ಕಲಬುರ್ಗಿ: ಬಡವರ ಸೈಟುಗಳೆಲ್ಲಾ ಶ್ರೀಮಂತರ ಪಾಲಾಗಿವೆ ಎಂದು ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಾಗ್ದಾಳಿ ನಡೆಸಿದರು.
ಮುಡಾದಲ್ಲಿ 700 ಕೋಟಿ ಅವ್ಯವಹಾರದ ಬಗ್ಗೆ ಇ.ಡಿ ವರದಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕಲಬುರ್ಗಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು, ಮುಡಾದಲ್ಲಿ ಹಗರಣ ಆಗಿಲ್ಲ ಎಂದು ಸಿಎಂ ಹೇಳಿದ್ದರು. ನಾವು ಕೂಡ ಹೋರಾಟ ಮಾಡಿದ್ದೇವೆ. ಬ್ರೋಕರ್‌ಗಳ ಮೂಲಕ ಬಡವರ ಸೈಟುಗಳು ರಿಯಲ್ ಎಸ್ಟೇಟ್‌ಗಳ ಪಾಲಾಗಿವೆ. ಮೊದಲ ಹಂತದಲ್ಲಿ ಇ.ಡಿ 700 ಕೋಟಿ ಅವ್ಯವಹಾರ ಆಗಿದೆ ಎಂದು ಹೇಳಿದೆ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದರು.
ಇನ್ನು ವಕ್ಫ್ ವಿವಾದ ಕುರಿತು ಮಾತನಾಡಿದ ಅವರು, ರಾಜ್ಯದಲ್ಲಿ ಕೆಲವು ತಿಂಗಳುಗಳಿಂದ ರೈತರ ಜಮೀನು, ಮಠ ಮಂದಿರಗಳ ಜಾಗವನ್ನು ವಕ್ಫ್ ಕಬಳಿಸುವ ಹುನ್ನಾರ ನಡೆದಿದೆ. ಹೀಗಾಗಿ ವಕ್ಫ್ ವಿರುದ್ಧ ಹೋರಾಟ ಇಟ್ಟುಕೊಂಡಿದ್ದೇವೆ ಎಂದು ಸ್ಪಷ್ಟಪಡಿಸಿದರು.
ಬೆಂಗಳೂರು: ನವೆಂಬರ್ 1ರಂದು ಭಾನುವಾರ ಬಂದರೂ ರಾಜ್ಯದ ಎಲ್ಲಾ ಶಾಲೆಗಳಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಕಡ್ಡಾಯ ಎಂದು ರಾಜ್ಯ ಸರ್ಕಾರ…
ಗುಂಡ್ಲುಪೇಟೆ: ತಾಲ್ಲೂಕಿನ ವಡಯ್ಯನಪುರ ಹಾಗೂ ಬೊಮ್ಮಲಾಪುರ ಗ್ರಾಮಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಕೊನೆಗೂ ಬೋನಿಗೆ ಬಿದ್ದಿದೆ. ಬೊಮ್ಮಲಾಪುರ…
ಹನೂರು: ತಾಲ್ಲೂಕಿನ ಗುಂಡಾಪುರ ಗ್ರಾಮದ ಸಮೀಪದ ಅರಣ್ಯ ಪ್ರದೇಶದಲ್ಲಿ ದನ-ಕುರಿ ಮೇಯಿಸಲು ಹೋಗಿದ್ದ ವ್ಯಕ್ತಿ ಮೇಲೆ ಚಿರತೆ ದಾಳಿ ನಡೆಸಿರುವ…
ಮೈಸೂರು: ಮೈಸೂರಿನಲ್ಲಿ ಕಳೆದ ವರ್ಷದ ದಸರಾ ವೇಳೆ ನಡೆದಿದ್ದ ಬಾಲಕಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ನ್ಯಾಯಾಲಯ ತೀರ್ಪು…
ಮೈಸೂರು: ದಸರಾ ದೀಪಾಲಂಕಾರದ ನಡುವೆ ಅವಘಡವೊಂದು ಸಂಭವಿಸಿದೆ. ನಗರದ ಸಯ್ಯಾಜಿರಾವ್ ರಸ್ತೆಯಲ್ಲಿ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ಕುಸಿದು ಬಿದ್ದಿದ್ದು,…
ಇತ್ತೀಚಿನ ದಿನಗಳಲ್ಲಿ ಹೆಚ್ಚು ಸದ್ದುಮಾಡುತ್ತಿರುವ ಸ್ಟ್ರಿಂಗ್ ಆಪರೇಷನ್ ಸುದ್ದಿ, ಅದರ ಸುತ್ತ ನಡೆಯುವ ಆರೋಪ-ಪ್ರತ್ಯಾರೋಪಗಳು ಹಾಗೂ ಸಿಡಿ/ಪೆನ್ ಡ್ರೈವ್ಗಳ ವಿಚಾರ…