ಬೆಂಗಳೂರು : ರಾಜ್ಯ ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಯ ಎಲ್ಲ ಅಧಿಸೂಚಿತ ದೇಗುಲಗಳಲ್ಲಿ ದೀಪಾವಳಿಯ ಬಲಿ ಪಾಡ್ಯಮಿ ದಿನ, ನ. 14ರಂದು ಗೋಪೂಜೆ ನಡೆಸುವಂತೆ ಇಲಾಖೆಯ ಆಯುಕ್ತರು ಆದೇಶ ಹೊರಡಿಸಿದ್ದಾರೆ.
ಗೋವುಗಳಿಗೆ ಸ್ನಾನ ಮಾಡಿಸಿ ದೇಗುಲಕ್ಕೆ ಕರೆತಂದು ಅರಿಶಿನ, ಕುಂಕುಮ, ಹೂವುಗಳಿಂದ ಅಲಂಕರಿಸಿ ಅಕ್ಕಿ, ಬೆಲ್ಲ, ಬಾಳೆ ಹಣ್ಣು, ಸಿಹಿ ತಿನಿಸು ಮುಂತಾದ ಗ್ರಾಸವನ್ನು ತಿನ್ನಿಸಬೇಕು. ಸಂಜೆ 5.30ರಿಂದ 6.30ರ ವರೆಗೆ ಗೋಧೂಳಿ ಲಗ್ನದಲ್ಲಿ ಗೋಪೂಜೆ ಆಯೋಜಿಸಬೇಕು. ಈ ಬಗ್ಗೆ ದೇವಸ್ಥಾನದ ಸೂಚನ ಫಲಕದಲ್ಲಿ ಮಾಹಿತಿ ನೀಡುವಂತೆ ಆದೇಶ ನೀಡಿದ್ದಾರೆ
.





