Mysore
27
clear sky

Social Media

ಗುರುವಾರ, 29 ಜನವರಿ 2026
Light
Dark

ಸಚಿವ ಪ್ರಿಯಾಂಕ್‌ ಖರ್ಗೆ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಾಗ್ದಾಳಿ

ಬೆಂಗಳೂರು: ಬಿಜೆಪಿ ಶಾಸಕರು ಹಾಗೂ ಮುಖಂಡರನ್ನು ಗುರಿಯಾಗಿಸಿಕೊಂಡು ದಾಳಿಗೆ ಯೋಜನೆ ಹಾಕಿರುವ ಕುರಿತು ಹಾಗೂ ಪ್ರಿಯಾಂಕ್‌ ಖರ್ಗೆ ಆಪ್ತ ರಾಜು ಕಪನೂರ್‌ ಪ್ರಕರಣವನ್ನು ಸಿಬಿಐಗೆ ವಹಿಸಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣವಾದ ʼಎಕ್ಸ್‌ʼ ನಲ್ಲಿ ಟ್ವೀಟ್‌ ಮಾಡಿರುವ ಅವರು, ಪ್ರಿಯಾಂಕ್‌ ಖರ್ಗೆ ಆಪ್ತ ರಾಜು ನೀಡಿದ ಕಿರುಕುಳದಿಂದ ಬೀದರ್‌ನ ಗುತ್ತಿಗೆದಾರ ಸಚಿನ್‌ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಚಿನ್ ಬರೆದಿರುವ ಡೆತ್‌ನೋಟ್‌ನಲ್ಲಿ ನಮ್ಮ ಪಕ್ಷದ ಶಾಸಕರಾದ ಬಸವರಾಜ್‌ ಮತ್ತಿಮಡು, ಬಿಜೆಪಿ ನಾಯಕರಾದ ಚಂದು ಪಾಟೀಲ್‌, ಮನಿಕಂಠ ರಾಥೋಡ್‌ ಹಾಗೂ ಆಂದೋಲ ಸ್ವಾಮೀಜಿಯವರನ್ನು ಹತ್ಯೆ ಮಾಡಲು ಸಂಚು ರೂಪಿಸಿದ್ದಾರೆ ಎನ್ನುವುದು ಆತಂಕಕಾರಿ ವಿಚಾರ ಎಂದು ಹೇಳಿದರು.

ಇತ್ತೀಚಿಗೆ ರಾಜ್ಯದಲ್ಲಿ ವಿರೋಧ ಪಕ್ಷದ ನಾಯಕರನ್ನು ಗುರಿಯಾಗಿಸಿಕೊಂಡು ನಡೆದಿರುವ ದಾಳಿ ನೋಡಿದರೆ ಭಯ ಆಗುತ್ತದೆ. ಹೀಗಾಗಿ ಈ ಪ್ರಕರಣವನ್ನು ಸಿಬಿಐಗೆ ವಹಿಸಬೇಕೆಂದು ಆಗ್ರಹಿಸಿದರು.

ಯುವ ಗುತ್ತಿಗೆದಾರ ಬೀದರ್‌ನ ಸಚಿನ್‌ ಪಾಂಚಾಳ್‌ ಡಿ.26ರಂದು ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದರು. ಇದಕ್ಕೆ ಕಾರಣ ಸಚಿವ ಪ್ರಿಯಾಂಕ್‌ ಖರ್ಗೆ ಆಪ್ತ ರಾಜು ಸೇರಿದಂತೆ 8 ಜನರು ಎಂದು ಡೆತ್‌ನೋಟ್‌ನಲ್ಲಿ ಬರೆದಿದ್ದರು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬೀದರ್‌ನ ರೈಲ್ವೆ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ. ಬಿಜೆಪಿಯ ಕಲಬುರಗಿ ಹಾಗೂ ಬೀದರ್‌ನ ನಿಯೋಗ ಸಚಿನ್‌ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದೆ. ಹಾಗೆಯೇ ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಹಾಗೂ ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಒತ್ತಾಯಿಸಿದೆ.

 

Tags:
error: Content is protected !!