ರಾಜ್ಯ

ಕೇಂದ್ರ ಸರ್ಕಾರದ ಬೆಲೆ ಏರಿಕೆಯಿಂದ ದೇಶದ ಜನತೆಗೆ ಹೊರರೆಯಾಗಿಲ್ಲ: ಬಿ.ವೈ.ವಿಜಯೇಂದ್ರ

ಹಾಸನ: ಕೇಂದ್ರ ಸರ್ಕಾರ ಪೆಟ್ರೋಲ್‌ ಮತ್ತು ಡಿಸೇಲ್‌ ಮೇಲೆ ಅಬಕಾರಿ ಸುಂಕವನ್ನು 2ರೂ.ಗೆ ಹೆಚ್ಚಳ ಮಾಡಿರುದರಿಂದ ದೇಶದ ಜನತೆಗೆ ಯಾವುದೇ ರೀತಿ ಹೊರೆಯಾಗುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.

ಹಾಸನದಲ್ಲಿ ಇಂದು(ಏಪ್ರಿಲ್‌.9) ಜನಾಕ್ರೋಶ ಯಾತ್ರೆಯ ವೇಳೆ ಕೇಂದ್ರ ಸರ್ಕಾರ ವಿರುದ್ಧ ರಾಜ್ಯ ಸರ್ಕಾರ ವಿರೋಧ ವ್ಯಕ್ತಪಡಿಸಿರುವ ಬಗ್ಗೆ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಕೇಂದ್ರ ಸರ್ಕಾರ ಎಲ್‌ಪಿಜಿ ಪೆಟ್ರೋಲ್‌ ಮತ್ತು ಡಿಸೇಲ್‌ ಮೇಲಿನ ಅಬಕಾರಿ ಸುಂಕ ಹೆಚ್ಚಳ ಮಾಡಿರುವುದಕ್ಕೆ ಕಾರಣ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆಯ ಏರಿಕೆ ಮಾಡಿರುವುದು. ಆದರೆ ಈ ಬೆಲೆ ಏರಿಕೆಯಿಂದ ಯಾವುದೇ ರೀತಿ ದೇಶದ ಜನರಿಗೆ ಹೊರೆಯಾಗುವುದಿಲ್ಲವೆಂದು ಕೇಂದ್ರ ಸಚಿವರೇ ಸ್ಪಷ್ಟನೆ ನೀಡಿದ್ದಾರೆ. ಇನ್ನು ಗ್ಯಾಸ್‌ನ ದರ ಏರಿಕೆಯನ್ನು ಕಳೆದ ವರ್ಷಗಳಿಗೆ ಹೋಲಿಕೆ ಮಾಡಿ ನೋಡಿದರೆ 300 ಕಡಿತಗೊಳಿಸಿ 50 ರೂ.ಏರಿಕೆ ಮಾಡಿದ್ದಾರೆ ಅಷ್ಟೇ ಎಂದು ಹೇಳಿದರು.

ಕೇಂದ್ರ ಸರ್ಕಾರ ಬೆಲೆ ಏರಿಕೆ ಮಾಡಿರುವುದಕ್ಕೆ ಅಗತ್ಯ ಕಾರಣವಿದೆ. ಆದರೆ ರಾಜ್ಯ ಸರ್ಕಾರ ಅಗತ್ಯ ವಸ್ತುಗಳ ಮೇಲೆ ಬೆಲೆ ಏರಿಕೆ ಮಾಡಿರುದಕ್ಕೆ ಯಾವ ಕಾರಣವಿದೆ. ಯಾವ ಕಾರಣದಿಂದ ರಾಜ್ಯ ಸರ್ಕಾರ ದರ ಏರಿಕೆ ಮಾಡಿದೆ ಎಂಬುದನ್ನು ರಾಜ್ಯದ ಜನತೆಗೆ ತಿಳಿಸಲಿ ಎಂದರು.

ಅರ್ಚನ ಎಸ್‌ ಎಸ್

Recent Posts

ಗುಂಡ್ಲುಪೇಟೆ | ಬೇರಂಬಾಡಿ ಭಾಗದಲ್ಲಿ ಮತ್ತೊಂದು ಹುಲಿ ಸೆರೆ

ಗುಂಡ್ಲುಪೇಟೆ : ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಣೆ ಪ್ರದೇಶದ ಮದ್ದೂರು ವಲಯ ವ್ಯಾಪ್ತಿಯ ಚನ್ನಮಲ್ಲಿಪುರ-ಬೇರಂಬಾಟಿ ಕಗ್ಗಳಹುಂಡಿ ಭಾಗದಲ್ಲಿ ಉಪಟಳ ನೀಡುತ್ತಿದ್ದ…

34 mins ago

ರಾಮನವಮಿ | ಅಯೋಧ್ಯೆ ಬಾಲರಾಮನ ಹಣೆಯ ಮೇಲೆ ಮೂಡಿದ ಸೂರ್ಯ ತಿಲಕ

ಅಯೋಧ್ಯೆ : ಅಯೋಧ್ಯೆ ರಾಮಮಂದಿರದಲ್ಲಿ ರಾಮನವಮಿ ಸಂಭ್ರಮ ಮನೆ ಮಾಡಿದೆ. ಈ ಶುಭ ಸಂದರ್ಭದಲ್ಲಿ ಬಾಲರಾಮನ ಹಣೆಯ ಮೇಲೆ ಸೂರ್ಯ…

53 mins ago

ನೇಪಾಳ | ನೂತನ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ಜೆನ್‌ಝೀಗಳ ಹೀರೋ ಬಾಲೇಂದ್ರ

ಕಠ್ಮಂಡು : ನೇಪಾಳದ ರಾಷ್ಟ್ರೀಯ ಸ್ವತಂತ್ರ ಪಕ್ಷದ ಹಿರಿಯ ನಾಯಕ ಬಾಲೇಂದ್ರ ಶಾ ಅವರು ದೇಶದ ನೂತನ ಪ್ರಧಾನಿಯಾಗಿ ಇಂದು(ಮಾರ್ಚ್‌.27)…

3 hours ago

ವೈರಮುಡಿ ಬ್ರಹ್ಮೋತ್ಸವಕ್ಕೆ 2 ಲಕ್ಷಕ್ಕೂ ಹೆಚ್ಚು ಭಕ್ತಾಧಿಗಳು ಭಾಗಿ : ಜಿಲ್ಲಾಧಿಕಾರಿ

ಮಂಡ್ಯ : ವೈರಮುಡಿ ಬ್ರಹ್ಮೋತ್ಸವಕ್ಕೆ ಆಗಮಿಸುವ ಭಕ್ತಾದಿಗಳ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಪಾಲನೆ ಹಾಗೂ ಭದ್ರತೆಗಾಗಿ ಸೂಕ್ತ ಕ್ರಮಗಳನ್ನು…

4 hours ago

ವಾಯುಪಡೆ ಅರಣ್ಯಭೂಮಿ ಮರುವಶಕ್ಕೆ ಪ್ರಕ್ರಿಯೆ : ಈಶ್ವರ ಖಂಡ್ರೆ

ಬೆಂಗಳೂರು : ಬೆಂಗಳೂರು ಉತ್ತರ ತಾಲ್ಲೂಕು ಜಾರಕಬಂಡೆ ಶ್ರೀಗಂಧದ ಕಾವಲ್‌ನಲ್ಲಿ ವಾಯುಪಡೆಯ ವಶದಲ್ಲಿರುವ 444 ಎಕರೆ ಅರಣ್ಯಭೂಮಿಯ ಮರು ವಶಕ್ಕೆ…

4 hours ago

ರಾಜ್ಯದಲ್ಲಿ ದ್ವಿಭಾಷಾ ಸೂತ್ರ ಜಾರಿಗೆ ಚಿಂತನೆ

ಬೆಂಗಳೂರು : ವಿದ್ಯಾರ್ಥಿಗಳಿಗೆ ಹಿಂದಿ ಪಾಸ್‌ ಕಡ್ಡಾಯ ಮಾಡದಂತೆ ಕನ್ನಡಪರ ಸಂಘಟನೆಗಳಿಂದ ಒತ್ತಾಯ ಕೇಳಿಬಂದ ಬೆನ್ನಲ್ಲೇ ರಾಜ್ಯದಲ್ಲಿ ದ್ವಿಭಾಷಾ ಸೂತ್ರ…

4 hours ago