Mysore
22
overcast clouds

Social Media

ಶನಿವಾರ, 30 ಮೇ 2026
Light
Dark

ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕೆಂಡಾಮಂಡಲ

ಕಲಬುರ್ಗಿ: ಬಡವರ ಸೈಟುಗಳೆಲ್ಲಾ ಶ್ರೀಮಂತರ ಪಾಲಾಗಿವೆ ಎಂದು ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಾಗ್ದಾಳಿ ನಡೆಸಿದರು.

ಮುಡಾದಲ್ಲಿ 700 ಕೋಟಿ ಅವ್ಯವಹಾರದ ಬಗ್ಗೆ ಇ.ಡಿ ವರದಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕಲಬುರ್ಗಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು, ಮುಡಾದಲ್ಲಿ ಹಗರಣ ಆಗಿಲ್ಲ ಎಂದು ಸಿಎಂ ಹೇಳಿದ್ದರು. ನಾವು ಕೂಡ ಹೋರಾಟ ಮಾಡಿದ್ದೇವೆ. ಬ್ರೋಕರ್‌ಗಳ ಮೂಲಕ ಬಡವರ ಸೈಟುಗಳು ರಿಯಲ್‌ ಎಸ್ಟೇಟ್‌ಗಳ ಪಾಲಾಗಿವೆ. ಮೊದಲ ಹಂತದಲ್ಲಿ ಇ.ಡಿ 700 ಕೋಟಿ ಅವ್ಯವಹಾರ ಆಗಿದೆ ಎಂದು ಹೇಳಿದೆ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದರು.

ಇನ್ನು ವಕ್ಫ್‌ ವಿವಾದ ಕುರಿತು ಮಾತನಾಡಿದ ಅವರು, ರಾಜ್ಯದಲ್ಲಿ ಕೆಲವು ತಿಂಗಳುಗಳಿಂದ ರೈತರ ಜಮೀನು, ಮಠ ಮಂದಿರಗಳ ಜಾಗವನ್ನು ವಕ್ಫ್‌ ಕಬಳಿಸುವ ಹುನ್ನಾರ ನಡೆದಿದೆ. ಹೀಗಾಗಿ ವಕ್ಫ್‌ ವಿರುದ್ಧ ಹೋರಾಟ ಇಟ್ಟುಕೊಂಡಿದ್ದೇವೆ ಎಂದು ಸ್ಪಷ್ಟಪಡಿಸಿದರು.

Tags:
error: Content is protected !!