Mysore
26
haze

Social Media

ಗುರುವಾರ, 11 ಡಿಸೆಂಬರ್ 2025
Light
Dark

ವಿಜಯೇಂದ್ರಗೆ ಬಚ್ಚಾ ಎಂದಿದ್ದು ತಪ್ಪು: ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರನ್ನು ಬಚ್ಚಾ ಎಂದು ಕರೆದಿದ್ದ ರಮೇಶ್‌ ಜಾರಕಿಹೊಳಿ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಕಟುವಾಗಿ ಟೀಕಿಸಿದ್ದಾರೆ.

ಈ ಬಗ್ಗೆ ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಜಯೇಂದ್ರಗೆ ಬಚ್ಚಾ ಎಂಬ ಪದ ಬಳಕೆ ಮಾಡಿರುವುದು ತಪ್ಪು. ಅವರ ಪದ ಬಳಕೆಯನ್ನು ಒಪ್ಪಲಾಗದು ಎಂದು ಹೇಳಿದರು.

ವಿಜಯೇಂದ್ರ ಅವರನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿದ್ದಾರೆ. ಆ ನಿರ್ಧಾರವನ್ನು ಎಲ್ಲರೂ ಗೌರವಿಸಬೇಕು. ಇದನ್ನು ಯಾರೂ ಕೂಡ ಮರೆಯಬಾರದು. ಶಾಸಕರೊಬ್ಬರು ಈ ರೀತಿ ಮಾತನಾಡಿರುವುದು ತಪ್ಪ. ಇದನ್ನು ಒಪ್ಪಲಾಗದು ಎಂದರು.

ಇನ್ನು ನಿನ್ನೆಯಷ್ಟೇ ಹೇಳಿಕೆ ನೀಡಿದ್ದ ರಮೇಶ್‌ ಜಾರಕಿಹೊಳಿಯವರು, ವಿಜಯೇಂದ್ರ ನನ್ನ ಬಗ್ಗೆ ಹಗುರವಾಗಿ ಮಾತನಾಡಿದ್ದಾನೆ. ಅವನಿಗೆ ನಾನು ಎಚ್ಚರಿಕೆ ಕೊಡುತ್ತೇನೆ. ನೀನು ಇನ್ನು ಬಚ್ಚಾ, ಬಿಜೆಪಿ ರಾಜ್ಯಾಧ್ಯಕ್ಷನಾಗಲು ಯೋಗ್ಯನಲ್ಲ ಎಂದು ಹೇಳಿದ್ದರು.

ನಾನು ನಿಮ್ಮ ಅಪ್ಪನನ್ನು ಸಿಎಂ ಮಾಡುವ ಸಲುವಾಗಿ ಬಿಜೆಪಿಗೆ ಬಂದಿದ್ದೇನೆ ವಿಜಯೇಂದ್ರ. ನನ್ನ ಕ್ಷೇತ್ರದ ಜನರ ನನ್ನೊಂದಿಗೆ ಗಟ್ಟಿಯಾಗಿ ನಿಂತಿದ್ದಾರೆ. ಯಾರ ಭಯವೂ ಇಲ್ಲ. ನೀನು ರಾಜ್ಯಾಧ್ಯಕ್ಷ
ಸ್ಥಾನದಿಂದ ಕೆಳಗಿಳಿಯಬೇಕು ಎಂದು ಏಕವಚನದಲ್ಲೇ ವಾಗ್ದಾಳಿ ನಡೆಸಿದ್ದರು.

 

Tags:
error: Content is protected !!