ಬೆಳಗಾವಿ: ರಾಜ್ಯದಲ್ಲಿ ಬಾಣಂತಿಯರ ಸಾವಿಗೆ ಕಾರಣವಾದ ಜನವಿರೋಧಿ ಕಾಂಗ್ರೆಸ್ ಸರ್ಕಾರಕ್ಕೆ ನನ್ನ ಧಿಕ್ಕಾರವಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೆಳಗಾವಿಯಲ್ಲಿ ಇಂದು(ಡಿಸೆಂಬರ್.16) ಬಾಣಂತಿಯರ ಸರಣಿ ಸಾವು, ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯವನ್ನು ಖಂಡಿಸಿ ಬಿಜೆಪಿ ಮಹಿಳಾ ಮೋರ್ಚಾದ ವತಿಯಿಂದ ಆಯೋಜಿಸಿದ್ದ ಬೃಹತ್ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಆರೋಗ್ಯ ಇಲಾಖೆಯನ್ನು ಸಂಪೂರ್ಣ ಕಡೆಗಣಿಸಿರುವ ಕಾಂಗ್ರೆಸ್ ಸರ್ಕಾರದ ಬೇಜವಾಬ್ದಾರಿ ದುರಾಡಳಿತದಲ್ಲಿ ಇಲಾಖೆಯ ಅಕ್ರಮ, ಭ್ರಷ್ಟಾಚಾರಗಳು ಲೋಕಾಯುಕ್ತ ದಾಳಿಯಿಂದ ಬಯಲಾಗುತ್ತಿವೆ ಎಂದು ವಾಗ್ದಾಳಿ ನಡೆಸಿದ್ದಾರೆ.
ನಿರಂತರವಾಗಿ ಬಡಕುಟುಂಬಗಳ ತಾಯಂದಿರು ಹಾಗೂ ಹಸುಗೂಸುಗಳ ಸಾವು ನೋವುಗಳಾಗುತ್ತಿದ್ದರೂ ಬೇಜವಾಬ್ದಾರಿ ವರ್ತನೆ ತೋರುತ್ತಿರುವ ಸರ್ಕಾರದ ಧೋರಣೆ ಖಂಡನೀಯವಾಗಿದೆ. ಶೀಘ್ರವೇ ಮೃತ ತಾಯಂದಿರಿಗೆ ಪರಿಹಾರ ಕಲ್ಪಿಸಿ ಘಟನೆಗಳಿಗೆ ಕಾರಣರಾದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
ಪ್ರೊ.ರವಿವರ್ಮಕುಮಾರ್, ಸಮಾಜವಾದಿ ಚಿಂತಕರು ಹಾಗೂ ಮಾಜಿ ಅಡ್ವೋಕೇಟ್ ಜನರಲ್ ಇಂದು ಕಿಶನ್ ಜನ್ಮದಿನ; ಅವರ ನೆನಪು ನಮ್ಮೊಡನೆ ಸದಾ ಹಸಿರಾಗಿರಲಿ.…
ನವೀನ್ ಡಿಸೋಜ ಮಡಿಕೇರಿಯಲ್ಲಿ ನಡೆದ ಸಾರಿಗೆ ಪ್ರಾಧಿಕಾರದ ಸಭೆಯಲ್ಲಿ ದರ ಹೆಚ್ಚಳಕ್ಕೆ ನಿರ್ಧಾರ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಆಟೋ ರಿಕ್ಷಾ…
ಎಚ್.ಎಸ್.ದಿನೇಶ್‌ಕುಮಾರ್ ಮೈಸೂರು: ಕುರಿ ಸಾಕಾಣಿಕೆ, ಹೈನುಗಾರಿಕೆ ಹೀಗೆ ರೈತರಿಗೆ ಉಪಯೋಗವಾಗುವಂತಹ ಹಲವಾರು ಯೋಜನೆಗಳನ್ನು ರಾಜ್ಯ ಸರ್ಕಾರ ಹಮ್ಮಿಕೊಂಡಿದೆ. ಇದೀಗ ರೈತರು…
ಕೆ.ಬಿ.ರಮೇಶನಾಯಕ ಮೈಸೂರು: ರಾಜ್ಯದಲ್ಲಿ ಜುಲೈ ೨೦ಕ್ಕೆ ತೆರವಾಗಲಿರುವ ವಿಧಾನಪರಿಷತ್‌ನ ಐದು ನಾಮನಿರ್ದೇಶಿತ ಸ್ಥಾನಗಳಿಗೆ ಸದಸ್ಯರನ್ನು ನೇಮಕ ಮಾಡುವುದಕ್ಕೆ ದಿನಗಣನೆ ಶುರುವಾಗಿದೆ.…
ಮೈಸೂರು : ಭಾನುವಾರವಷ್ಟೇ ಎರಡು ನಗರದ ಎರಡು ಹೋಟೆಲ್‌ಗಳಿಗೆ ಬಾಂಬ್ ಇಟ್ಟಿರುವುದಾಗಿ ಬೆದರಿಕೆಯ ಇ-ಮೇಲ್ ಬಂದಿತ್ತು. ಇದೀಗ ಚಾಮರಾಜನಗರ ನ್ಯಾಯಾಲಯಕ್ಕೆ…