ಬೆಂಗಳೂರು : ಇತ್ತೀಚೆಗೆ ಆಹಾರ ಮತ್ತು ಗುಣಮಟ್ಟ ಇಲಾಖೆಯೂ ನಡೆಸಿದ ಪರೀಕ್ಷೆಯಲ್ಲಿ ಗೋಬಿ, ಕಬಾಬ್ , ಪಾನಿಪುರಿಗಳಲ್ಲಿ ಕ್ಯಾನ್ಸರ್ ಕಾರಕ ಅಂಶಗಳು ಪತ್ತೆಯಾಗಿದ್ದವು. ಬಳಿಕ ಇಲಾಖೆಯು ಗೋಬಿ, ಕಬಾಬ್ , ಕಾಟನ್ ಕ್ಯಾಂಡಿ ತಯಾರಿಕೆಯಲ್ಲಿ ಬಳಸುವ ಕೃತಕ ಬಣ್ಣಗಳನ್ನಬ್ಯಾನ್ ಮಾಡಿ ಆದೇಶ ಹೊರಡಿಸಿತ್ತು. ಇದೀಗ ಈ ಪಟ್ಟಿಯಲ್ಲಿ ಶವರ್ಮಾ ಕೂಡ ಸೇರ್ಪಡೆಗೊಳ್ಳುತ್ತಿದೆ. ಗೋಬಿ, ಕಬಾಬ್ ಕಾಟನ್ ಕ್ಯಾಂಡಿ ಬಳಿಕ ಶವರ್ಮಾ ಬ್ಯಾನ್ ಮಾಡಲು ಚಿಂತನೆ ನಡೆದಿದೆ.
ಆಹಾರ ಮತ್ತು ಗುಣಮಟ್ಟ ಇಲಾಖೆಯೂ ರಾಜ್ಯದ ವಿವಿಧೆಡೆಯಿಂದ ತಂದ ೧೭ ಶವರ್ಮಾ ಮಾದರಿ ಪರೀಕ್ಷೆ ನಡೆಸಲಾಗಿದ್ದು ಈ ೧೭ ರ ಪೈಕಿ ೮ ಮಾದರಿಯಲ್ಲಿ ಬ್ಯಾಕ್ಟೀರಿಯಾ ಈಸ್ಟ್ ಪತ್ತೆಯಾಗಿದೆ. ಸರಿಯಾದ ರೀತಿಯಲ್ಲಿ ಆಹಾರ ತಯಾರಿಸದ ಕಾರಣ ಬ್ಯಾಕ್ಟೀರಿಯಾಗಳು ಪತ್ತೆಯಾಗಿದೆ. ಈಗಾಗಲೇ ಅಸುರಕ್ಷಿತ ಶವರ್ಮಾ ನೀಡಿರುವ ಅಂಗಡಿಗಳ ವಿರುದ್ಧ ಇಲಾಖೆ ಸೂಕ್ತವಾದ ಕ್ರಮಕೈಗೊಂಡಿದೆ. ಎಲ್ಲಾ ಶವರ್ಮಾ ಮಾರಾಟಗಾರರಿಗೆ ಏಫ್ ಎಸ್ ಎಸ್ ಎಐ ನೋಂದಣಿ ಮಾಡುವುದು ಕಡ್ಡಾಯಗೊಳಿಸಲಾಗಿದೆ. ನೋಂದಣಿ ಪತ್ರ ಪ್ರದರ್ಶನ ಮಾಡದಿದ್ರೆ ಮಾರಾಟಕ್ಕೆ ಬ್ಯಾನ್ ಮಾಡುವ ಎಚ್ಚರಿಕೆಯನ್ನ ನೀಡಲಾಗಿದೆ. ಅಲ್ಲದೆ ಶವರ್ಮಾ ತಯಾರಿಕೆಯ ವೇಳೆ ಶುಚಿತ್ವ ಕಾಪಾಡುವಂತೆ ಸೂಚನೆ ನೀಡಲಾಗಿದ್ದು, ಶುಚಿತ್ವ ನಿರ್ವಹಣೆ ಹಾಗೂ ನೋಂದಣಿ ಮಾಡಿಸದಿದ್ರೆ ಕ್ರಮದ ಎಚ್ಚರಿಕೆ ನೀಡಲಾಗಿದೆ.
ಮೈಸೂರು : ಜಿಲ್ಲೆಯ ಟಿ.ನರಸೀಪುರ ಪಟ್ಟಣದಲ್ಲಿ ಬೆಳ್ಳಂಬೆಳಿಗ್ಗೆಯೇ ಮಚ್ಚು ಲಾಂಗುಗಳಿಂದ ದುಷ್ಕರ್ಮಿಗಳು ಹಲ್ಲೆ ನಡೆಸಿ ವ್ಯಕ್ತಿಯೋರ್ವನನ್ನು ಹತ್ಯೆ ಮಾಡಿರುವ ಘಟನೆ…
ಕೋಲ್ಕತ್ತಾ : ಇಲ್ಲಿನ ವಿಮಾನ ನಿಲ್ದಾಣದಲ್ಲಿ ಫುಟ್ಬಾಲ್ ಮಾಂತ್ರಿಕ ಲಿಯೋನೆಲ್ ಮೆಸ್ಸಿ ಅವರನ್ನು ನೋಡಲು ಅಭಿಮಾನಿಗಳು ಅಪಾರ ಸಂಖ್ಯೆಯಲ್ಲಿ ಸೇರಿದ್ದರು.…
ನ್ಯೂಯಾರ್ಕ್ : ಭಾರತದ ಮೇಲೆ ಡೊನಾಲ್ಡ್ ಟ್ರಂಪ್ ಹೇರಿರುವ ಶೇ.50 ಪ್ರತಿಸುಂಕವನ್ನು ಅಂತ್ಯಗೊಳಿಸಲು ಅಮೆರಿಕದ ಮೂವರು ಸಂಸದರು ನಿಲುವಳಿ ಮಂಡಿಸಿದ್ದಾರೆ.…
ಹಾಸನ : ಕರ್ತವ್ಯದ ವೇಳೆ ಲಾರಿ ಡಿಕ್ಕಿಯಾಗಿ KSRTC ಬಸ್‌ನ ಚೆಕ್ಕಿಂಗ್ ಇನ್ಸ್ಪೆಕ್ಟರ್ ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆಯ ಆಲೂರು…
ಶೇ.30ರಷ್ಟು ಉತ್ಪಾದನೆ ಕುಸಿತ ; ಉತ್ತರ ಕೊಡಗಿನ ಭಾಗದಲ್ಲಿ ಹೆಚ್ಚಿನ ಬೆಳೆ ನಷ್ಟ ನವೀನ್ ಡಿಸೋಜ ಮಡಿಕೇರಿ: ಈ ಬಾರಿಯ…
ಭೇರ್ಯ ಮಹೇಶ್ ಕೆ.ಆರ್.ನಗರ : ಭತ್ತದ ನಾಡು ಎಂದೇ ಪ್ರಖ್ಯಾತಿ ಹೊಂದಿರುವ ಕೆ.ಆರ್.ನಗರ ಮತ್ತು ಸಾಲಿಗ್ರಾಮ ತಾಲ್ಲೂಕುಗಳಲ್ಲಿ ಇದೀಗ ಭತ್ತದ…