ಬೆಂಗಳೂರು: ಕೆಪಿಎಸ್‌ಸಿ ವತಿಯಿಂದ ಇದೇ ಡಿಸೆಂಬರ್ 29ಕ್ಕೆ ಕೆಎಎಸ್ ಮರು ಪರೀಕ್ಷೆ ನಡೆಯುತ್ತಿದ್ದು, ಮತ್ತೆ ಈ ಪರೀಕ್ಷೆಯಲ್ಲಿ ಮತ್ತೆ ಬೇಜವಾಬ್ದಾರಿತನ ತೋರಿದರೆ ಪರೀಕ್ಷಾರ್ಥಿ ಪರವಾಗಿ ಬಿಜೆಪಿ ಹೋರಾಟ ನಡೆಸುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಎಚ್ಚರಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣವಾದ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಕೆಪಿಎಸ್‌ಸಿ ಗೊಂದಲಗಳು ನಿಲ್ಲುವ ಲಕ್ಷಣಗಳೇ ಕಾಣುತ್ತಿಲ್ಲ. ಇದೇ ಡಿಸೆಂಬರ್ 29 ಕ್ಕೆ ನಿಗದಿಯಾಗಿರುವ ಕೆಎಎಸ್ ಪೂರ್ವಭಾವಿ ಮರುಪರೀಕ್ಷೆಯ ಪ್ರವೇಶ ಪತ್ರ ಬಿಡುಗಡೆ ಮಾಡಿರುವ ಕೆಪಿಎಸ್‌ಸಿ, ಕನ್ನಡ ಭಾಷೆಯಲ್ಲಿರುವ ಯಾವುದೇ ಪ್ರಶ್ನೆಗಳ ಭಾಷಾಂತರದಲ್ಲಿ ಏನಾದರೂ ಗೊಂದಲವಾದಲ್ಲಿ ಆಂಗ್ಲ ಭಾಷೆಯ ಪ್ರಶ್ನೆಗಳನ್ನು ನೋಡಿ ಅರ್ಥ ಮಾಡಿಕೊಳ್ಳಿ ಎಂದು ಅಭ್ಯರ್ಥಿಗಳಿಗೆ ಸೂಚಿಸುವ ಮೂಲಕ ತಮ್ಮ ಯಡವಟ್ಟುಗಳು ನಿತ್ಯ ನಿರಂತರ ಎಂಬ ಮುನ್ಸೂಚನೆ ನೀಡಿರುವುದು ವಿಪರ್ಯಾಸವೇ ಸರಿ ಎಂದು ವಾಗ್ದಾಳಿ ನಡೆಸಿದ್ದಾರೆ.
ಈ ಹಿಂದಿನ ಪರೀಕ್ಷೆಯಲ್ಲೂ ಕನ್ನಡ ಭಾಷಾ ಪರೀಕ್ಷಾರ್ಥಿಗಳಿಗೆ ಸಮರ್ಪಕವಾಗಿ ಭಾಷಾಂತರಿಸದೇ ಯಡವಟ್ಟು ಮಾಡಿ ಲಕ್ಷಾಂತರ ಪರೀಕ್ಷಾರ್ಥಿಗಳ ಆಕ್ರೋಶಕ್ಕೆ ಕಾರಣವಾಗಿತ್ತು. ಇದೀಗ ಮುಂದಾಗಬಹುದಾದ ಗೊಂದಲದ ಹುಳುಕುಗಳನ್ನು ಮೊದಲೇ ಪರೀಕ್ಷಾರ್ಥಿಗಳಿಗೆ ಸೂಚಿಸುತ್ತಿರುವುದು ಕೆಪಿಎಸ್‌ಸಿ ಅಧಿಕಾರಿಗಳ ಬೇಜವಾಬ್ದಾರಿ ಮನಸ್ಥಿತಿಯನ್ನು ಸಾಕ್ಷೀಕರಿಸುತ್ತಿದೆ ಎಂದು ಕಿಡಿಕಾರಿದ್ದಾರೆ.
ಕರ್ನಾಟಕದ ಮಾತೃಭಾಷೆಯಲ್ಲಿಯೇ ಸೂಕ್ತ ಪ್ರಶ್ನೆಗಳನ್ನು ನೀಡುವಲ್ಲಿ ಸಂಪೂರ್ಣ ವಿಫಲವಾಗಿ ಪದೇ ಪದೇ ಕೆಎಎಸ್ ಪರೀಕ್ಷಾರ್ಥಿಗಳನ್ನು ಗೊಂದಲಕ್ಕೆ ದೂಡುತ್ತಿರುವ ಬೇಜವಾಬ್ದಾರಿತನ ಮತ್ತೆ ಮರುಕಳಿಸಿದಲ್ಲಿ ಕೆಪಿಎಸ್‌ಸಿ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಪರೀಕ್ಷಾರ್ಥಿಗಳ ಪರ ಬಿಜೆಪಿ ಹೋರಾಟ ರೂಪಿಸುವುದು ಅನಿವಾರ್ಯವಾಗಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.
ಹಾಸನ/ಸಕಲೇಶಪುರ: ಕೇಂದ್ರ ಸರ್ಕಾರದ ನೆರವಿನೊಂದಿಗೆ ಕಾಫಿ ಬೆಳೆಗಾರರಿಗೆ ಪರಿಹಾರಗಳನ್ನು ಒದಗಿಸಲಾಗುವುದು ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಆಶ್ವಾಸನೆ ನೀಡಿದ್ದಾರೆ. ಹಾಸನ…
ಬೆಂಗಳೂರು: ಬಿಜೆಪಿ ಎಂಎಲ್‌ಸಿ ಸಿ.ಟಿ.ರವಿ ಬಂಧನ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಬಿಜೆಪಿಯು ಬೆಳಗಾವಿ ಚಲೋ ನಡೆಸಲು ಮುಂದಾಗಿದೆ. ಈ ಬಗ್ಗೆ…
ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿಯ ರೈತರ ನಿಯೋಗದೊಂದಿಗೆ ಸಭೆ ನಡೆಸಿ ಕಾಂಗ್ರೆಸ್ ಸರ್ಕಾರ ರೈತರ…
ಹಾಸನ: ಈ ಜಿಲ್ಲೆಗೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಕುಟುಂಬ ನೀಡಿದ ಕೊಡುಗೆ ಏನು ಎಂದು ಕೇಳಿದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ…
ಮೈಸೂರು: ಎಂಎಲ್‌ಸಿ ಸಿ.ಟಿ.ರವಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಫೇಕ್ ಎನ್‌ಕೌಂಟರ್ ಮಾಡಲು ಯತ್ನಿಸಿದ್ದರು ಎಂಬ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ…
50 ವರ್ಷಗಳ ದೂರದೃಷ್ಟಿಯ ಡಿಪಿಆರ್ ಸಿದ್ಧ ಆಗಬೇಕು • ಭಾಮಿ ವಿ ಶೆಣೈ, ಮೈಸೂರು ಗ್ರಾಹಕರ ಪರಿಷತ್ ಮೈಸೂರು ಜಿಲ್ಲಾ…