ಪಕ್ಷ ಭಷ್ಟ್ರ ಕಾಂಗ್ರೆಸ್ ಸರ್ಕಾರದ ಕಿವಿ ಹಿಂಡುವ ಕೆಲಸ ಮಾಡಲಿದೆ. ಜೊತೆಗೆ ಕಾಂಗ್ರೆಸ್ ಸರ್ಕಾರದ ದುರಾಡಳಿತ ಮತ್ತು ನಿಜ ಬಣ್ಣವನ್ನು ರಾಜ್ಯದ ಜನರ ಮುಂದೆ ಬಿಚ್ಚಿಡಲಿದ್ದೇವೆ ಎಂದರು.
ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…
ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…
ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…
ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…
ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…