ಬೆಂಗಳೂರು: ಕಾಂಗ್ರೆಸ್ ಸರ್ಕಾರದಿಂದ ಕನ್ನಡದ ಉದ್ಧಾರ ಸಾಧ್ಯವೇ ಇಲ್ಲ, ಕನ್ನಡ ಶಾಲೆಗಳ ಅಸ್ತಿತ್ವ ಉಳಿಯುವ ಭರವಸೆ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣವಾದ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು,
ಕನ್ನಡದ ಬಗ್ಗೆ ‘ಮೊಸಳೆ ಕಣ್ಣೀರು ಸುರಿಸುವ’ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಮುಖವಾಡ ಕಳಚಿಬಿದ್ದಿದೆ. ಕನ್ನಡ ಶಾಲೆಗಳು ಮುಚ್ಚುತ್ತಿವೆ, ಇರುವ ಶಾಲೆಗಳು ದೈನೇಸಿ ಪರಿಸ್ಥಿತಿಯಲ್ಲಿವೆ. ಆ ಶಾಲೆಗಳಲ್ಲೂ ಶಿಕ್ಷಕರಿಲ್ಲ, 60,000 ಶಿಕ್ಷಕರ ಹುದ್ದೆಗಳು ಖಾಲಿ ಉಳಿದಿವೆ, ಸರ್ಕಾರದ ಖಜಾನೆಯಲ್ಲಿ ದುಡ್ಡಿಲ್ಲ, ಸರ್ಕಾರದ ಬಳಿ ಏನೇನೂ ಉಳಿದಿಲ್ಲ ಇವರಿಂದ ಕನ್ನಡ ತನ ಹೇಗೆ ಉಳಿಯಲು ಸಾಧ್ಯ? ಎಂದು ಕನ್ನಡ ಚಿತ್ರರಂಗದ ಹಿರಿಯ ಕಲಾವಿದ ಮುಖ್ಯಮಂತ್ರಿ ಚಂದ್ರು ಅವರು 87ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸಿದ್ದ ವೇಳೆ ಪ್ರಶ್ನಿಸಿದ್ದಾರೆ ಎಂದು ತಿಳಿಸಿದ್ದಾರೆ.
ಈ ಕಾಂಗ್ರೆಸ್ ಸರ್ಕಾರದಿಂದ ಕನ್ನಡದ ಉದ್ಧಾರ ಸಾಧ್ಯವೇ ಇಲ್ಲ, ಕನ್ನಡ ಶಾಲೆಗಳ ಅಸ್ತಿತ್ವ ಉಳಿಯುವ ಭರವಸೆ ಇಲ್ಲ, ಶಿಕ್ಷಕರಿಗಂತೂ ಕೆಲಸ ಇಲ್ಲವೇ ಇಲ್ಲ ಎಂಬ ವಾಸ್ತವ ಪರಿಸ್ಥಿತಿಯನ್ನು ಬಿಚ್ಚಿಡಲಾಗಿದೆ. ಕರ್ನಾಟಕವನ್ನು ಅಭಿವೃದ್ಧಿ ಶೂನ್ಯ ರಾಜ್ಯವಾಗಿಸಿರುವ ಕಾಂಗ್ರೆಸ್ ಸರ್ಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ. ತನ್ನ ಶೂನ್ಯ ಪರಿಸ್ಥಿತಿಯನ್ನು ಮುಚ್ಚಿಕೊಳ್ಳಲು ಕನ್ನಡಿಗರ ದಿಕ್ಕು ತಪ್ಪಿಸುವ ಅಸತ್ಯದ ವಿವಾದಗಳನ್ನು ಸೃಷ್ಟಿಸಿ ರಾಜ್ಯದಲ್ಲಿ ಗೊಂದಲ ಮೂಡಿಸುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಉತ್ತರ ಪ್ರದೇಶ: ಲೋಕಸಭಾ ಚುನಾವಣಾ ಸಂದರ್ಭದಲ್ಲಿ ಶ್ರೀಮಂತರು ಹಾಗೂ ಬಡವರ ನಡುವಿನ ಆರ್ಥಿಕತೆ, ಅಸಮಾನ ಆಸ್ತಿಗೆ ಸಂಬಂಧಿಸಿದಂತೆ ಹೇಳಿಕೆ ನೀಡಿದ್ದ…
ಬೆಂಗಳೂರು: ಪ್ರಸಕ್ತ ವರ್ಷದಲ್ಲಿ ಚಳಿ ತುಂಬಾ ಜಾಸ್ತಿಯಿದ್ದು, ಶೀತಗಾಳಿ ಹೆಚ್ಚಾಗಲು ಕರಾವಳಿ ತೀರ ಪ್ರದೇಶದಲ್ಲಾದ ವಾತಾವರಣ ಬದಲಾವಣೆ ಕಾರಣ ಎಂದು…
ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ನಡೆಯುತ್ತಿರುವ 87ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮಾಂಸಾಹಾರ ವಿತರಣೆ ಮಾಡಿರುವ ವಿಚಾರ ಭಾರೀ ವಿವಾದಕ್ಕೆ…
ಕುವೈತ್/ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಎರಡು ದಿನಗಳ ಕಾಲ ಕುವೈತ್ ಪ್ರವಾಸದಲ್ಲಿದ್ದು, ಇಲ್ಲಿನ ರಾಜ ಶೇಕ್ ಮಿಶಾಲ್ ಅಲ್…
ಕಲಬುರ್ಗಿ: ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ರಾಜ್ಯ ಸರ್ಕಾರ ಒತ್ತು ನೀಡುತ್ತಿದ್ದು, 371 ಜೆ ಜಾರಿಯಾದ ದಶಮಾನೋತ್ಸವದ ಪ್ರಯುಕ್ತ 371 ಹಾಸಿಗೆಗಳ…
ಬೆಂಗಳೂರು: ವಿಧಾನ ಪರಿಷತ್ ಶಾಸಕ ಸಿ.ಟಿ.ರವಿ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ನೀಡಿರುವ ಹೇಳಿಕೆ ಅಮಿತ್…