ಕಲಬುರುಗಿ: ಮುಡಾ ಪ್ರಕರಣದಲ್ಲಿ ಇಡಿ ತನಿಖೆ ನಡೆಸಿದ್ದು, ಈ ತನಿಖಾ ಸಂಸ್ಥೆಯಿಂದ ಲೋಕಾಯುಕ್ತಕ್ಕೆ ಬರೆದ ಪತ್ರದಲ್ಲಿ ಸುಮಾರು 700 ಕೋಟಿ ರೂಪಾಯಿಗೂ ಅಧಿಕ ಹಗರಣ ನಡೆದಿದೆ ಎಂಬ ವಿಚಾರವನ್ನು ಇಡಿಯೇ ತಿಳಿಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ.
ಕಲಬುರಗಿಯಲ್ಲಿ ಇಂದು(ಡಿ.4) ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಕುಟುಂಬಕ್ಕೆ ಮುಡಾದ 50:50 ಅನುಪಾತದ ಬದಲಿ 14 ನಿವೇಶನಗಳು ಅಕ್ರಮವಾಗಿ ಬಂದಿವೆ ಎಂಬ ಆರೋಪದಿಂದ ಹಿಂದೆ ಸರಿಯಲು ಆ ನಿವೇಶನಗಳನ್ನು ಪಾರ್ವತಿ ಸಿದ್ದರಾಮಯ್ಯ ಅವರು ಮುಡಾಗೆ ವಾಪಾಸ್ ಮಾಡಿದ್ದಾರೆ. ಆದರೆ ಇಡಿ ತನಿಖೆಯಲ್ಲಿ ಮುಡಾದಲ್ಲಿ 700 ಕೋಟಿ ರೂಪಾಯಿಗೂ ಅಧಿಕ ಹಗರಣ ನಡೆದಿದೆ ಎಂದು ತಿಳಿಸಿದೆ. ಹೀಗಾಗಿ ಬಡವರ ನಿವೇಶನಗಳು ಬ್ರೋಕರ್ ಪಾಲಾಗಿವೆ ಎಂದು ಹೇಳಿದ್ದಾರೆ.
ಈ ಹಿಂದೆ ಸಿಎಂ ಸಿದ್ದರಾಮಯ್ಯ ಅವರು ಮುಡಾದಲ್ಲಿ ಹಗರಣ ನಡೆದಿಲ್ಲ ಎಂದು ಹೇಳಿದ್ದರು. ಆದರೆ ನಮ್ಮ ಪಕ್ಷದಿಂದ 14 ನಿವೇಶನಗಳಿಗೆ ಸಂಬಂಧಿಸಿದಂತೆ ತನಿಖೆಗೆ ಆಗ್ರಹಿಸಿ ಹೋರಾಟ ನಡೆಸಿದ್ದೇವೆ. ಆದರೆ ಇದೀಗ ಮುಡಾ ಪ್ರಕರಣದಲ್ಲಿ ಇಡಿ ತನಿಖೆ ಶುರು ಮಾಡಿ ವಿಚಾರಣೆ ನಡೆಸಿದಾಗ 700 ಕೋಟಿ ರೂಪಾಯಿಗೂ ಹೆಚ್ಚು ಅವ್ಯವಹಾರ ನಡೆದಿದೆ ಎಂದು ವರದಿ ಮಾಡಿದೆ. ಹೀಗಾಗಿ ಬಡವರ ನಿವೇಶಗಳು ಬ್ರೋಕರ್‌ಗಳ ಮೂಲಕ ರಿಯಲ್ ಎಸ್ಟೇಟ್ ಹಾಗೂ ಶ್ರೀಮಂತರ ಪಾಲಾಗಿವೆ. ಈ ಬಗ್ಗೆ ಸಮಗ್ರ ತನಿಖೆಯಾಗಬೇಕು ಎಂದು ಒತ್ತಾಯಿಸಿದ್ದಾರೆ.
ಬೆಂಗಳೂರು : ಬಂಡೀಪುರ ಮತ್ತು ನಾಗರಹೊಳೆಯಲ್ಲಿ ಹಂತ ಹಂತವಾಗಿ ಸಫಾರಿ ಆರಂಭಿಸಲು ಮತ್ತು ಧಾರಣಾ ಶಕ್ತಿ ಮತ್ತು ಹುಲಿಗಳು ನಾಡಿನತ್ತ…
ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತವರು ಜಿಲ್ಲೆ ಮೈಸೂರಿನಲ್ಲಿ ಎರಡು ದಿನಗಳ ಕಾಲ ಪ್ರವಾಸ ಹಮ್ಮಿಕೊಂಡಿದ್ದಾರೆ. ಜ.5ರಂದು ಬೆಳಿಗ್ಗೆ…
ಮೈಸೂರು : ಅರಮನೆ ನಗರಿ ಮೈಸೂರಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಚಾಮುಂಡಿಬೆಟ್ಟದ ಸಂರಕ್ಷಣೆ ಮತ್ತು ಉಳಿವಿಗಾಗಿ ಜ.4ರಂದು(ಭಾನುವಾರ) ಜಾಗೃತಿ ಆಂದೋಲನವನ್ನು…
ಭೋಪಾಲ್ : ಇಂದೋರ್‌ನ ಭಗೀರಥಪುರದಲ್ಲಿ ಕಲುಷಿತ ಕುಡಿಯುವ ನೀರು ಸೇವನೆಯಿಂದ 11 ಜೀವಗಳು ಬಲಿಯಾಗಿವೆ. ಮತ್ತು 1400ಕ್ಕೂ ಹೆಚ್ಚು ನಿವಾಸಿಗಳ…
ಬೆಂಗಳೂರು : ಬ್ಯಾನರ್ ಕಟ್ಟುವ ವಿಷಯದಲ್ಲಿ ಕಳೆದ ರಾತ್ರಿ ಬಳ್ಳಾರಿ ನಗರದಲ್ಲಿ ನಡೆದ ಘಟನೆಯ ಕುರಿತು ಉಚ್ಚ ನ್ಯಾಯಾಲಯದ ಹಾಲಿ…
ಬೆಂಗಳೂರು : ಬಳ್ಳಾರಿಯಲ್ಲಿ ಗುರುವಾರ ರಾತ್ರಿ ವಾಲ್ಮೀಕಿ ಬ್ಯಾನರ್ ವಿಚಾರದಲ್ಲಿ ನಡೆದ ಎರಡು ಗುಂಪುಗಳ ಘರ್ಷಣೆ ವೇಳೆ ಫೈರಿಂಗ್ ಆಗಿ…