ರಾಜ್ಯ

ತ್ಯಾಗ-ಬಲಿದಾನ ನಮ್ಮ ಪಕ್ಷದ ಹೆಗ್ಗಳಿಕೆಯ ಸಂಕೇತ: ಬಿ.ವೈ.ವಿಜಯೇಂದ್ರ

ಬೆಂಗಳೂರು: ನಮ್ಮ ಬಿಜೆಪಿ ಪಕ್ಷವೂ ತ್ಯಾಗ ಮತ್ತು ಬಲಿದಾನ ಹೆಗ್ಗಳಿಕೆಯ ಸಂಕೇಯವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.

ಬಿಜೆಪಿ ಪಕ್ಷದ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು(ಏಪ್ರಿಲ್‌.6) ಆಯೋಜಿಸಿದ್ದ ಬಿಜೆಪಿ ಸಂಸ್ಥಾಪನಾ ದಿನ ಕಾರ್ಯಕ್ರಮದಲ್ಲಿ ಪಕ್ಷದ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಸಹಸ್ರಾರು ತ್ಯಾಗ ಬಲಿದಾನಗಳ ಪ್ರತೀಕವಾಗಿ ಸೈದ್ಧಾಂತಿಕ ಹೋರಾಟದ ಪ್ರತಿಫಲವೇ ಬಿಜೆಪಿ. ಧೀನ ದಲಿತರ ಧ್ವನಿಯಾಗಿ, ದೇಶದ ಏಕತೆಗಾಗಿ ಹೋರಾಡುತ್ತಾ, ಪಕ್ಷ ಕಟ್ಟಿದ ಹಿರಿಯ ನೇತಾರರನ್ನು ಸ್ಮರಿಸಲಾಗಿದೆ ಎಂದರು.

ಸ್ವಂತ ಶಿಸ್ತು, ಬದ್ಧತೆ, ಸಮರ್ಪಣೆಯನ್ನು ಪ್ರತಿ ಕಾರ್ಯಕರ್ತರಲ್ಲಿ ತುಂಬಲು ಸಂಘದ ಹಿರಿಯರು ಬೆನ್ನ ಹಿಂದೆ ನಿಂತು ವಹಿಸಿದ ಪಾತ್ರ ನಾವೆಂದೂ ಮರೆಯುವಂತಿಲ್ಲ. ಸಂಘ ಸಂಸ್ಕಾರದ ಕಾರ್ಯಕರ್ತರಲ್ಲಿ ಭಾರತವನ್ನು ವಿಶ್ವಮಟ್ಟದಲ್ಲಿ ನಂ. 1 ಸ್ಥಾನಕ್ಕೆ ತರುವ ಸದೃಢ ಸಂಕಲ್ಪ ಇದ್ದರೆ, ಅದನ್ನು ಈಡೇರಿಸುವ ಗುರಿಯತ್ತ ಪ್ರಧಾನಿ ನರೇಂದ್ರ ಮೋದಿಯವರು ದಾಪುಗಾಲನ್ನಿಡುತ್ತಿದ್ದಾರೆ ಎಂದು ಹೇಳಿದರು.

ನಮ್ಮ ಸಂಘಟನೆಯ ಶಕ್ತಿಯನ್ನು ಕುಗ್ಗಿಸಲು ದುಷ್ಟ ಕಾಂಗ್ರೆಸ್ ಸರ್ಕಾರ ನಮ್ಮ ಕಾರ್ಯಕರ್ತರ ಮೇಲೆ ಸುಳ್ಳು ದೂರುಗಳನ್ನು ದಾಖಲಿಸಿ ಆತ್ಮಹತ್ಯೆ ಮಾಡಿಕೊಳ್ಳುವ ಮಟ್ಟಿಗೆ ಬೆದರಿಸುತ್ತಿದೆ. ಈ ಸಂಸ್ಥಾಪನೆಯ ದಿನ ನಾವೆಲ್ಲರೂ ಸಂಕಲ್ಪ ತೊಡೋಣ, ಕಾಂಗ್ರೆಸ್ ಸರ್ಕಾರದ ಯಾವುದೇ ಬೆದರಿಕೆಗಳನ್ನು ಹಿಮ್ಮೆಟ್ಟಿಸಲು ನಾವು ಶಕ್ತರಿದ್ದೇವೆ. ಪ್ರತಿಯೊಬ್ಬ ಕಾರ್ಯಕರ್ತನೊಂದಿಗೆ ಬಿಜೆಪಿ ಕರ್ನಾಟಕ ನೈತಿಕವಾಗಿ ಪ್ರತಿಯೊಬ್ಬ ಕಾರ್ಯಕರ್ತನ ರಕ್ಷಣೆಗೆ ನಿಲ್ಲಲಿದೆ ಎಂದು ಭರವಸೆ ನೀಡಿದು.

ಈ ರಾಜ್ಯದಲ್ಲಿ ಕಾಂಗ್ರೆಸ್ ದುರಾಡಳಿತ ತೊಲಗಿಸುವವರೆಗೂ ನಾವು ವಿರಮಿಸುವ ಪ್ರಶ್ನೆಯೇ ಇಲ್ಲ, ಆ ಮೂಲಕ ಭಾರತೀಯ ಜನತಾ ಪಾರ್ಟಿಯ ಸಂಸ್ಥಾಪನೆಯ ಉದ್ದೇಶವನ್ನು ನಾವು ಸಾರ್ಥಕಗೊಳಿಸಲು ಶ್ರಮಿಸೋಣ ಎಂದು ತಿಳಿಸಿದರು.

ಅರ್ಚನ ಎಸ್‌ ಎಸ್

Recent Posts

ಹನೂರು: ತಾಲ್ಲೂಕಿನ ಪ್ರತಿ ಗ್ರಾಮಗಳಿಗೂ ಬಸ್‌ ಸೌಲಭ್ಯ ಕಲ್ಪಿಸಲು ಡಿಪೋ ನಿರ್ಮಾಣ: ಶಾಸಕ ಎಂ.ಆರ್.‌ಮಂಜುನಾಥ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪ್ರತಿ ಗ್ರಾಮಗಳಿಗೂ ಕೆಎಸ್‌ಆರ್‌ಟಿಸಿ ಸೌಲಭ್ಯ ಕಲ್ಪಿಸಲು ತಾಲೂಕು ಕೇಂದ್ರದಲ್ಲಿ…

6 hours ago

ಶ್ರೀರಂಗಪಟ್ಟಣ: ವಿದ್ಯುತ್ ಸ್ಪರ್ಶದಿಂದ ಕರ್ತವ್ಯ ನಿರತ ಲೈನ್‌ಮ್ಯಾನ್ ಸಾವು

‌ಶ್ರೀರಂಗಪಟ್ಟಣ: ವಿದ್ಯುತ್‌ ಸ್ಪರ್ಶದಿಂದ ಕರ್ತವ್ಯ ನಿರತ ಲೈನ್‌ಮ್ಯಾನ್‌ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಹೆಬ್ಬಾಡಿ ಗ್ರಾಮದಲ್ಲಿ ನಡೆದಿದೆ.…

6 hours ago

ರಾಜ್ಯದ ಹಲವೆಡೆ ಭಾರೀ ಗಾಳಿ ಮಳೆ: ಜನಜೀವನ ಅಸ್ತವ್ಯಸ್ತ

ಬೆಂಗಳೂರು: ರಾಜ್ಯದ ಹಲವೆಡೆ ಇಂದು ಧಾರಾಕಾರ ಮಳೆಯಾಗಿದ್ದು, ಭಾರೀ ಅವಾಂತರ ಸೃಷ್ಟಿ ಮಾಡಿದೆ. ಚಿಕ್ಕಮಗಳೂರು, ಶಿವಮೊಗ್ಗ ಸೇರಿದಂತೆ ರಾಜ್ಯದ ಹಲವೆಡೆ…

6 hours ago

ಹನೂರು: 153 ದಿನಗಳಿಂದ ರೈತರು ನಡೆಸುತ್ತಿದ್ದ ಅಹೋರಾತ್ರಿ ಧರಣಿ ಅಂತ್ಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಾರ್ಟಳ್ಳಿ, ಕೌದಳ್ಳಿ, ಶೆಟ್ಟಳ್ಳಿ, ಕುರಟ್ಟಿ ಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ…

6 hours ago

ಮೈಸೂರಿನಲ್ಲಿ ಅವೈಜ್ಞಾನಿಕ ಟ್ರಾಫಿಕ್‌ ಸಿಗ್ನಲ್‌ ಆರೋಪ: ಸಚಿವ ಮಹದೇವಪ್ಪ ಪ್ರತಿಕ್ರಿಯೆ

ಮೈಸೂರು: ಅರಮನೆಗಳ ನಗರಿ ಮೈಸೂರಿನಲ್ಲಿ ಅವೈಜ್ಞಾನಿಕವಾಗಿ ಟ್ರಾಫಿಕ್‌ ಸಿಗ್ನಲ್‌ ಅಳವಡಿಸಲಾಗಿದೆ ಎಂದು ಸಾರ್ವಜನಿಕರು ಕಿಡಿಕಾರುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಮಹದೇವಪ್ಪ…

7 hours ago

ದೀದಿ ಸರ್ಕಾರದ ವಿರುದ್ಧ ಅಮಿತ್‌ ಶಾ ಚಾರ್ಜ್‌ಶೀಟ್‌ ರಿಲೀಸ್‌

ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ದಿನಗಣನೆ ಶುರುವಾಗಿರುವ ಹಿನ್ನೆಲೆಯಲ್ಲಿ ಸಿಎಂ ಮಮತಾ ಬ್ಯಾನರ್ಜಿ ವಿರುದ್ಧ ಕೇಂದ್ರ ಗೃಹ ಸಚಿವ…

7 hours ago