Mysore
17
overcast clouds

Social Media

ಮಂಗಳವಾರ, 09 ಡಿಸೆಂಬರ್ 2025
Light
Dark

ಬಂಡಾಯ ನಾಯಕರಿಗೆ ಖಡಕ್‌ ವಾರ್ನಿಂಗ್‌ ಕೊಟ್ಟ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ

ಬೆಂಗಳೂರು: ವಿಜಯೇಂದ್ರನನ್ನು ಬದಲಾವಣೆ ಮಾಡಬಹುದು ಎಂಬ ಭ್ರಮೆಯಲ್ಲಿರುವವರಿಗೆ ನಿರಾಶೆಯಾಗೋದು ಪಕ್ಕಾ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.

ಈ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪಕ್ಷದಲ್ಲಿ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಹೋಗಲು ಪ್ರಮಾಣಿಕ ಪ್ರಯತ್ನ ಮಾಡಲಾಗುತ್ತಿದೆ. ಪಕ್ಷದ ನಾಯಕರು ನನ್ನ ಪ್ರಯತ್ನದಿಂದ ತೃಪ್ತರಾಗಿದ್ದಾರೆ. ಮಾಜಿ ಸಿಎಂ ಯಡಿಯೂರಪ್ಪ ಅವರ ಮಗನಾಗಿರುವುದೇ ಅಪರಾಧ ಎಂಬ ರೀತಿಯಲ್ಲಿ ಕೆಲವರು ಮಾತನಾಡುತ್ತಿದ್ದಾರೆ. ಇದಕ್ಕೆ ಮುಂದಿನ ದಿನಗಳಲ್ಲಿ ತಕ್ಕ ಉತ್ತರ ನೀಡುತ್ತೇನೆ ಎಂದು ಕಿಡಿಕಾರಿದರು.

ಇನ್ನು ದೆಹಲಿಯಲ್ಲಿ ಪಕ್ಷದ ನಾಯಕರನ್ನು ಭೇಟಿ ಮಾಡಿದ್ದೇನೆ. ದೆಹಲಿ ಮತ್ತು ರಾಜ್ಯದ ಮೂರು ವಿಧಾನಸಭಾ ಸ್ಥಾನಗಳಿಗೆ ನಡೆದ ಉಪಚುನಾವಣೆ ಫಲಿತಾಂಶಗಳ ಬಗ್ಗೆ ರಾಜ್ಯದಲ್ಲಾಗುತ್ತಿರುವ ರಾಜಕೀಯ ಬೆಳವಣಿಗೆಗಳ ಕುರಿತು ಗಮನಕ್ಕೆ ತಂದಿದ್ದೇನೆ ಎಂದರು.

ಇನ್ನು ಕೆಲವರ ನಡವಳಿಕೆಯಿಂದ ಅವರು ಎತ್ತರಕ್ಕೆ ಬೆಳೆಯುವ ಭ್ರಮೆಯಲ್ಲಿದ್ದರೆ, ಅದು ಎಂದಿಗೂ ಸಾಧ್ಯವಿಲ್ಲ. ನನ್ನ ಮೌನವನ್ನು ದೌರ್ಬಲ್ಯವೆಂದು ಪರಿಗಣಿಸಿದರೆ ಅದು ತಪ್ಪು. ಇದಕ್ಕೆಲ್ಲಾ ಇತಿಶ್ರೀ ಹಾಡಬೇಕೆಂಬ ಅಪೇಕ್ಷೆ ಕಾರ್ಯಕರ್ತರಲ್ಲೂ ಇದೆ ಎಂದು ಬಂಡಾಯ ನಾಯಕರ ವಿರುದ್ಧ ಕಿಡಿಕಾರಿದರು.

 

Tags:
error: Content is protected !!