ಬೆಂಗಳೂರು: ಯಾವಾಗ ಸಿಎಂ ಕುರ್ಚಿ ಖಾಲಿ ಆಗುತ್ತೆ ಎಂದು ಕಾಂಗ್ರೆಸ್ ಶಾಸಕರೇ ಕಾಯುತ್ತಾ ಕುಳಿತಿದ್ದಾರೆ ಅಂತಾ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಲೇವಡಿ ಮಾಡಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಇನ್ನು 5 ವರ್ಷ ಸಿಎಂ ಆಗಿರುತ್ತಾರೆ ಎಂದು ಹೇಳುವವರೆಲ್ಲಾ ಸಿಎಂ ಸ್ಥಾನದ ಆಕಾಂಕ್ಷಿಗಳೇ ಆಗಿದ್ದಾರೆ.
ಯಾವಾಗ ಸಿಎಂ ಕುರ್ಚಿ ಖಾಲಿ ಆಗುತ್ತೆ ಎಂದು ಕಾಂಗ್ರೆಸ್ ಸಚಿವರು ಹಾಗೂ ಶಾಸಕರೇ ಕಾಯುತ್ತಾ ಕುಳಿತಿದ್ದಾರೆ ಎಂದು ಲೇವಡಿ ಮಾಡಿದರು.
ಇಷ್ಟೆಲ್ಲಾ ಆದರೂ ಸಿಎಂ ಸಿದ್ದರಾಮಯ್ಯ ಮಾತ್ರ ತನ್ನ ಮೊಂಡುತನವನ್ನು ನಿಲ್ಲಿಸುತ್ತಿಲ್ಲ. ಆದಷ್ಟು ಬೇಗ ಅವರು ಮೊಂಡುತನ ನಿಲ್ಲಿಸಲಿ. ಆಗ ಎಲ್ಲಾ ಸರಿಹೋಗುತ್ತದೆ ಎಂದು ಅಪಹಾಸ್ಯ ಮಾಡಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಈ ಸರ್ಕಾರ ದೇಶದ್ರೋಹಿಗಳ ವಿರುದ್ಧದ ಕೇಸ್ ವಾಪಸ್ ಪಡೆದಿದೆ. ಭಯೋತ್ಪಾದಕರ ಪರ ಕೆಲಸ ಮಾಡುತ್ತಿದೆ. ಕಾಂಗ್ರೆಸ್ ಶಾಸಕರೇ ಸರ್ಕಾರದ ವಿರುದ್ಧ ಟೀಕೆ ಮಾಡುತ್ತಿದ್ದಾರೆ. ಆದ್ದರಿಂದ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸಮಯ ಹತ್ತಿರ ಆಗುತ್ತಿದೆ ಎಂದು ಭವಿಷ್ಯ ನುಡಿದರು
ಮುಂಬೈ: ಬಾಲಿವುಡ್ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿ. ಹಿರಿಯ ನಟ ನಾನಾ ಪಾಟೇಕರ್ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಗೋವಾದ…
ಮೈಸೂರು ಜಿ ಎಚ್.ಡಿ.ಕೋಟೆ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶುಗರ್ ಮತ್ತು ಬಿಪಿಗೆ ಹಾಗೂ ಇತರೆ ಕಾಯಿಲೆಗಳಿಗೆ ಸಂಬಂಧಪಟ್ಟ…
ರಾಜ್ಯದಲ್ಲಿ ಈ ಬಾರಿ ತೀವ್ರ ಬರ ಪರಿಸ್ಥಿತಿ ಇದೆ. ಮುಂಗಾರು ಮಳೆ ಕೈಕೊಟ್ಟಿದ್ದರಿಂದ ಲಕ್ಷಾಂತರ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಮಾಡಿದ…
ರಾಜ್ಯ ಸರ್ಕಾರ ಹಾಲಿನ ದರವನ್ನು ಲೀಟರ್‌ಗೆ ೮ ರೂ. ಏರಿಕೆ ಮಾಡಲಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ಹಾಲಿನ ದರವನ್ನು ಒಂದೇ…
ರಾಜ್ಯದಲ್ಲಿ ಬಳಕೆಯಲ್ಲಿರುವ ಒಟ್ಟು ೩೦ ಸಾವಿರ ಜಲಮೂಲಗಳಲ್ಲಿ ಕೇವಲ ಶೇ.೨೦ರಷ್ಟು ಮಾತ್ರ ಅಂತರ್ಜಲ ಮರುಪೂರಣಕ್ಕಾಗಿ ಬಳಕೆಯಾಗುತ್ತಿರುವುದು ಸರ್ಕಾರ ಹಾಗೂ ಸಾರ್ವಜನಿಕರ…
ಟಿ. ಕೆ.ಹರೀಶ್, ಹಿರಿಯ ಸಹಾಯಕ ನಿರ್ದೇಶಕರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಂಭ್ರಮದ ಜೊತೆಗೆ ಸ್ವಚ್ಛತೆ, ಸುರಕ್ಷತೆ ಮತ್ತು…