ರಾಜ್ಯ

ನಮ್ಮ ರಾಜ್ಯ ಇಂದು ದರೋಡೆಕೋರರು, ಅತ್ಯಾಚಾರಿಗಳ ತಾಣವೆಂಬ ಖ್ಯಾತಿ ಒಳಗಾಗುತ್ತಿದೆ: ಬಿ.ವೈ.ವಿಜಯೇಂದ್ರ

ಬೆಂಗಳೂರು: ಕರ್ನಾಟಕ ಎಂದರೆ ಸಂಸ್ಕೃತಿ, ಸಂಸ್ಕಾರ ಹಾಗೂ ಸುರಕ್ಷತೆಗೆ ಖ್ಯಾತಿ ಪಡೆದಿದ್ದು, ಆದರೆ ಇಂದು ನಮ್ಮ ರಾಜ್ಯ ದರೋಡೆಕೋರರು ಹಾಗೂ ಅತ್ಯಾಚಾರಿಗಳ ತಾಣವೆಂಬ ಖ್ಯಾತಿಗೆ ಒಳಗಾಗುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.

ಈ ಕುರಿತು ಸಾಮಾಜಿಕ ಮಾಧ್ಯಮ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಸಂಸ್ಕೃತಿ, ಸಂಸ್ಕಾರ, ಸುರಕ್ಷತೆ ಎಂದರೆ ಕರ್ನಾಟಕ ಎಂಬ ಖ್ಯಾತಿ ಪಡೆದಿದ್ದ ನಮ್ಮ ರಾಜ್ಯ ದರೋಡೆಕೋರರು ಹಾಗೂ ಅತ್ಯಾಚಾರಿಗಳ ತಾಣ ಎಂಬ ಕುಖ್ಯಾತಿಗೆ ಒಳಗಾಗುತ್ತಿರುವುದು ಅತ್ಯಂತ ಆತಂಕಕಾರಿ ಬೆಳವಣಿಗೆಯಾಗಿದೆ ಎಂದಿದ್ದಾರೆ.

ರಾಜಧಾನಿ ಬೆಂಗಳೂರಿನ ಕೆ.ಆರ್.ಮಾರುಕಟ್ಟೆ ಬಳಿ ಬಸ್ಸಿಗಾಗಿ ಕಾಯುತ್ತಿದ್ದ ಒಬ್ಬಂಟಿ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ಹಾಗೂ ದರೋಡೆ ನಡೆದಿರುವ ವರದಿ ಅತ್ಯಂತ ಹೇಯ ಹಾಗೂ ಅಮಾನವೀಯ ಘಟನೆಯಾಗಿದ್ದು ಸ್ತ್ರೀ ಕುಲಕ್ಕೆ ರಕ್ಷಣೆ ನೀಡಲು ಸಾಧ್ಯವಾಗದ ಪರಿಸ್ಥಿತಿಗೆ ರಾಜ್ಯದ ಕಾನೂನು ಸುವ್ಯವಸ್ಥೆ ಬಂದು ತಲುಪಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಕೇವಲ ಕಾಂಗ್ರೆಸ್‌ ಸರ್ಕಾರದಲ್ಲೀಗ ನಡೆಯುತ್ತಿರುವುದು ಗುಂಪುಗಾರಿಕೆಯ ರಾಜಕಾರಣ ಹಾಗೂ ಕಾಂಗ್ರೆಸ್ ಉತ್ಸವಗಳು ಮಾತ್ರ. ಜನಹಿತ ಹಾಗೂ ಸಮಾಜ ಸುರಕ್ಷತೆಯನ್ನು ಮರೆತಿರುವ ಈ ಸರ್ಕಾರದ ವ್ಯವಸ್ಥೆಯಲ್ಲಿ ನಾಗರೀಕರು ಅಸುರಕ್ಷತೆಯ ವಾತಾವರಣವನ್ನು ಎದುರಿಸುತ್ತಿದ್ದಾರೆ. ಅಲ್ಲದೇ ಈ ರಾಜ್ಯದಲ್ಲಿ ಪೊಲೀಸ್ ವ್ಯವಸ್ಥೆ ಇದೆಯೇ? ಗೃಹ ಇಲಾಖೆ ಇದೆಯೇ? ಒಂದು ಸರ್ಕಾರ ಈ ರಾಜ್ಯವನ್ನು ಆಳುತ್ತಿದೆಯೇ? ಎಂಬ ಪ್ರಶ್ನೆ ಜನಸಾಮಾನ್ಯರಿಂದ ಕೇಳಿ ಬರುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನೂ ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರದಿಂದ ಒಂದು ಕಡೆ ಅಭಿವೃದ್ಧಿಯೂ ಇಲ್ಲ, ಮತ್ತೊಂದು ಕಡೆ ಆಡಳಿತ ನಿರ್ವಹಣೆಯಲ್ಲಿಯೂ ಸಂಪೂರ್ಣ ವಿಫಲವಾಗಿದೆ. ಕನಿಷ್ಠ ಕಾನೂನು ಸಂರಕ್ಷಣೆಯನ್ನಾದರೂ ಒದಗಿಸಲಾಗದ ಈ ಸರ್ಕಾರ ಯಾವ ಮುಖ ಹೊತ್ತುಕೊಂಡು ಅಧಿಕಾರದಲ್ಲಿದೆ ಎಂದು ಜನ ಪ್ರಶ್ನಿಸುತ್ತಿದ್ದಾರೆ. ಜೊತೆಗೆ ಬೆಂಗಳೂರಿನಲ್ಲಿ ನಡೆದಿರುವ ಅತ್ಯಾಚಾರ ಪ್ರಕರಣವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿ ಅತ್ಯಾಚಾರಿ ದುರುಳರನ್ನು ಪತ್ತೆ ಹಚ್ಚಿ ಕಠಿಣ ಕ್ರಮಕ್ಕೆ ಒಳಪಡಿಸಲಿ ಎಂದು ಆಗ್ರಹಿಸಿದ್ದಾರೆ.

ಸರಣಿ ರೂಪದಲ್ಲಿ ನಡೆಯುತ್ತಿರುವ ಕೊಲೆ, ದರೋಡೆ ಪ್ರಕರಣಗಳು, ಮಹಿಳೆಯರ ಮೇಲಿನ ದೌರ್ಜನ್ಯ ಹಾಗೂ ಅತ್ಯಾಚಾರ ಪ್ರಕರಣಗಳಿಂದ ನಾಗರಿಕ ಸಮಾಜ ತಲೆ ತಗ್ಗಿಸುವಂತಾಗಿದ್ದು, ರಾಜ್ಯದಲ್ಲಿ ಅರಾಜಕತೆ ಪರಿಸ್ಥಿತಿ ಉಂಟಾಗಿರುವುದನ್ನು ಸಾಕ್ಷೀಕರಿಸುತ್ತಿದೆ. ಇಂತಹ ಘಟನೆಗಳು ಮರುಕಳಿಸುತ್ತಿದ್ದರೆ ಈ ಸರ್ಕಾರಕ್ಕೆ ಜನರೇ ತಕ್ಕಪಾಠ ಕಲಿಸುವ ಪರಿಸ್ಥಿತಿ ಉದ್ಭವಿಸುವುದರಲ್ಲಿ ಯಾವುದೇ ಅನುಮಾನವಿಲ್ಲ. ಹೀಗಾಗಿ ಬಜೆಪಿ ಪಕ್ಷವೂ ಈ ನಿಟ್ಟಿನಲ್ಲಿ ರಾಜ್ಯದ ಕಾನೂನು ಸುವ್ಯವಸ್ಥೆಯ ಭದ್ರತೆಗಾಗಿ ಹೋರಾಡಲಿದೆ.

ಅರ್ಚನ ಎಸ್‌ ಎಸ್

Recent Posts

ನನಗೂ ಸಿಎಂ ಆಗಬೇಕು ಎನ್ನುವ ಆಸೆ ಇದೆ: ಸಚಿವ ದಿನೇಶ್‌ ಗುಂಡೂರಾವ್‌

ಮೈಸೂರು: ಪಕ್ಷದಲ್ಲಿ ಎಲ್ಲರಿಗೂ ಸಿಎಂ ಆಗಬೇಕು ಎನ್ನುವ ಆಸೆ ಇದೆ ಎಂದು ಆರೋಗ್ಯ ಇಲಾಖೆ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದರು.…

21 mins ago

ಮಾಸ್ಕ್‌ ಮ್ಯಾನ್‌ ಚಿನ್ನಯ್ಯನಿಗೆ ಜಾಮೀನು ಸಿಕ್ಕರೂ ಬಿಡುಗಡೆ ಭಾಗ್ಯವಿಲ್ಲ

ಮಂಗಳೂರು: ಧರ್ಮಸ್ಥಳದಲ್ಲಿ ಶವಹೂತ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರನಾಗಿ ಬಂದ ಬಳಿಕ ಆರೋಪಿಯಾಗಿ ಜೈಲಿನಲ್ಲಿರುವ ಮಾಸ್ಕ್‌ ಮ್ಯಾನ್‌ ಚಿನ್ನಯ್ಯನಿಗೆ ಜಾಮೀನು ಸಿಕ್ಕಿ…

31 mins ago

ಜಗದ್ಗುರು ಶ್ರೀ ಶಿವರಾತ್ರಿ ಡಾ.ರಾಜೇಂದ್ರ ಶ್ರೀಗಳ 110ನೇ ಜಯಂತೋತ್ಸವ, ಶ್ರೀ ನಂಜುಂಡಸ್ವಾಮಿಗಳ 16ನೇ ಸಂಸ್ಮರಣೋತ್ಸವ

ಟಿ.ನರಸೀಪುರ: ಜಗದ್ಗುರು ಶ್ರೀ ಶಿವರಾತ್ರಿ ಡಾ.ರಾಜೇಂದ್ರ ಶ್ರೀಗಳ 110ನೇ ಜಯಂತೋತ್ಸವ ಹಾಗೂ ಶ್ರೀ ನಂಜುಂಡಸ್ವಾಮಗಳ 16ನೇ ಸಂಸ್ಮರಣೋತ್ಸವ ಕಾರ್ಯಕ್ರಮ ಹೊಸಮಠದ…

43 mins ago

ರೆಪೋ ದರ ಕಡಿತಗೊಳಿಸಿದ ಭಾರತೀಯ ರಿಸರ್ವ್ ಬ್ಯಾಂಕ್

ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ ತನ್ನ ರೆಪೊ ದರವನ್ನು ಶೇ. 5.5% ರಿಂದ 5.25ಕ್ಕೆ ಅಂದರೆ 25 ಬೇಸಿಸ್ ಪಾಯಿಂಟ್‍ಗಳಷ್ಟು…

50 mins ago

ಮಂಡ್ಯ ಕೃಷಿ ಪ್ರದಾನ ಜಿಲ್ಲೆ: ಸಿಎಂ ಸಿದ್ದರಾಮಯ್ಯ

ಮಂಡ್ಯ: ಲ್ಯಾಬ್‌ ಟು ಲ್ಯಾಂಡ್‌ ಆದರೆ ಮಾತ್ರ ರೈತರಿಗೆ ಸಂಪೂರ್ಣ ಅನುಕೂಲವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಈ ಕುರಿತು…

1 hour ago

ಹೊಸ ದಾಖಲೆ ನಿರ್ಮಿಸಿದ ಬೆಂಗಳೂರು ಪೊಲೀಸರು: ಏನದು ಗೊತ್ತಾ?

ಬೆಂಗಳೂರು: ಮಾದಕದ್ರವ್ಯ ಮಾರಾಟ ಮತ್ತು ಮಾದಕದ್ರವ್ಯ ಸೇವನೆಯನ್ನು ನಿಗ್ರಹಿಸುವ ನಿಟ್ಟಿನಲ್ಲಿ ಬೆಂಗಳೂರು ಪೊಲೀಸರು ಹೊಸ ದಾಖಲೆ ನಿರ್ಮಿಸಿದ್ದಾರೆ. ಪ್ರಸಕ್ತ ಸಾಲಿನ…

1 hour ago