by vijayendra
ಬೆಂಗಳೂರು: ಬ್ಯಾಲೆಟ್ ಪೇಪರ್ ಜಾರಿಗೆ ತರುತ್ತಿರೋದು ಮೂರ್ಖತನದ ಪರಮಾವಧಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ಗೆ ಬ್ಯಾಲೆಟ್ ಪೇಪರ್ ನೆನಪಾಗಿದೆ. ಇವಿಎಂ ಮೇಲೆ ವಿಶ್ವಾಸ ಕಡಿಮೆಯಾಗಿದೆ. ಯಾಕೆ ಎಂದು ಸಿಎಂ, ಡಿಸಿಎಂ ಹೇಳಬೇಕು. ಮೂರು ಚುನಾವಣೆಗಳಲ್ಲಿ ಕಾಂಗ್ರೆಸ್ ಸೋತಿದೆ. ಜನ ಅವರನ್ನು ತಿರಸ್ಕರಿಸಿದ್ದಾರೆ. ಇದನ್ನು ಮುಚ್ಚಿಕೊಳ್ಳಲು ಇವಿಎಂ ಸರಿ ಇಲ್ಲ ಎನ್ನುತ್ತಿದ್ದಾರೆ. ನಾವು ಬ್ಯಾಲೆಟ್ ಪೇಪರ್‌ಗೆ ಹೆದರುತ್ತಿಲ್ಲ. ಅದರ ಅವಶ್ಯಕತೆ ಇಲ್ಲ ಎಂದರು.
ಇದನ್ನೂ ಓದಿ: ನಂಜನಗೂಡು: ಒತ್ತುವರಿಗಾಗಿ ಸ್ಮಶಾನಕ್ಕೆ ನಾಲೆ ಮಣ್ಣು
ಇನ್ನು ಇವಿಎಂಗಳಲ್ಲಿ ದೋಷ ಇದ್ದಿದ್ದರೆ ಹಿಮಾಚಲ ಪ್ರದೇಶ, ತೆಲಂಗಾಣ, ಕರ್ನಾಟಕಗಳಲ್ಲಿ ಕಾಂಗ್ರೆಸ್ ಹೇಗೆ ಅಧಿಕಾರಕ್ಕೆ ಬಂತು? ಮಹಾರಾಷ್ಟ್ರ, ಹರಿಯಾಣಗಳಲ್ಲಿ ಸೋತಿರುವ ಕಾಂಗ್ರೆಸ್ ಹತಾಶೆಯಿಂದ ಬ್ಯಾಲೆಟ್ ಪೇಪರ್ ಜಾರಿಗೆ ತರುತ್ತಿದ್ದಾರೆ. ಕಾಂಗ್ರೆಸ್ ಎಲ್ಲವನ್ನೂ ವಿರೋಧ ಮಾಡುತ್ತಿದೆ. ಬ್ಯಾಲೆಟ್ ಪೇಪರ್ ವಿರುದ್ಧ ಬಿಜೆಪಿಯಿಂದ ಹೋರಾಟ ಕೈಗೆತ್ತಿಕೊಳ್ಳುತ್ತೇವೆ ಎಂದು ತಿಳಿಸಿದರು.
ಮೈಸೂರು: ಅಕ್ಟೋಬರ್ 10ರಂದು ಮೈಸೂರಿನಲ್ಲಿ ಮಹಿಷ ದಸರಾ ಆಚರಣೆ ನಡೆಯಲಿದೆ. ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9 ಗಂಟೆಗೆ ಮಹಿಷ ಪ್ರತಿಮೆಗೆ…
ಬೆಂಗಳೂರು: ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…
ಚಾಮರಾಜನಗರ: ಗುಂಡ್ಲುಪೇಟೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಅರಣ್ಯ ರಸ್ತೆಯಲ್ಲಿ ರಸ್ತೆ ದಾಟುತ್ತಿದ್ದ ಕಾಡಾನೆಯ ಮೇಲೆಯೇ ಲಾರಿ ಚಲಾಯಿಸಲು ಯತ್ನಿಸಿದ…
ಮಂಡ್ಯ: ಇದೇ ಅಕ್ಟೋಬರ್.11ಕ್ಕೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ ನಡೆಯಲಿದೆ. ದಸರಾ ಉತ್ಸವದ ಪ್ರಯುಕ್ತ ನಡೆಯಲಿರುವ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಹನೂರು-ಪಾಲಾರ್ (ಎಲ್ಲೇಮಾಳ-ಕೌದಳ್ಳಿ) ಜಿಲ್ಲಾ ಮುಖ್ಯ…
ಮೈಸೂರು: ಗಣೇಶ ಹಬ್ಬಕ್ಕೆ ಹಾಸನದಿಂದ ಮೈಸೂರಿಗೆ ಬಂದಿದ್ದ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. 20 ವರ್ಷದ ಗೌರವ್…