ರಾಜ್ಯ

ಸರ್ಕಾರದಲ್ಲಿ ಮೋಡ ಕವಿದ ವಾತಾವರಣವಿದೆ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ

ಬೆಂಗಳೂರು: ರಾಜ್ಯ ಸರ್ಕಾರದಲ್ಲಿ ಮೋಡ ಕವಿದ ವಾತಾವರಣವಿದ್ದು, ಯಾವಾಗ ಗುಡುಗು ಸಿಡಿಲು ಬರುತ್ತೋ ಗೊತ್ತಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಲೇವಡಿ ಮಾಡಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ ಇಬ್ಬರೂ ದೆಹಲಿಯಲ್ಲಿದ್ದರು. ರಾಹುಲ್‌ ಗಾಂಧಿ ಅವರ 10 ನಿಮಿಷ ಭೇಟಿ ಸಹ ಸಿಗದೇ ವಾಪಸ್‌ ಆಗಿದ್ದಾರೆ. ಇದರ ಅರ್ಥ ಸಿಎಂ ಹೈಕಮಾಂಡ್‌ ಮಧ್ಯೆ ಸಂಬಂಧ ಹಳಸಿದೆ ಎಂದರ್ಥ ಎಂದು ಲೇವಡಿ ಮಾಡಿದರು.

ಇನ್ನು ಮುಂದುವರಿದು ಮಾತನಾಡಿದ ಅವರು, ಕಾಂಗ್ರೆಸ್‌ ಪಕ್ಷ ಹಾಗೂ ಸರ್ಕಾರದ ಮಧ್ಯೆ ಎಲ್ಲವೂ ಸರಿಯಿಲ್ಲ ಎನ್ನುವುದು ಸತ್ಯ. ಇಬ್ಬರ ನಡುವಿನ ಹಗ್ಗ ಜಗ್ಗಾಟದಲ್ಲಿ ಕುರ್ಚಿ ಫೈಟ್‌ ನಡೆಯುತ್ತಿದೆ. ಇದರಿಂದ ರಾಜ್ಯದ ಜನರಿಗೆ ಒಳ್ಳೆಯದಾಗಲ್ಲ ಎಂದು ರಾಜ್ಯದಲ್ಲಿ ನಡೆಯುತ್ತಿರುವ ಬೆಳವಣಿಗೆ ಕುರಿತು ಕಿಡಿಕಾರಿದರು.

ಆಂದೋಲನ ಡೆಸ್ಕ್

Recent Posts

ಆಸಕ್ತಿಗೆ ಅನುಗುಣವಾಗಿ ಉಚಿತ ಕೌಶಲ್ಯ ತರಬೇತಿ ನೀಡಿ: ಡಾ.ಕುಮಾರ

ಮಂಡ್ಯ: ಯುವಕ-ಯುವತಿಯರಿಗೆ ಆಸಕ್ತಿಯ ಕ್ಷೇತ್ರದಲ್ಲಿ ಉದ್ಯೋಗ ಮಾಡಲು ಉಚಿತ ಕೌಶಲ್ಯ ತರಬೇತಿ ಹಾಗೂ ಸ್ವಉದ್ಯೋಗ ನೀಡಲು ಮಾರ್ಗದರ್ಶನ ನೀಡಲು ಅಗತ್ಯ…

59 mins ago

ಜನರು ಹೆಚ್ಚು ಹೆಚ್ಚು ಗ್ಯಾಸ್‌ ಬುಕ್‌ ಮಾಡಬೇಡಿ: ಸಚಿವ ಕೆ.ಎಚ್.ಮುನಿಯಪ್ಪ ಮನವಿ

ಬೆಂಗಳೂರು: ರಾಜ್ಯದಲ್ಲಿ ಗ್ಯಾಸ್‌ ಸಿಲಿಂಡರ್‌ ಅಭಾವವಿದ್ದು, ಪರಿಸ್ಥಿತಿ ಗಂಭೀರವಾಗಿದೆ ಎಂದು ಆಹಾರ ಇಲಾಖೆ ಸಚಿವ ಕೆ.ಎಚ್.ಮುನಿಯಪ್ಪ ಮನವಿ ಮಾಡಿದ್ದಾರೆ. ಈ…

1 hour ago

ಯುದ್ಧದ ನಡುವೆಯೇ ಭಾರತಕ್ಕೆ ಗುಡ್‌ನ್ಯೂಸ್: 45,000 ಮೆಟ್ರಿಕ್‌ ಟನ್‌ ಎಲ್‌ಪಿಜಿ ಹೊತ್ತು ತಂದ ಹಡಗು

ಅಹಮದಾಬಾದ್:‌ 45,000 ಮೆಟ್ರಿಕ್‌ ಟನ್‌ ಎಲ್‌ಪಿಜಿ ಹೊತ್ತ ಶಿವಾಲಿಕ್‌ ಹಡಗು ಗುಜರಾತ್‌ನ ಮುಂದ್ರಾ ಬಂದರಿಗೆ ಬಂದು ತಲುಪಲಿದೆ. ಈ ಬಗ್ಗೆ…

2 hours ago

110 ಅಡಿಗೆ ಇಳಿದ ಕೆಆರ್‌ಎಸ್‌ ಜಲಾಶಯದ ನೀರಿನ ಮಟ್ಟ: ಕುಡಿಯುವ ನೀರಿಗಿಲ್ಲ ತೊಂದರೆ

ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನಲ್ಲಿರುವ ರೈತರ ಜೀವನಾಡಿ ಕೆಆರ್‌ಎಸ್‌ ಜಲಾಶಯದ ನೀರಿನ ಮಟ್ಟ 110.44 ಅಡಿಗೆ ಇಳಿದಿದೆ. ಈ ಬಗ್ಗೆ…

2 hours ago

ರಾಜ್ಯಾದ್ಯಂತ ಮಾರ್ಚ್.‌18ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭ

ಬೆಂಗಳೂರು: ಮಾರ್ಚ್.‌18ರಿಂದ ರಾಜ್ಯಾದ್ಯಂತ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಪ್ರಾರಂಭವಾಗಲಿವೆ. ಪರೀಕ್ಷಾ ಅಕ್ರಮಗಳನ್ನು ತಡೆಯಲು ಮತ್ತು ಪಾರದರ್ಶಕತೆ ಕಾಪಾಡಲು ಕಟ್ಟುನಿಟ್ಟಿನ ಮಾರ್ಗಸೂಚಿಗಳನ್ನು ಬಿಡುಗಡೆ…

3 hours ago

ನಾನಿನ್ನೂ ಬದುಕಿದ್ದೇನೆ: ಕ್ಯಾಮರಾ ಮುಂದೆ ಪ್ರತ್ಯಕ್ಷರಾದ ಇಸ್ರೇಲ್‌ ಪ್ರಧಾನಿ

ಜೆರುಸೇಲಂ: ನಾನಿನ್ನೂ ಬದುಕಿದ್ದೇನೆ ಎಂದು ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ಹೇಳಿದ್ದಾರೆ. ಸಾವಿನ ವದಂತಿಗಳ ನಡುವೆ ವಿಡಿಯೋದಲ್ಲಿ ಕಾಣಿಸಿಕೊಂಡು ಸಂದೇಶ…

3 hours ago