ಬೆಂಗಳೂರು: ಕಾಂಗ್ರೆಸ್ ಸರ್ಕಾರ ರಾಜ್ಯದ ಜನಸಾಮಾನ್ಯರ ಮೇಲೆ ಬೆಲೆ ಏರಿಕೆಯ ಬರೆ ಮುಂದುವರೆಸಿದ್ದು, ಹಾಲಿನ ದರ 4 ರೂ. ಹೆಚ್ಚಳ ಮಾಡಿ ಜನಸಾಮಾನ್ಯರ ಜೇಬಿಗೆ ಕತ್ತರಿ ಪ್ರಯೋಗ ಮಾಡುತ್ತಿರುವ ನಿರ್ಧಾರ ಹಗಲು ದರೋಡೆಯಲ್ಲದೇ ಬೇರೇನೂ ಅಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಪಂಚ ಭಾಗ್ಯಗಳನ್ನು ನಿರ್ವಹಿಸಲು ಹೆಣಗಾಡುತ್ತಿರುವ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಜನಸಾಮಾನ್ಯರಿಗೆ ಬೆಲೆ ಏರಿಕೆಯ ದೌರ್ಭಾಗ್ಯವನ್ನು ನಿರಂತರ ಹೇರುತ್ತಲೇ ಬರುತ್ತಿದೆ. ಕುಡಿಯುವ ನೀರು, ವಿದ್ಯುತ್ ಬಿಲ್, ಸಾರಿಗೆ, ಅಗತ್ಯ ವಸ್ತುಗಳು ಹೀಗೆ ಒಂದರ ಮೇಲೊಂದರಂತೆ ಬೆಲೆ ಏರಿಕೆಯ ಬಿಸಿಯನ್ನು ಜನ ಅನುಭವಿಸುತ್ತಿರುವ ಹೊತ್ತಿನಲ್ಲೇ, ಈ ಸರ್ಕಾರ ಅಧಿಕಾರಕ್ಕೆ ಬಂದಮೇಲೆ 2 ನೇ ಬಾರಿ ಹಾಲಿನ ದರ ಏರಿಕೆ ಮಾಡುವ ಮೂಲಕ ಬೆಲೆ ಏರಿಕೆ ಬರೆ ಎಳೆಯುವಲ್ಲಿ ಪೈಪೋಟಿಗೆ ಬಿದ್ದಂತೆ ಕಾಣುತ್ತಿದೆ. ಸದ್ಯ ಹಾಲಿನ ದರ 4 ರೂ. ಹೆಚ್ಚಳ ಮಾಡಿ ಜನಸಾಮಾನ್ಯರ ಜೇಬಿಗೆ ಕತ್ತರಿ ಪ್ರಯೋಗ ಮಾಡುತ್ತಿರುವ ನಿರ್ಧಾರ ಹಗಲು ದರೋಡೆಯಲ್ಲದೇ ಬೇರೇನೂ ಅಲ್ಲ ಎಂದು ಕಿಡಿಕಾರಿದ್ದಾರೆ.
ಹೈನುಗಾರಿಕೆ ಅವಲಂಬಿಸಿರುವ ರೈತ ಸಮುದಾಯಕ್ಕೆ ಹೆಚ್ಚಿನ ದರ ಹಾಗೂ ಪ್ರೋತ್ಸಾಹ ಧನವನ್ನು ಕೊಡುವುದು ಸರ್ಕಾರದ ಆದ್ಯ ಕರ್ತವ್ಯವಾಗಬೇಕೇ ಹೊರತು, ಈ ಕಾರಣವನ್ನು ಮುಂದಿಟ್ಟುಕೊಂಡು ಜನರ ಮೇಲೆ ಬೆಲೆ ಏರಿಕೆಯ ಬಿಸಿ ತಟ್ಟಿಸಲು ಹೊರಟಿರುವುದು ‘ಒಂದು ಕೈಯಲ್ಲಿ ಕೊಟ್ಟು ಮತ್ತೊಂದು ಕೈಯಲ್ಲಿ ಕಿತ್ತುಕೊಳ್ಳುವ ನಡೆಯಾಗುತ್ತದೆ’. ರೈತರನ್ನೂ ಉತ್ತೇಜಿಸಬೇಕು ಜನಸಾಮಾನ್ಯರ ಹಿತಾಸಕ್ತಿಯನ್ನೂ ಕಾಪಾಡಬೇಕು, ಇದು ಸಮರ್ಥ ಜನಪರ ಹಾಗೂ ಯೋಗ್ಯ ಸರ್ಕಾರದಿಂದ ಮಾತ್ರ ಸಾಧ್ಯವಾಗುತ್ತದೆ. ಇಂತಹ ಯಾವ ಅರ್ಹತೆಗಳೂ ಕಾಂಗ್ರೆಸ್ ಸರ್ಕಾರಕ್ಕೆ ಇಲ್ಲವೇ ಇಲ್ಲ ಎಂದು ದೂರಿದ್ದಾರೆ.
ಕಾಂಗ್ರೆಸ್ ಸರ್ಕಾರದ ಜನವಿರೋಧಿ ಧೋರಣೆಯನ್ನು ನಮ್ಮ ಬಿಜೆಪಿ ಪಕ್ಷ ನಿರಂತರ ಪ್ರತಿಭಟಿಸುತ್ತಲೇ ಬರುತ್ತಿದ್ದರೂ ಈ ಸರ್ಕಾರ ಜನಾಕ್ರೋಶಕ್ಕೆ ಕ್ಯಾರೇ ಎನ್ನುತ್ತಿಲ್ಲ, ಅಧಿಕಾರಕ್ಕಾಗಿ ಕಚ್ಚಾಡುವುದನ್ನು ಬಿಟ್ಟರೆ ಕಾಂಗ್ರೆಸ್ ಸರ್ಕಾರದ ಅಂಗಳದಲ್ಲಿ ಏನೇನು ಈಗ ಉಳಿದಿಲ್ಲ, ಬರಿದಾಗಿರುವ ಬೊಕ್ಕಸ ತುಂಬಿಸಿಕೊಳ್ಳಲು ಬೆಲೆ ಏರಿಸುವುದನ್ನು ಬಿಟ್ಟರೆ ಅನ್ಯಮಾರ್ಗವಿಲ್ಲ ಎಂಬ ಪರಿಸ್ಥಿತಿ ಇರುವುದನ್ನು ಸರ್ಕಾರ ಅನಾವರಣಗೊಳಿಸಿಕೊಳ್ಳುತ್ತಿದೆ. ಪ್ರತಿಯೊಂದು ಕುಟುಂಬವೂ ಬಳಸುವ ಹಾಲಿನ ದರವನ್ನು ಏರಿಸಲು ಸಂಪುಟ ನಿರ್ಧರಿಸಿರುವ ಸರ್ಕಾರ ಈ ನಿರ್ಧಾರದಿಂದ ಹಿಂದೆ ಸರಿಯಲಿ ಎಂದು ಆಗ್ರಹಿಸುತ್ತೇನೆ ಎಂದು ತಿಳಿಸಿದ್ದಾರೆ.
ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…
ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ಇಂಡಿಗೋದ ಬಾಕಿ ಇರುವ ಎಲ್ಲಾ ಪ್ರಯಾಣಿಕರ ಮರುಪಾವತಿಗಳನ್ನು ವಿಳಂಬವಿಲ್ಲದೇ ಪಾವತಿಸಲು ಆದೇಶಿಸಿದೆ. ರದ್ದಾದ ಅಥವಾ…
ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…
ಹಾಸನ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…
ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…
ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…