ಬೆಂಗಳೂರು: ರಾಜ್ಯ ಸರ್ಕಾರದಲ್ಲಿ ಮೋಡ ಕವಿದ ವಾತಾವರಣವಿದ್ದು, ಯಾವಾಗ ಗುಡುಗು ಸಿಡಿಲು ಬರುತ್ತೋ ಗೊತ್ತಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಲೇವಡಿ ಮಾಡಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಇಬ್ಬರೂ ದೆಹಲಿಯಲ್ಲಿದ್ದರು. ರಾಹುಲ್ ಗಾಂಧಿ ಅವರ 10 ನಿಮಿಷ ಭೇಟಿ ಸಹ ಸಿಗದೇ ವಾಪಸ್ ಆಗಿದ್ದಾರೆ. ಇದರ ಅರ್ಥ ಸಿಎಂ ಹೈಕಮಾಂಡ್ ಮಧ್ಯೆ ಸಂಬಂಧ ಹಳಸಿದೆ ಎಂದರ್ಥ ಎಂದು ಲೇವಡಿ ಮಾಡಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಹಾಗೂ ಸರ್ಕಾರದ ಮಧ್ಯೆ ಎಲ್ಲವೂ ಸರಿಯಿಲ್ಲ ಎನ್ನುವುದು ಸತ್ಯ. ಇಬ್ಬರ ನಡುವಿನ ಹಗ್ಗ ಜಗ್ಗಾಟದಲ್ಲಿ ಕುರ್ಚಿ ಫೈಟ್ ನಡೆಯುತ್ತಿದೆ. ಇದರಿಂದ ರಾಜ್ಯದ ಜನರಿಗೆ ಒಳ್ಳೆಯದಾಗಲ್ಲ ಎಂದು ರಾಜ್ಯದಲ್ಲಿ ನಡೆಯುತ್ತಿರುವ ಬೆಳವಣಿಗೆ ಕುರಿತು ಕಿಡಿಕಾರಿದರು.





