ಬೆಂಗಳೂರು : ಕೇರಳದ ಮುಖ್ಯಮಂತ್ರಿ ಸಿದ್ದರಾಮಯ್ಯನವರಂತಹ ಹೃದಯ ವೈಶಾಲ್ಯ ಇರುವ, ಸಂವೇದನಾಶೀಲ ಮುಖ್ಯಮಂತ್ರಿ ಕರ್ನಾಟಕದಲ್ಲೂ ಇದ್ದಿದ್ದರೆ, ಎಲ್ಲ ಕ್ಷೇತ್ರಗಳಿಗೂ ಭರಪೂರ ಅನುದಾನ ಸಿಕ್ಕುತ್ತಿತ್ತು. ನತದೃಷ್ಟ ಕನ್ನಡಿಗರು ಮಲಯಾಳಿಗಳಷ್ಟು ಅದೃಷ್ಟವಂತರಲ್ಲ ಬಿಡಿ ಎಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಕುಹಕವಾಡಿದೆ.
ರಾಜ್ಯ ಸರ್ಕಾರದ ೨೦೨೪-೨೫ ನೇ ಸಾಲಿನ ಪೂರಕ ಅಂದಾಜನ್ನು ಬುಧವಾರ ವಿಧಾನಸಭೆಯಲ್ಲಿ ಮಂಡಿಸಲಾಗಿತ್ತು. ಕೇರಳದ ವಯನಾಡು ಜಿಲ್ಲೆಯಲ್ಲಿ ಕಳೆದ ವರ್ಷ ಸಂಭವಿಸಿದ್ದ ಭೂಕುಸಿತದ ಸಂತ್ರಸ್ತರಿಗೆ ಮನೆಗಳನ್ನು ಕಟ್ಟಿಕೊಡುವ ಸಲುವಾಗಿ ಎಸ್‌ಡಿಆರ್‌ಎಫ್ ಮೂಲಕ ೧೦ ಕೋಟಿ ರೂಪಾಯಿ ಹಣಕಾಸು ನೆರವು ನೀಡುವ ಬಗ್ಗೆ ಉಲ್ಲೇಖಿಸಲಾಗಿತ್ತು. ಈ ನಡೆಗೆ ಬಿಜೆಪಿ ಅಕ್ಷೇಪ ವ್ಯಕ್ತಪಡಿಸಿದ್ದು, ಕೇರಳದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಭಿನಂದನೆಗಳು ಎಂದು ಟೀಕಿಸಿದೆ.
ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು, ಪ್ರಿಯಾಂಕಾ ಗಾಂಧಿ ಪ್ರತಿನಿಧಿಸುವ ಕೇರಳದ ವಯನಾಡು ಲೋಕಸಭಾ ಕ್ಷೇತ್ರಕ್ಕೆ ೧೦ ಕೋಟಿ ರೂಪಾಯಿ ವಿಶೇಷ ಅನುದಾನ ನೀಡಿರುವ ಕೇರಳ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಭಿನಂದನೆಗಳು. ಕೇರಳದ ಮುಖ್ಯಮಂತ್ರಿ ಸಿದ್ದರಾಮಯ್ಯನವರಂತಹ ಹೃದಯ ವೈಶಾಲ್ಯ ಇರುವ, ಸಂವೇದನಾಶೀಲ ಮುಖ್ಯಮಂತ್ರಿ ಕರ್ನಾಟಕದಲ್ಲೂ ಇದ್ದಿದ್ದರೆ, ಎಲ್ಲ ಕ್ಷೇತ್ರಗಳಿಗೂ ಭರಪೂರ ಅನುದಾನ ಸಿಕ್ಕುತ್ತಿತ್ತು. ನತದೃಷ್ಟ ಕನ್ನಡಿಗರು ಮಲಯಾಳಿಗಷ್ಟು ಅದೃಷ್ಟವಂತರಲ್ಲ ಬಿಡಿ ಎಂದು ವ್ಯಂಗ್ಯ ಮಾಡಿದ್ದಾರೆ.
ಮಂಡ್ಯ : ತಾಲೂಕಿನ ಸೂನಗಹಳ್ಳಿ-ಬೂತನಹೊಸೂರು ನಡುವಿನ ಹೆಬ್ಬಾಳ ಕಟ್ಟೆ ಬಳಿ ಕಬ್ಬಿನ ಗದ್ದೆಯಲ್ಲಿ ಬುಧವಾರ ಮೂರು ಚಿರತೆ ಮರಿಗಳು ಪತ್ತೆಯಾಗಿವೆ.…
ಟೆಹ್ರಾನ್ : ಇರಾನ್ ಹಿಡಿತದಲ್ಲಿದ್ದ ಜಗತ್ತಿನ ಪ್ರಮುಖ ಹಾರ್ಮುಜ್ ಜಲಸಂಧಿ ಬಳಿ ಅಮೆರಿಕ ತೀವ್ರ ದಾಳಿ ನಡೆಸಿದೆ. ಜಲಮಾರ್ಗದ ಬಳಿಕ…
ಬೆಂಗಳೂರು : ರಾಜ್ಯದಲ್ಲಿ ಮರ್ಯಾದೆಯ ಹೆಸರಿನಲ್ಲಿ ಹತ್ಯೆ, ಹಲ್ಲೆ ಮತ್ತು ಬೆದರಿಕೆ ಹಾಕುವವರಿಗೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸುವ…
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಲ್ಲಿ ಬುಧವಾರ ಸಂಜೆ ಏಕಾಏಕಿ ಮಳೆ ಸುರಿದು ಬಿರು ಬಿಸಿಲಿನಿಂದ ಬಳಲಿದ್ದ ನಗರವನ್ನು ಸ್ವಲ್ಪ…
ಮೈಸೂರು : ನಾಡಿನಾದ್ಯಂತ ಯುಗಾದಿ ಹಬ್ಬದ ಸಂಭ್ರಮ ಜೋರಾಗಿದ್ದು, ಸಾಂಸ್ಕೃತಿಕ ನಗರಿ ಮೈಸೂರಿನಲ್ಲೂ ಹಬ್ಬದ ಕಳೆಗಟ್ಟಿದೆ. ಅರಮನೆಯಲ್ಲಿ ವಿಶೇಷ ಸಾಂಸ್ಕೃತಿಕ…
ಮುಂಬೈ : ಆದಿತ್ಯ ಧರ್ ನಿರ್ದೇಶನದ, ರಣವೀರ್ ನಟನೆಯ ಧುರಂಧರ್-2 ಚಿತ್ರದ ಎರಡನೇ ಭಾಗವು ನಾಳೆ(ಮಾರ್ಚ್.19) ಬಿಡುಗಡೆಯಾಗಲಿದೆ. ಕಳೆದ ವರ್ಷ…