Mysore
21
overcast clouds

Social Media

ಸೋಮವಾರ, 17 ಆಗಸ್ಟ್ 2026
Light
Dark

ಸರ್ಕಾರ ರಾಜ್ಯದ ಜನರ ಭರವಸೆ ನುಚ್ಚು ನೂರು ಮಾಡಿದೆ: ವಿಜಯೇಂದ್ರ ಆಕ್ರೋಶ

B.Y Vijayendra

ಕಲಬುರ್ಗಿ: ಸಿಎಂ ಸಿದ್ದರಾಮಯ್ಯ ಮಂಡಿಸಿದ ಬಜೆಟ್‌ಗೆ ಆಡಳಿತ ಪಕ್ಷದಲ್ಲೇ ವಿರೋಧ ವ್ಯಕ್ತವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ಮಾಡಿದ್ದಾರೆ.

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಜೆಟ್‌ ದೂರದೃಷ್ಟಿ ಇಲ್ಲದ ಬಜೆಟ್.‌ ಈ ಸರ್ಕಾರ ರಾಜ್ಯದ ಜನರ ಭರವಸೆಗಳನ್ನು ನುಚ್ಚು ನೂರು ಮಾಡಿದೆ. ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲ ಎಂದು ಹೇಳಿದರು.

ಇನ್ನು ಪ್ರಿಯಾಂಕ್‌ ಖರ್ಗೆ ಬರೀ ಅಂತರಾಷ್ಟ್ರೀಯ ವಿಷಯಗಳನ್ನು ಮಾತನಾಡಿ ಕಾಲ ಕಳೆಯುತ್ತಿದ್ದಾರೆ. ಅದನ್ನು ಬಿಟ್ಟು ಜಿಲ್ಲೆಯ ಅಭಿವೃದ್ಧಿ ಬಗ್ಗೆ ಯೋಚನೆ ಮಾಡಲಿ ಎಂದು ಟಾಂಗ್‌ ನೀಡಿದರು.

 

Tags:
error: Content is protected !!