Mysore
31
clear sky

Social Media

ಬುಧವಾರ, 04 ಮಾರ್ಚ್ 2026
Light
Dark

ಮುಡಾದಲ್ಲಿ 700 ಕೋಟಿ ರೂ. ಅಧಿಕ ಹಗರಣ ನಡೆಡಿದೆ: ಬಿ.ವೈ.ವಿಜಯೇಂದ್ರ

ಕಲಬುರುಗಿ: ಮುಡಾ ಪ್ರಕರಣದಲ್ಲಿ ಇಡಿ ತನಿಖೆ ನಡೆಸಿದ್ದು, ಈ ತನಿಖಾ ಸಂಸ್ಥೆಯಿಂದ ಲೋಕಾಯುಕ್ತಕ್ಕೆ ಬರೆದ ಪತ್ರದಲ್ಲಿ ಸುಮಾರು 700 ಕೋಟಿ ರೂಪಾಯಿಗೂ ಅಧಿಕ ಹಗರಣ ನಡೆದಿದೆ ಎಂಬ ವಿಚಾರವನ್ನು ಇಡಿಯೇ ತಿಳಿಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ.

ಕಲಬುರಗಿಯಲ್ಲಿ ಇಂದು(ಡಿ.4) ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಕುಟುಂಬಕ್ಕೆ ಮುಡಾದ 50:50 ಅನುಪಾತದ ಬದಲಿ 14 ನಿವೇಶನಗಳು ಅಕ್ರಮವಾಗಿ ಬಂದಿವೆ ಎಂಬ ಆರೋಪದಿಂದ ಹಿಂದೆ ಸರಿಯಲು ಆ ನಿವೇಶನಗಳನ್ನು ಪಾರ್ವತಿ ಸಿದ್ದರಾಮಯ್ಯ ಅವರು ಮುಡಾಗೆ ವಾಪಾಸ್‌ ಮಾಡಿದ್ದಾರೆ. ಆದರೆ ಇಡಿ ತನಿಖೆಯಲ್ಲಿ ಮುಡಾದಲ್ಲಿ 700 ಕೋಟಿ ರೂಪಾಯಿಗೂ ಅಧಿಕ ಹಗರಣ ನಡೆದಿದೆ ಎಂದು ತಿಳಿಸಿದೆ. ಹೀಗಾಗಿ ಬಡವರ ನಿವೇಶನಗಳು ಬ್ರೋಕರ್‌ ಪಾಲಾಗಿವೆ ಎಂದು ಹೇಳಿದ್ದಾರೆ.

ಈ ಹಿಂದೆ ಸಿಎಂ ಸಿದ್ದರಾಮಯ್ಯ ಅವರು ಮುಡಾದಲ್ಲಿ ಹಗರಣ ನಡೆದಿಲ್ಲ ಎಂದು ಹೇಳಿದ್ದರು. ಆದರೆ ನಮ್ಮ ಪಕ್ಷದಿಂದ 14 ನಿವೇಶನಗಳಿಗೆ ಸಂಬಂಧಿಸಿದಂತೆ ತನಿಖೆಗೆ ಆಗ್ರಹಿಸಿ ಹೋರಾಟ ನಡೆಸಿದ್ದೇವೆ. ಆದರೆ ಇದೀಗ ಮುಡಾ ಪ್ರಕರಣದಲ್ಲಿ ಇಡಿ ತನಿಖೆ ಶುರು ಮಾಡಿ ವಿಚಾರಣೆ ನಡೆಸಿದಾಗ 700 ಕೋಟಿ ರೂಪಾಯಿಗೂ ಹೆಚ್ಚು ಅವ್ಯವಹಾರ ನಡೆದಿದೆ ಎಂದು ವರದಿ ಮಾಡಿದೆ. ಹೀಗಾಗಿ ಬಡವರ ನಿವೇಶಗಳು ಬ್ರೋಕರ್‌ಗಳ ಮೂಲಕ ರಿಯಲ್‌ ಎಸ್ಟೇಟ್‌ ಹಾಗೂ ಶ್ರೀಮಂತರ ಪಾಲಾಗಿವೆ. ಈ ಬಗ್ಗೆ ಸಮಗ್ರ ತನಿಖೆಯಾಗಬೇಕು ಎಂದು ಒತ್ತಾಯಿಸಿದ್ದಾರೆ.

Tags:
error: Content is protected !!