Mysore
23
scattered clouds

Social Media

ಭಾನುವಾರ, 29 ಮಾರ್ಚ್ 2026
Light
Dark

ಸಿಎಂ ಸಿದ್ದರಾಮಯ್ಯ ವಿರುದ್ಧ ಗುಡುಗಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ

ಬೆಂಗಳೂರು: ಯಾವಾಗ ಸಿಎಂ ಕುರ್ಚಿ ಖಾಲಿ ಆಗುತ್ತೆ ಎಂದು ಕಾಂಗ್ರೆಸ್‌ ಶಾಸಕರೇ ಕಾಯುತ್ತಾ ಕುಳಿತಿದ್ದಾರೆ ಅಂತಾ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಲೇವಡಿ ಮಾಡಿದ್ದಾರೆ.

ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಇನ್ನು 5 ವರ್ಷ ಸಿಎಂ ಆಗಿರುತ್ತಾರೆ ಎಂದು ಹೇಳುವವರೆಲ್ಲಾ ಸಿಎಂ ಸ್ಥಾನದ ಆಕಾಂಕ್ಷಿಗಳೇ ಆಗಿದ್ದಾರೆ.

ಯಾವಾಗ ಸಿಎಂ ಕುರ್ಚಿ ಖಾಲಿ ಆಗುತ್ತೆ ಎಂದು ಕಾಂಗ್ರೆಸ್‌ ಸಚಿವರು ಹಾಗೂ ಶಾಸಕರೇ ಕಾಯುತ್ತಾ ಕುಳಿತಿದ್ದಾರೆ ಎಂದು ಲೇವಡಿ ಮಾಡಿದರು.

ಇಷ್ಟೆಲ್ಲಾ ಆದರೂ ಸಿಎಂ ಸಿದ್ದರಾಮಯ್ಯ ಮಾತ್ರ ತನ್ನ ಮೊಂಡುತನವನ್ನು ನಿಲ್ಲಿಸುತ್ತಿಲ್ಲ. ಆದಷ್ಟು ಬೇಗ ಅವರು ಮೊಂಡುತನ ನಿಲ್ಲಿಸಲಿ. ಆಗ ಎಲ್ಲಾ ಸರಿಹೋಗುತ್ತದೆ ಎಂದು ಅಪಹಾಸ್ಯ ಮಾಡಿದರು.

ಇನ್ನು ಮುಂದುವರಿದು ಮಾತನಾಡಿದ ಅವರು, ಈ ಸರ್ಕಾರ ದೇಶದ್ರೋಹಿಗಳ ವಿರುದ್ಧದ ಕೇಸ್‌ ವಾಪಸ್‌ ಪಡೆದಿದೆ. ಭಯೋತ್ಪಾದಕರ ಪರ ಕೆಲಸ ಮಾಡುತ್ತಿದೆ. ಕಾಂಗ್ರೆಸ್‌ ಶಾಸಕರೇ ಸರ್ಕಾರದ ವಿರುದ್ಧ ಟೀಕೆ ಮಾಡುತ್ತಿದ್ದಾರೆ. ಆದ್ದರಿಂದ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸಮಯ ಹತ್ತಿರ ಆಗುತ್ತಿದೆ ಎಂದು ಭವಿಷ್ಯ ನುಡಿದರು

Tags:
error: Content is protected !!