Mysore
18
scattered clouds

Social Media

ಗುರುವಾರ, 22 ಜನವರಿ 2026
Light
Dark

ಅಶ್ಲೀಲ ಮೆಸೇಜ್‌ ಪ್ರಕರಣ: ವಿಚಾರಣೆಗೆ ಹಾಜರಾಗುವಂತೆ ದರ್ಶನ್‌ ಪತ್ನಿ ವಿಜಯಲಕ್ಷ್ಮೀಗೆ ಸಿಸಿಬಿ ನೋಟಿಸ್‌

ಬೆಂಗಳೂರು: ಸೋಷಿಯಲ್‌ ಮೀಡಿಯಾದಲ್ಲಿ ಅಶ್ಲೀಲ ಮೆಸೇಜ್‌, ಕಮೆಂಟ್‌ ಮಾಡಿ ನಿಂದಿಸಿದ ಆರೋಪಕ್ಕೆ ಸಂಬಂಧಿಸಿದಂತೆ ದರ್ಶನ್‌ ಪತ್ನಿ ವಿಜಯಲಕ್ಷ್ಮೀಗೆ ಸಿಸಿಬಿ ಪೊಲೀಸರು ನೋಟಿಸ್‌ ನೀಡಿದ್ದಾರೆ.

ಪ್ರಕರಣದ ತನಿಖೆಯ ಭಾಗವಾಗಿ ವಿಜಯಲಕ್ಷ್ಮೀ ದರ್ಶನ್‌ ಅವರಿಗೆ ನೋಟಿಸ್‌ ನೀಡಿದ ಪೊಲೀಸರು ಶುಕ್ರವಾರ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆ.

ನ್ಯಾಯಾಧೀಶರ ಎದುರು ತಮ್ಮ ಹೇಳಿಕೆಯನ್ನು ಕಡ್ಡಾಯವಾಗಿ ದಾಖಲಿಸಬೇಕು ಎಂದು ಪೊಲೀಸರು ನೋಟಿಸ್‌ನಲ್ಲಿ ಉಲ್ಲೇಖಿಸಿದ್ದಾರೆ.

ನಟ ದರ್ಶನ್‌ ಪತ್ನಿ ವಿಜಯಲಕ್ಷ್ಮೀ ಅವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಮತ್ತು ಅವಹೇಳನಕಾರಿ ಸಂದೇಶ ಹಾಕಿದ ಆರೋಪಿಗಳನ್ನು ಸಿಸಿಬಿ ಕ್ರೈಮ್‌ ವಿಭಾಗದ ಪೊಲೀಸರು ಬಂಧಿಸಿದ್ದರು. ಕಿಡಿಗೇಡಿಗಳ ಬಂಧನಕ್ಕೆ ಮೂರು ವಿಶೇಷ ತಂಡಗಳನ್ನು ರಚನೆ ಮಾಡಲಾಗಿತ್ತು. ನಂತರ ಪೊಲೀಸರು 8 ಮಂದಿ ಆರೋಪಿಗಳನ್ನು ಬಂಧಿಸಿದ್ದರು.

Tags:
error: Content is protected !!