Mysore
20
overcast clouds

Social Media

ಶನಿವಾರ, 19 ಅಕ್ಟೋಬರ್ 2024
Light
Dark

ಬಾಬಾ ಬುಡನ್‌ಗಿರಿ ದರ್ಗಾ ಗೋರಿ ಧ್ವಂಸ ಪ್ರಕರಣ ರೀಓಪನ್‌ ಸುಳ್ಳು: ಸಿದ್ದರಾಮಯ್ಯ

ಬಾಬಾ ಬುಡನ್‌ಗಿರಿ ದತ್ತಪೀಠ ದರ್ಗಾ ಗೋರಿ ಧ್ವಂಸ ಪ್ರಕರಣ ರೀಓಪನ್‌ ಆಗಿದೆ ಎಂಬ ಸುದ್ದಿ ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಈ ಕುರಿತು ಇದೀಗ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿ ಸ್ಪಷ್ಟನೆ ಕೊಟ್ಟಿದ್ದಾರೆ.

ಈ ಬಗ್ಗೆ ಮಾತನಾಡಿದ ಸಿಎಂ ಕೆಲವು ದೃಶ್ಯ ಮಾಧ್ಯಮಗಳಲ್ಲಿ ಬಾಬಾ ಬುಡನ್‌ಗಿರಿಯಲ್ಲಿ ಗೋರಿ ಧ್ವಂಸ ಪ್ರಕರಣವನ್ನು ರೀಓಪನ್‌ ಮಾಡಲಾಗಿದೆ ಎಂದು ಸುದ್ದಿಯನ್ನು ಪ್ರಕಟ ಮಾಡಲಾಗುತ್ತಿದ್ದು ಇದು ಅಪ್ಪಟ ತಪ್ಪು ಮಾಹಿತಿ ಹಾಗೂ ಸುಳ್ಳಿನಿಂದ ಕೂಡಿದೆ ಎಂದು ಹೇಳಿಕೆ ನೀಡಿದ್ದಾರೆ.

2017ರಲ್ಲಿ ದಾಖಲಾಗಿದ್ದ ಪ್ರಕರಣದ ಸಹಜ ಕಾನೂನು ಪ್ರಕ್ರಿಯೆಯಲ್ಲಿ ಆರೋಪಿಗಳಿಗೆ ಸಮನ್ಸ್‌ ಜಾರಿಯಾಗಿದೆ ಅಷ್ಟೇ. 2017ರಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ 2020ರ ಮಾರ್ಚ್ 19ರಂದು ವಿಚಾರಣೆಯ ಅನುಮತಿಗಾಗಿ ಸರ್ಕಾರಕ್ಕೆ ಮನವಿ ಮಾಡಲಾಗಿತ್ತು. ಈ ಆಧಾರದ ಮೇಲೆ ಸರ್ಕಾರ 2023ರ ಸೆಪ್ಟೆಂಬರ್‌ 7ರಂದು ಅನುಮತಿ ನೀಡಿತ್ತು.

2023ರ ಅಕ್ಟೋಬರ್‌ 24ರಂದು ಆರೋಪಿಗಳ ವಿರುದ್ಧ ಆರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿತ್ತು. ಈ ಪ್ರತಿಕ್ರಿಯೆಯ ಮುಂದುವರಿದ ಭಾಗವಾಗಿ ಆರೋಪಿಗಳು ಜನವರಿ 8ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ನ್ಯಾಯಾಲಯ ಸಮನ್ಸ್‌ ಜಾರಿ ಮಾಡಿದೆ. ಇದೆಲ್ಲವೂ ಪ್ರತೀ ಪ್ರಕರಣದಲ್ಲಿಯೂ ನಡೆಯುವ ಸಾಮಾನ್ಯ ಪ್ರಕ್ರಿಯೆಯಾಗಿದೆ. ಸರ್ಕಾರ ಮರು ತನಿಖೆಗೆ ಮುಂದಾಗಿದೆ ಎನ್ನುವುದು ತಪ್ಪು ಹಾಗೂ ಸುಳ್ಳು ಸಂಗತಿ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ