ರಾಜ್ಯ

ಪಕ್ಷಕ್ಕೆ ದುಡಿದ ಯಡಿಯೂರಪ್ಪನವರನ್ನು ನಿಂದಿಸಿದರೆ ಸಹಿಸಲು ಸಾಧ್ಯವಿಲ್ಲ: ಬಿ.ವೈ.ವಿಜಯೇಂದ್ರ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಬಿಜೆಪಿ ಪಕ್ಷಕ್ಕೆ ದುಡಿದ್ದಾರೆ. ಅಂತಹವರನ್ನು ಅತ್ಯಂತ ಕೀಳುಮಟ್ಟದಲ್ಲಿ ನಿಂದಿಸಿದರೆ ಅದನ್ನು ಸಹಿಸಲು ಸಾಧ್ಯವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.

ನಗರದ ಬಿಜೆಪಿ ಕಚೇರಿಯಲ್ಲಿ ಇಂದು(ಫೆಬ್ರವರಿ.6) ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಕ್ಷದಲ್ಲಿ ತಟಸ್ಥ ಎಂದು ಹೇಳಿಕೊಳ್ಳುವ ನಾಯಕರು ಮೊದಲಿಗೆ ಬಿ.ಎಸ್‌.ಯಡಿಯೂರಪ್ಪ ವಿರುದ್ಧ ತೇಜೋವಧೆ ಮಾಡುತ್ತಿರುವವರ ಬಾಯಿ ಮುಚ್ಚಿಸಲಿ. ಯಡಿಯೂರಪ್ಪ ಅವರು ಪಕ್ಷಕ್ಕೆ ಏನು ಕೊಡುಗೆ ನೀಡಿಲ್ಲವೇ ಎಂದು ಪ್ರಶ್ನಿಸಿದರು.

ನಾನು ಯಾವುದೇ ಅಪಮಾನ ಸಹಿಸಿಕೊಳ್ಳಲು ತಯಾರಿದ್ದೇನೆ. ಆದರೆ ಬಿಜೆಪಿ ಪಕ್ಷಕ್ಕೆ ದುಡಿದ ಯಡಿಯೂರಪ್ಪ ಅವರನ್ನು ಅತ್ಯಂತ ಕೀಳು ಮಟ್ಟದಲ್ಲಿ ನಿಂದಿಸುವುದನ್ನು ಸಹಿಸಲು ಸಾಧ್ಯವಿಲ್ಲ. ಇನ್ನೂ ತಟಸ್ಥವೆಂದು ಹೇಳಿಕೊಳ್ಳುವವರು ಮತ್ತು ಪಕ್ಷದ ಬೆಳವಣಿಗೆ ಬೇಸರ ತಂದಿದೆ ಎಂದು ಹೇಳುವವರು ಯಾಕೆ ಸುಮ್ಮನಿದ್ದಾರೆ? ಮಧ್ಯಸ್ಥಿಕೆ ಯಾಕೆ ವಹಿಸುತ್ತಿಲ್ಲ? ತಟಸ್ಥ ಬಣ ವಿಚಾರದ ಬಗ್ಗೆಯೂ ತಿಳಿದಿದೆ ಎಂದರು.

ನಾನು ಪಕ್ಷದ ಕಾರ್ಯಕರ್ತನಾಗಿ ವಿವಿಧ ಹುದ್ದೆಗಳಲ್ಲಿ 18 ವರ್ಷಕ್ಕೂ ಅಧಿಕ ಕಾಲ ಕಾರ್ಯ ನಿರ್ವಹಿಸಿದ್ದೇನೆ. ನಾನೇನು ಹೊಸಬನಲ್ಲ, ಲಕ್ಷಾಂತರ ಕಾರ್ಯಕರ್ತರಿಗೆ ನಾನು ಏನೆಂಬು ಗೊತ್ತಿದೆ. ಅಲ್ಲದೇ ಪಕ್ಷದಲ್ಲಿ ಇವೆಲ್ಲನ್ನೂ ಸರಿಪಡಿಸಲು ಪಕ್ಷದ ರಾಷ್ಟ್ರೀಯ ನಾಯಕರೇ ಬರಬೇಕಾ? ತಟಸ್ಥ ನಾಯಕರಿಗೂ ಜವಾಬ್ದಾರಿ ಇಲ್ಲವಾ? ಇನ್ನೂ ಅಡ್ರೆಸ್‌ಗೆ ಇಲ್ಲದವರೂ ಯಡಿಯೂರಪ್ಪರವರಿಂದಲೇ ಮೇಲೆ ಬಂದಿದ್ದಾರೆ ಎಂದು ಹೇಳಿದರು.

ಇನ್ನೂ ಶ್ರೀರಾಮುಲು ಅವರ ಹೇಳಿಕೆಯಿಂದ ನನಗೆ ಬೇಸರವಿಲ್ಲ. ನನಗೆ ಅವರಷ್ಟು ಅನುಭವವಿಲ್ಲದಿರಬಹುದು, ಆದರೆ  ನನಗೆ ಕಾರ್ಯಕರ್ತನಾಗಿ ಅನುಭವವಿದೆ ಎಂದು ತಿರುಗೇಟು ನೀಡಿದರು.

ಅರ್ಚನ ಎಸ್‌ ಎಸ್

Recent Posts

ಪ್ರೀತಿಗೆ ನಿರಾಕರಣೆ: ಮೈಸೂರಿನಲ್ಲಿ ಬೆಚ್ಚಿಬೀಳಿಸಿದ ಒನ್‌ ಸೈಡ್‌ ಲವ್‌ ಕೃತ್ಯ

ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…

4 mins ago

ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣ: ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಅಧ್ಯಕ್ಷ ಶಿವಕುಮಾರ್ ಅರೆಸ್ಟ್​!

ಮಂಡ್ಯ: ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…

2 hours ago

ಭಾರೀ ಮಳೆಗೆ ರೈತರ ಬೆಳೆ ನಾಶ: ಲಕ್ಷಾಂತರ ರೂ. ನಷ್ಟ, ಮನೆ ಗೋಡೆ ಕುಸಿತ

ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…

2 hours ago

ಸ್ಕೂಲ್ ಬಸ್‌ ಹರಿದು ಒಂದೂವರೆ ವರ್ಷದ ಮಗು ಸಾವು

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…

3 hours ago

ಓದುಗರ ಪತ್ರ: ‘ಪ್ರತಾಪ’ಕ್ಕೆ ಸವಾಲು ಈ ನೀಲಿ

‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…

8 hours ago

ಓದುಗರ ಪತ್ರ: ಟೆಲಿಕಾಂ ಕಂಪೆನಿಗಳ ಹಗಲು ದರೋಡೆ ನಿಯಂತ್ರಿಸಿ

ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…

8 hours ago