ಬೆಂಗಳೂರು: ರಾಜ್ಯ ಸರ್ಕಾರ ಸೋಮವಾರ ಸದನದಲ್ಲಿ ವಿಪಕ್ಷದ ಕಣ್ತಪ್ಪಿಸಿ ಮುಸಲ್ಮಾನರ ಮೀಸಲಾತಿ ಬಿಲ್ ಮಂಡನೆ ಮಾಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದ್ದಾರೆ.
ಬೆಂಗಳೂರಿನಲ್ಲಿ ಇಂದು(ಮಾರ್ಚ್.19) ಕುರಿತು ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ನಿನ್ನೆ ಕದ್ದುಮುಚ್ಚಿ ವಿರೋಧ ಪಕ್ಷಗಳ ಕಣ್ತಪ್ಪಿಸಿ ಮೀಸಲಾತಿ ಬಿಲ್ ಮಂಡನೆ ಮಾಡಿದ್ದಾರೆ. ಹಾಗಾಗಿ ನಮ್ಮ ಪಕ್ಷದ ನಿಲುವು ಸ್ಪಷ್ಟವಾಗಿದ್ದು, ರಾಜ್ಯ ಸರ್ಕಾರದ ತುಘಲಕ್ ದರ್ಬಾರ್ ವಿರೋಧಿಸುತ್ತೇವೆ. ಅಲ್ಲದೇ ಇದರ ಬಗ್ಗೆ ಸದನದ ಒಳಗೂ ಮತ್ತು ಹೊರಗೂ ಪ್ರತಿಭಟನೆ ನಡೆಸುತ್ತೇವೆ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಸಚಿವರೊಬ್ಬರಿಗೆ ಹನಿಟ್ರ್ಯಾಪ್ ಯತ್ನಿಸಿದ ವಿಚಾರದ ಬಗ್ಗೆ ಮಾತನಾಡಿದ ಅವರು, ಯಾರು ಹನಿಟ್ರ್ಯಾಪ್ ಮಾಡೋಕೆ ಹೋಗಿದ್ದಾರೋ ಅವರನ್ನೇ ಕೇಳಿ ಎಂದು ತಿಳಿಸಿದರು.
ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…
ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…
ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…
ಮಂಡ್ಯ: ಮನ್ಮುಲ್ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…
ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…
ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…