ಬೆಂಗಳೂರು : ಸಾಮಾಜಿಕ, ಆರ್ಥಿಕ ಮರು ಸಮೀಕ್ಷೆ ನಮಗೆ ಬೇಡ. ಈ ಬದಲಿಗೆ ನಮಗೆ ಕಾಂತರಾಜ್ ಆಯೋಗ ವರದಿ ಜಾರಿ ಆಗಲಿ ಎಂದು ಹಿಂದುಳಿದ ಸಮುದಾಯಗಳು ಆಗ್ರಹಿಸಿವೆ.
ಸಾಮಾಜಿಕ ಮತ್ತು ಶೈಕ್ಷಣಿಕ ಮರು ಸಮೀಕ್ಷೆ ಕುರಿತಂತೆ ಕರ್ನಾಟಕ ಶೋಷಿತ ಸಮುದಾಯ ಒಕ್ಕೂಟದವತಿಯಿಂದ ಶುಕ್ರವಾರ ಅಹಿಂದ ಮುಖಂಡರ ಮಹಾಸಭೆಯಲ್ಲಿ ಈ ಕುರಿತು ಗಟ್ಟಿಧ್ವನಿ ಮಾರ್ಧನಿಸಿತು.
ವಿಧಾನ ಪರಿಷತ್ ಸದಸ್ಯ ಹಾಗೂ ಒಕ್ಕೂಟದ ಸದಸ್ಯ ನಾಗರಾಜ್ ಯಾದವ್ ಮಾತನಾಡಿ, ಸಾಮಾಜಿಕ ಮತ್ತು ಆರ್ಥಿಕ ಮರು ಸಮೀಕ್ಷೆ ವಿಚಾರದಲ್ಲಿ ನಮ್ಮ ಹಿಂದುಳಿದ ಸಮಾಜಗಳು ಒಟ್ಟಾಗಿ ಅಂತರಿಕವಾಗಿ ಬಗೆಹರಿಸಿಕೊಳ್ಳಬೇಕಾಗಿದೆ, ಕಾಂತರಾಜ್ ಆಯೋಗ ವರದಿಯನ್ನು ಜಾರಿ ತರುವಂತೆ ಕಾಂಗ್ರೆಸ್ ಹೈಕಮಾಂಡ್ ಮುಖಂಡರಿಗೆ ಅರಿವು ಮೂಡಿಸಬೇಕಾಗಿದೆ. ಸಿದ್ದರಾಮಯ್ಯ ಅವರಿಗೆ ಹಿಂದುಳಿದ ವರ್ಗಗಳ ಏಳಿಗೆ ಕುರಿತ ಬದ್ಧತೆ ಇದೆ ಎಂದರು.
ಪ್ರಧಾನ ಸಂಚಾಲಕರಾದ ರಾಮಚಂದ್ರಪ್ಪ, ಅನಂತ್ ನಾಯ್ಕ್ ಮಾತನಾಡಿ, ಯಾವುದೋ ಒಂದು ಸಮುದಾಯವನ್ನು ಒಲೈಕೆ ಮಾಡಿಕೊಳ್ಳಲು ಇಡೀ ಹಿಂದುಳಿದ ಸಮುದಾಯದ ಆಶಯಕ್ಕೆ ವಿರುದ್ದವಾಗಿ ನಡೆದುಕೊಳ್ಳುತ್ತಿರುವುದು ಸರಿಯಲ್ಲ, ಇರುವ ವರದಿ ತಿರಸ್ಕರಿಸಿ ಮರು ಸಮೀಕ್ಷೆ ಮಾಡಲು ಹೊರಟಿರುವುದು ಸರಿಯಲ್ಲ, ಈ ಕುರಿತು ಹಿಂದುಳಿದ ವರ್ಗಗಳಲ್ಲಿ ಜಾಗೃತಿ ಮೂಡಿಸಲಾಗುವುದು, ಜಿಲ್ಲೆಗಳಲ್ಲಿ ಮುಂದಿನ ಹೋರಾಟ ನಡೆಸುವ ಬಗ್ಗೆ ಚರ್ಚೆ ನಡೆಸಲಾಗುವುದು. ಯಾರ್ಯಾರು ಈ ವರದಿಯನ್ನು ವಿರೋಧ ಮಾಡಿದ್ದಾರೋ ಅವರಿಗೆ ಮುಂದಿನ ಚುನಾವಣೆಗಳಲ್ಲಿ ತಕ್ಕ ಪಾಠ ಕಲಿಸಲಾಗುವುದು ಎಂದರು.
ಮುಖ್ಯಮಂತ್ರಿಗಳಿಗೆ ಈ ಕುರಿತು ಮನವಿ ಮಾಡಿ ಕಾಂತರಾಜ್ ವರದಿ ಬಿಡುಗಡೆ ಮಾಡುವಂತೆ ಮನವಿ ಮಾಡೋಣ ಜಾರಿಗಿಂತ ಮುಂಚೆ ಚರ್ಚೆಗೆ ಅವಕಾಶ ಕೊಡೋಣ್ಣ, ನಮಗೆ ಯಾವುದೇ ರೀತಿಯ ಹೈಕಮಾಂಡ್ ಇಲ್ಲ ಸಂವಿಧಾನವೇ ನಮಗೆ ಹೈಕಮಾಂಡ್ ಆಗಿದೆ, ಕಾಂಗ್ರೆಸ್ ಪಕ್ಷಕ್ಕೆ ಮೇಲ್ವರ್ಗದವರ ಶೇ10ರಷ್ಟು ಮತಗಳು ಬರಲ್ಲ ನಿಜವಾಗಿ ಹಿಂದುಳಿದ ವರ್ಗದವರೇ ಮತ ಹಾಕುವವರು, ಇರುವ ಐದು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಸಿದ್ಧರಾಮಯ್ಯ ಮುಂದುವರೆಯಬೇಕು ಅವರ ಕನಸಿನ ಯೋಜನೆಗಳು ಜಾರಿಯಾಗಬೇಕು, ಮರು ಸಮೀಕ್ಷೆ ಕೈ ಬಿಡುವಂತೆ ಕಾಂಗ್ರೆಸ್ ಪಕ್ಷದ ಹೈಕಮಾಂಡಿಗೆ ಪತ್ರ ಬರೆಯೋಣ, ಮುಂದಿನ ದಿನಗಳಲ್ಲಿ ರಾಜ್ಯದೆಲ್ಲಡೆ ಈ ಕುರಿತು ಹೋರಾಟ ಮಾಡೋಣ ಎಂದರು.
ವಿನಯ್ ಕುಮಾರ್ ಮಾತನಾಡಿ, ಕಾಂಗ್ರೆಸ್ ಪಕ್ಷ ಹಿಂದುಳಿದವರ ಹೆಸರು ಹೇಳಿಕೊಂಡು, ಅವರಿಂದ ಮತ ಪಡೆದು ಅಧಿಕಾರಕ್ಕೆ ಬಂದಿದೆ ಪ್ರಸ್ತುತ ಹಿಂದುಳಿದ ವರ್ಗದವರ ಏಳಿಗೆಗೆ ಸಂಬಂಧಿಸಿದ ಸಮಾಜಿಕ ಮತ್ತು ಆರ್ಥಿಕ ಸಮೀಕ್ಷೆ ವರದಿಯನ್ನು ಎರಡು ಪ್ರಬಲ ಜಾತಿಗಳ ಒತ್ತಡಕ್ಕೆ ಮಣಿದು ಜಾರಿ ತರದೇ ಕಳ್ಳಾಟವಾಡುತ್ತಿದೆ, ಈ ಕುರಿತಂತೆ ಹೋಬಳಿ, ಗ್ರಾಮ ಮಟ್ಟದಲ್ಲಿ ಜನರಲ್ಲಿ ಅರಿವು ಮೂಡಿಸಲಾಗುವುದು ಎಂದರು.
ವಿವಿಧ ಹಿಂದುಳಿದ ಸಮಾಜದ ಮುಖಂಡರು ಮಾತನಾಡಿ, ಸಮಾಜಿಕ ಮತ್ತು ಆರ್ಥಿಕ ಸಮೀಕ್ಷೆಯನ್ನು ಮರು ಸಮೀಕ್ಷೆ ನಡೆಸಬಾರದು, ಕಾಂತರಾಜ್ ಆಯೋಗ ವರದಿಯನ್ನು ಜಾರಿಗೊಳಿಸುವಂತೆ ರಾಜ್ಯದೆಲ್ಲಡೆ ಹೋರಾಟ ನಡೆಸಬೇಕು ಎಂದು ಒತ್ತಾಯಿಸಿದರು.
ಸಭೆಯಲ್ಲಿ ಎಣ್ಣೆಗೆರೆ ವೆಂಕಟರಾಮಯ್ಯ, ಆದರ್ಶ ಯಲ್ಲಪ್ಪ, ಹಿಂದುಳಿದ ವರ್ಗಗಳ ಆಯೋಗದ ಮಾಜಿ ಸದಸ್ಯರಾದ ಗೋಪಾಲ್, ಕುರುಬರ ಸಂಘದ ಅಧ್ಯಕ್ಷರಾದ ಈರಣ್ಣ, ರಾಮಕೃಷ್ಣ, ಈಡಿಗ ಸಮಾಜದ ಮುಖಂಡೆ ನಳಿನಾಕ್ಷಿ ಸಣ್ಣಪ್ಪ ಸೇರಿದಂತೆ ವಿವಿಧ ಹಿಂದುಳಿದ ಸಮಾಜಗಳ ಮುಖಂಡರು ಭಾಗವಹಿಸಿದ್ದರು.
ಹೊಸ ವರ್ಷದಂದು ಹಲವರು ಬಂಧು,ಬಳಗ, ಸ್ನೇಹಿತರ ಜತೆ ಸೇರಿ ಸಂಭ್ರಮಿಸಿದರು. ಆದರೆ ಸಾಂಸ್ಕ ತಿಕ ನಗರ ಮೈಸೂರಿನಲ್ಲಿ ದಾಖಲೆ ಮದ್ಯ…
ಸ್ವಾಗತಾರ್ಹ ನಡೆ! ಜಾತಿ ಮೀರಿ ಪ್ರೀತಿಸಿದರೆ ಕುಂದಲ್ಲವದು ಮರ್ಯಾದೆಗೆ ಬದಲಿಗೆ ಹೆಚ್ಚುವುದು ಮರ್ಯಾದೆ ಗೌರವ! ಜಾತಿ ಕಟ್ಟಳೆ ಮುರಿವ ಸಮತೆಯ…
ಸಾಂಸ್ಕ ತಿಕ ನಗರಿ ಮೈಸೂರಿನಲ್ಲಿ ಪೊಲೀಸ್ ಇಲಾಖೆಗೆ ಸೇರಿದ ಬ್ಯಾರಿಕೇಡ್‌ಗಳು ಬಳಕೆಯಾದ ನಂತರ ನಿರ್ಲಕ್ಷ್ಯಕ್ಕೆ ಒಳಪಡುತ್ತಿವೆ. ಅವುಗಳನ್ನು ಸುರಕ್ಷಿತವಾಗಿ ಒಂದೆಡೆ…
ಲೊಕ್ಕನಹಳ್ಳಿ ಬಳಿ ಶಾಲಾ-ಕಾಲೇಜು ವಿದ್ಯಾರ್ಥಿಗಳ ಪ್ರತಿಭಟನೆ; ಅಧಿಕಾರಿಗಳ ವಿರುದ್ಧ ಆಕ್ರೋಶ ಹನೂರು: ಒಂದೆಡೆ ಸಮರ್ಪಕ ಬಸ್ ವ್ಯವಸ್ಥೆ ಕಲ್ಪಿಸುವಂತೆ ಒತ್ತಾಯಿಸಿ ಶಾಲಾ-ಕಾಲೇಜು…
ನವೀನ್ ಡಿಸೋಜ ೧೮,೫೦೦ ಹೆಕ್ಟೇರ್ ಪ್ರದೇಶದಲ್ಲಿ ಭತ್ತ ಬೆಳೆದಿರುವ ರೈತರು; ಹವಾಮಾನ ವೈಪರೀತ್ಯದ ನಡುವೆಯೂ ಕಟಾವು ಕಾರ್ಯ ಚುರುಕು ಮಡಿಕೇರಿ:…
ಚಾಮರಾಜನಗರ: ತೀವ್ರ ಚಳಿಯಿಂದ ತತ್ತರಿಸಿದ್ದ ಜಿಲ್ಲೆಯ ಜನತೆ ಕಳೆದ ೨-೩ ದಿನಗಳಿಂದ ಎದುರಾಗಿರುವ ಮೋಡ ಕವಿದ ವಾತಾವರಣ ಮತ್ತು ಅಲ್ಲಲ್ಲಿ…