Mysore
26
broken clouds

Social Media

ಸೋಮವಾರ, 10 ಆಗಸ್ಟ್ 2026
Light
Dark

ಬಾಗಲಕೋಟೆ | ರಾಜ್ಯ ಸರ್ಕಾರದ ವಿರುದ್ಧ ಮುಂದುವರಿದ ಜನಾಕ್ರೋಶ ಯಾತ್ರೆ

BJP

ಬಾಗಲಕೋಟೆ: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ನಾಯಕರು ಜನಾಕ್ರೋಶ ಯಾತ್ರೆ (Jan Aakrosh yatra) ನಡೆಸುತ್ತಿದ್ದು, ಇಂದು ಬಾಗಲಕೋಟೆಯಲ್ಲಿ ಬೃಹತ್‌ ಯಾತ್ರೆ ಹಮ್ಮಿಕೊಳ್ಳಲಾಗಿತ್ತು.

ರಾಜ್ಯ ಸರ್ಕಾರ ದಿನದಿಂದ ದಿನಕ್ಕೆ ದಿನಬಳಕೆ ವಸ್ತುಗಳು ಸೇರಿದಂತೆ ಎಲ್ಲಾ ಪದಾರ್ಥಗಳ ಬೆಲೆಯನ್ನು ಏರಿಕೆ ಮಾಡುತ್ತಲೇ ಇದೆ ಎಂದು ಆರೋಪಿಸಿ ಬಿಜೆಪಿ ಜನಾಕ್ರೋಶ ಯಾತ್ರೆ ಆರಂಭಿಸಿದೆ. ಮೈಸೂರಿನಿಂದ ಆರಂಭವಾದ ಜನಾಕ್ರೋಶ ಯಾತ್ರೆಯು ಈಗ ಬಾಗಲಕೋಟೆಗೆ ಬಂದು ತಲುಪಿದ್ದು, ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ನಾಯಕರು ಕಹಳೆ ಊದುತ್ತಿದ್ದಾರೆ.

ಜನಾಕ್ರೋಶ ಯಾತ್ರೆಯುದ್ದಕ್ಕೂ ರಾಜ್ಯ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತವಾಗಿದ್ದು, ಇದು ಬಡವರನ್ನು ತುಳಿಯುವ ಸರ್ಕಾರ. ರಾಜ್ಯದಲ್ಲಿ ಸರ್ಕಾರ ಇದೆಯೋ ಇಲ್ಲವೋ ಎಂಬುದೇ ಗೊತ್ತಿಲ್ಲ. ಬಿಟ್ಟಿ ಭಾಗ್ಯಗಳನ್ನು ಜಾರಿಗೆ ತಂದು ಜನಸಾಮಾನ್ಯರ ಬದುಕನ್ನು ಹೀನಾಯ ಸ್ಥಿತಿಗೆ ತಳ್ಳಿದೆ. ಹೀಗಾಗಿ ನೀವೇ ಈ ಸರ್ಕಾರಕ್ಕೆ ಸರಿಯಾದ ಪಾಠ ಕಲಿಸಬೇಕು ಎಂದು ಜನತೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸಲಹೆ ನೀಡಿದ್ದಾರೆ.

ಇಂದಿನ ಜನಾಕ್ರೋಶ ಯಾತ್ರೆಯಲ್ಲಿ ಮಾಜಿ ಸಿಎಂ ಜಗದೀಶ್‌ ಶೆಟ್ಟರ್‌, ವಿಧಾನ ಪರಿಷತ್‌ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಮಾಜಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್. ರವಿಕುಮಾರ್ ಸೇರಿದಂತೆ ಸಂಸದರು, ಶಾಸಕರು, ಪರಿಷತ್‌ ಸದಸ್ಯರು, ಪದಾಧಿಕಾರಿಗಳು ಮತ್ತು ಪ್ರಮುಖರು ಭಾಗಿಯಾಗಿದ್ದು, ರಾಜ್ಯ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಇದನ್ನೂ ಓದಿ:-ಮುಡಾ ಹಗರಣ: ಸಿಎಂ ಸಿದ್ದರಾಮಯ್ಯಗೆ ಮತ್ತೆ ಶಾಕ್‌ ನೀಡಿದ ಹೈಕೋರ್ಟ್‌

Tags:
error: Content is protected !!