ರಾಜ್ಯ

ವಿಧಾನಪರಿಷತ್ತಿಗೆ ಬಾಬು, ಶಿವಕುಮಾರ್, ಆರತಿ ಕೃಷ್ಣ, ಜಕ್ಕಪ್ಪನವರ್ ನಾಮನಿರ್ದೇಶನ

ಬೆಂಗಳೂರು : ವಿಧಾನ ಪರಿಷತ್ತಿನ ನಾಲ್ಕು ನಾಮ ನಿರ್ದೇಶಿತ ಸ್ಥಾನಗಳ ಆಯ್ಕೆ ಪ್ರಕ್ರಿಯೆಯನ್ನು ಕಾಂಗ್ರೆಸ್ ಹೈಕಮಾಂಡ್ ಪೂರ್ಣಗೊಳಿಸಿದ್ದು ರಮೇಶ್ ಬಾಬು, ಆರತಿಕೃಷ್ಣ, ಡಾ.ಕೆ.ಶಿವಕುಮಾರ್ ಮತ್ತು ಜಕ್ಕಪ್ಪನವರ್ ಅವರಿರುವ ಪಟ್ಟಿಯನ್ನು ಅಂತಿಮಗೊಳಿಸಿದೆ.

ಕಾಂಗ್ರೆಸ್ ವರಿಷ್ಟರು ಅಂತಿಮಗೊಳಿಸಿದ ಪಟ್ಟಿಯನ್ನು ರಾಜ್ಯಪಾಲರಿಗೆ ಕಳುಹಿಸಲಾಗಿದ್ದು ಇಂದು ಅಥವಾ ನಾಳೆ ಅಧಿಕೃತ ಪ್ರಕಟಣೆ ಹೊರಬೀಳಲಿದೆ. ಈ ಹಿಂದೆ ದಲಿತ ನಾಯಕ ಡಿ.ಜಿ.ಸಾಗರ್, ದಿನೇಶ್ ಅಮೀನ್ ಮಟ್ಟು, ರಮೇಶ್ ಬಾಬು ಮತ್ತು ಆರತಿಕೃಷ್ಣ ಅವರಿದ್ದ ಪಟ್ಟಿಗೆ ಕಾಂಗ್ರೆಸ್ ವರಿಷ್ಟರು ಒಪ್ಪಿಗೆ ನೀಡಿದ್ದರು. ಆದರೆ ಪಟ್ಟಿಗೆ ಹಲವರ ಆಕ್ಷೇಪದ ಹಿನ್ನೆಲೆಯಲ್ಲಿ ಹೈಕಮಾಂಡ್ ತಡೆಯೊಡ್ಡಿತ್ತು, ಅದರೆ ಇದೀಗ ಮೈಸೂರಿನ ಪತ್ರಕರ್ತರಾದ ಡಾ.ಕೆ.ಶಿವಕುಮಾರ್, ಕಾರ್ಮಿಕ ನಾಯಕ ಜಕ್ಕಪ್ಪನವರ್, ಪಕ್ಷದ ವಕ್ತಾರ ರಮೇಶ್ ಬಾಬು ಮತ್ತು ಅರತಿಕೃಷ್ಣ ಅವರಿರುವ ಹೊಸ ಪಟ್ಟಿಯನ್ನು ಅಂತಿಮಗೊಳಿಸಿದೆ ಎಂದು ದಿಲ್ಲಿ ಮೂಲಗಳು ತಿಳಿಸಿವೆ.

ಆಂದೋಲನ ಡೆಸ್ಕ್

Recent Posts

ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪ್ರಕರಣ: ಗಾಯಾಳು ರವಿಗೆ ಮುಂದುವರಿದ ಚಿಕಿತ್ಸೆ

ಪ್ರಶಾಂತ್‌ ಎನ್‌ ಮಲ್ಲಿಕ್‌  ಮೈಸೂರು: ಸುತ್ತೂರು ಜಾತ್ರೆ ವೇಳೆ ರಾತ್ರಿ ಗದ್ದೆಯಲ್ಲಿ ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪರಿಣಾಮ…

44 mins ago

ಕಾಫಿ ಮಳಿಗೆಯಲ್ಲಿದ್ದ ಹಣ ಕಳವು: ಆರೋಪಿ ಬಂಧನ

ಸಿದ್ದಾಪುರ: ವಿರಾಜಪೇಟೆ ರಸ್ತೆಯಲ್ಲಿರುವ ಎಸ್‌ವೈಎಸ್ ಕಾಫಿ ಅಂಗಡಿಯಲ್ಲಿ ನಡೆದ ನಗದು ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದಾಪುರ ಪೊಲೀಸರು ಕೇರಳ ಮೂಲದ…

1 hour ago

ಕಾಡಾನೆ ದಾಳಿ: ಅಪಾರ ಪ್ರಮಾಣದ ಬೆಳೆ ನಾಶ

ಮಹಾದೇಶ್‌ ಎಂ ಗೌಡ  ಹನೂರು: ತಾಲ್ಲೂಕಿನ ಕೆವಿಎನ್ ದೊಡ್ಡಿ ಗ್ರಾಮದ ಜಮೀನೊಂದರಲ್ಲಿ ಕಾಡಾನೆ ಲಗ್ಗೆ ಇಟ್ಟು ಅಪಾರ ಪ್ರಮಾಣದ ಬೆಳೆ…

1 hour ago

ಬೆಂಗಳೂರಿನಲ್ಲೇ ಐಪಿಎಲ್ ಉದ್ಘಾಟನಾ ಪಂದ್ಯ

ಬೆಂಗಳೂರು: ಕಾಲ್ತುಳಿತ ಪ್ರಕರಣದಿಂದಾಗಿ ಈ ಬಾರಿಯ ಬಹು ನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಪಂದ್ಯಗಳು ನಡುವುದೇ ಡೋಲಾಯಮಾನ ಸ್ಥಿತಿಯಲ್ಲಿರುವಾಗಲೇ ಉದ್ಘಾಟನಾ…

1 hour ago

ಪೌರಾಯುಕ್ತೆಗೆ ಧಮ್ಕಿ ಹಾಕಿದ್ದ ಪ್ರಕರಣ: ರಾಜೀವ್‌ ಗೌಡಗೆ ಹೈಕೋರ್ಟ್‌ ತರಾಟೆ

ಬೆಂಗಳೂರು: ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣ ಸಂಬಂಧ ಕಾಂಗ್ರೆಸ್‌ ಮುಖಂಡ ರಾಜೀವ್‌ಗೌಡಗೆ ಹೈಕೋರ್ಟ್‌ ತೀವ್ರ…

2 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ಪವಿತ್ರಾಗೌಡಗೆ ವಾರಕ್ಕೊಮ್ಮೆ ಮನೆ ಊಟ ಆದೇಶಕ್ಕೆ ತಡೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ಪ್ರಮುಖ ಆರೋಪಿ ಪವಿತ್ರಾ ಗೌಡಗೆ ವಾರಕ್ಕೊಮ್ಮೆ ಮನೆ ಊಟ…

2 hours ago