ಬೆಂಗಳೂರು: ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರಿಗೆ ನಿನ್ನೆ ಬೆದರಿಕೆ ಪತ್ರ ಬಂದಿದ್ದು, ಅವರ ರಕ್ಷಣೆಗೆ ವಿಶೇಷ ಭದ್ರತೆ ಒದಗಿಸಬೇಕು ಎಂದು ಬಿಜೆಪಿ ರಾಜಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಗ್ರಹಿಸಿದ್ದಾರೆ.
ಈ ಕುರಿತು ಸಾಮಾಜಿಕ ಮಾಧ್ಯಮ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಬೆಳಗಾವಿಯ ಸುವರ್ಣ ಸೌಧದಲ್ಲಿ ನಮ್ಮ ಪಕ್ಷದ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರ ಮೇಲೆ ಪ್ರಜಾಪ್ರಭುತ್ವವನ್ನು ನಾಚಿಸುವ ರೀತಿಯಲ್ಲಿ ದೌರ್ಜನ್ಯ ಹಾಗೂ ಹಲ್ಲೆಗೆ ಯತ್ನ ನಡೆಯಿತು. ಅದರ ನಂತರವೂ ಅವರ ವಿರುದ್ಧ ನಿರಂತರ ಬೆದರಿಕೆ ಒಡ್ಡಲಾಗುತ್ತಿದೆ. ಅದರ ಮುಂದುವರಿದ ಭಾಗವಾಗಿ ನಿನ್ನೆ(ಜನವರಿ.10) ಅವರಿಗೆ ಬೆದರಿಕೆ ಪತ್ರ ರವಾನೆಯಾಗಿರುವುದು ಅತ್ಯಂತ ಆತಂಕಕಾರಿ ವಿಷಯವಾಗಿದೆ ಎಂದಿದ್ದಾರೆ.
ಸಿ.ಟಿ. ರವಿ ಅವರನ್ನು ಗುರಿಯನ್ನಾಗಿಸಿಕೊಂಡಿರುವ ದುಷ್ಕರ್ಮಿಗಳು ಅವರ ವಿರುದ್ಧ ವ್ಯೂಹ ರಚಿಸಿರುವ ಸಾಧ್ಯತೆಯನ್ನು ಅವರಿಗೆ ಬಂದಿರುವ ಬೆದರಿಕೆಯ ಸಂದೇಶಗಳ ಹಿನ್ನೆಲೆಯಲ್ಲಿ ತಳ್ಳಿ ಹಾಕಲಾಗದು. ಈ ನಿಟ್ಟಿನಲ್ಲಿ ಕಾಂಗ್ರೆಸ್ ಸರ್ಕಾರದಿಂದ ಅವರಿಗೆ ರಕ್ಷಣೆ ಸಿಗುತ್ತದೆ ಎಂದು ನಿರೀಕ್ಷಿಸುವುದು “ಮಾರ್ಜಾಲ ನ್ಯಾಯದಂತಾಗುತ್ತದೆ” ಎಂದು ವ್ಯಂಗ್ಯವಾಡಿದ್ದಾರೆ.
ಸಿ.ಟಿ. ರವಿ ಅವರಿಗೆ ಬೆದರಿಕೆ ಒಡ್ಡಲಾಗುತ್ತಿರುವ ಶಕ್ತಿಗಳು ಯಾವುದು ಎಂಬುದು ಸರ್ಕಾರ ಹಾಗೂ ಪೊಲೀಸರಿಗೆ ತಿಳಿದೇ ಇದೆ. ಇಷ್ಟಾಗಿಯೂ ದುಷ್ಟ ಶಕ್ತಿಗಳ ಮೇಲೆ ಯಾಕೆ ಕ್ರಮ ಕೈಗೊಳ್ಳುತ್ತಿಲ್ಲ. ಏಕೆಂದರೆ ಅವರು ಕಾಂಗ್ರೆಸ್ ಪಕ್ಷದ ಭಾಗವೇ ಆಗಿದ್ದಾರೆ ಎಂಬುದು ಬಹಿರಂಗ ಸತ್ಯವಾಗಿದೆ. ಈ ನಿಟ್ಟಿನಲ್ಲಿ ಸಿ.ಟಿ. ರವಿ ಅವರ ರಕ್ಷಣೆಗೆ ವಿಶೇಷ ಭದ್ರತೆ ಒದಗಿಸಲು ಒತ್ತಾಯಿಸಿದ್ದಾರೆ.
ಶಾಸಕ ಸಿ.ಟಿ. ರವಿ ಹಾಗೂ ಬಿಜೆಪಿ ಕಾರ್ಯಕರ್ತರ ಮೇಲೆ ಇಂತಹ ಬೆದರಿಕೆ, ದೌರ್ಜನ್ಯಗಳು ಮುಂದುವರೆದಲ್ಲಿ ಬಿಜೆಪಿ ಅದನ್ನು ಸವಾಲಾಗಿ ಸ್ವೀಕರಿಸಿ ಹೋರಾಡಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.
ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಮಲೆಮಹದೇಶ್ವರ ವನ್ಯಧಾಮ ವ್ಯಾಪ್ತಿಯ ಹೂಗ್ಯಂ ವಲಯದ ಅರಣ್ಯ ಪ್ರದೇಶದಲ್ಲಿ ಹೆಣ್ಣಾನೆಯೊಂದು ಮೃತಪಟ್ಟಿದೆ. ಹನೂರು…
ವಡೋದರಾ: ಬರೋಡಾ ವಿರುದ್ಧದ ಕ್ವಾಟರ್ ಫೈನಲ್ ಪಂದ್ಯದಲ್ಲಿ 5 ರನ್‌ಗಳಿಂದ ಗೆಲುವು ಸಾಧಿಸುವ ಮೂಲಕ ಕರ್ನಾಟಕ ತಂಡ ವಿಜಯ್ ಹಜಾರೆ…
ಮೈಸೂರು: ಇಲ್ಲಿನ ಇನ್ಫೋಸಿಸ್ ಆವರಣದಲ್ಲಿ ಚಿರತೆ ಸೆರೆ ಕಾರ್ಯಾಚರಣೆ ಮುಂದುವರಿದಿದ್ದು, ಇಂದು ಸಹ ಚಿರತೆ ಪತ್ತೆಯಾಗಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.…
ಬೆಂಗಳೂರು: ಕೇಂದ್ರ ಸರ್ಕಾರ ಉತ್ತರ ಪ್ರದೇಶಕ್ಕೆ 30 ಸಾವಿರ ಕೋಟಿ ತೆರಿಗೆ ಹಂಚಿಕೆ ಮಾಡಿದ್ದು, ಕರ್ನಾಟಕಕ್ಕೆ ಕೇವಲ 6 ಸಾವಿರ…
ಹೈದರಾಬಾದ್: ಪುಷ್ಪ-2 ಕಾಲ್ತುಳಿತ ಪ್ರಕರಣದಲ್ಲಿ ತೆಲುಗಿನ ಖ್ಯಾತ ನಟ ಅಲ್ಲು ಅರ್ಜುನ್‌ಗೆ ಬಿಗ್ ರಿಲೀಫ್ ಸಿಕ್ಕಿದೆ. ಸ್ಥಳೀಯ ನ್ಯಾಯಾಲಯವೊಂದು ಅವರ…
ವಿಜಯಪುರ: ಸಿಎಂ ಸಿದ್ದರಾಮಯ್ಯ ಅವರೇ ನಕ್ಸಲರಿಗೆ ಶರಣಾಗುವ ಮೂಲಕ ವಿಶೇಷ ಪ್ಯಾಕೇಜ್ ನೀಡಿದ್ದಾರೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್…