BJP
ಬಾಗಲಕೋಟೆ: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ನಾಯಕರು ಜನಾಕ್ರೋಶ ಯಾತ್ರೆ (Jan Aakrosh yatra) ನಡೆಸುತ್ತಿದ್ದು, ಇಂದು ಬಾಗಲಕೋಟೆಯಲ್ಲಿ ಬೃಹತ್ ಯಾತ್ರೆ ಹಮ್ಮಿಕೊಳ್ಳಲಾಗಿತ್ತು.
ರಾಜ್ಯ ಸರ್ಕಾರ ದಿನದಿಂದ ದಿನಕ್ಕೆ ದಿನಬಳಕೆ ವಸ್ತುಗಳು ಸೇರಿದಂತೆ ಎಲ್ಲಾ ಪದಾರ್ಥಗಳ ಬೆಲೆಯನ್ನು ಏರಿಕೆ ಮಾಡುತ್ತಲೇ ಇದೆ ಎಂದು ಆರೋಪಿಸಿ ಬಿಜೆಪಿ ಜನಾಕ್ರೋಶ ಯಾತ್ರೆ ಆರಂಭಿಸಿದೆ. ಮೈಸೂರಿನಿಂದ ಆರಂಭವಾದ ಜನಾಕ್ರೋಶ ಯಾತ್ರೆಯು ಈಗ ಬಾಗಲಕೋಟೆಗೆ ಬಂದು ತಲುಪಿದ್ದು, ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ನಾಯಕರು ಕಹಳೆ ಊದುತ್ತಿದ್ದಾರೆ.
ಜನಾಕ್ರೋಶ ಯಾತ್ರೆಯುದ್ದಕ್ಕೂ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತವಾಗಿದ್ದು, ಇದು ಬಡವರನ್ನು ತುಳಿಯುವ ಸರ್ಕಾರ. ರಾಜ್ಯದಲ್ಲಿ ಸರ್ಕಾರ ಇದೆಯೋ ಇಲ್ಲವೋ ಎಂಬುದೇ ಗೊತ್ತಿಲ್ಲ. ಬಿಟ್ಟಿ ಭಾಗ್ಯಗಳನ್ನು ಜಾರಿಗೆ ತಂದು ಜನಸಾಮಾನ್ಯರ ಬದುಕನ್ನು ಹೀನಾಯ ಸ್ಥಿತಿಗೆ ತಳ್ಳಿದೆ. ಹೀಗಾಗಿ ನೀವೇ ಈ ಸರ್ಕಾರಕ್ಕೆ ಸರಿಯಾದ ಪಾಠ ಕಲಿಸಬೇಕು ಎಂದು ಜನತೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸಲಹೆ ನೀಡಿದ್ದಾರೆ.
ಇಂದಿನ ಜನಾಕ್ರೋಶ ಯಾತ್ರೆಯಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್, ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಮಾಜಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್. ರವಿಕುಮಾರ್ ಸೇರಿದಂತೆ ಸಂಸದರು, ಶಾಸಕರು, ಪರಿಷತ್ ಸದಸ್ಯರು, ಪದಾಧಿಕಾರಿಗಳು ಮತ್ತು ಪ್ರಮುಖರು ಭಾಗಿಯಾಗಿದ್ದು, ರಾಜ್ಯ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ.
ಇದನ್ನೂ ಓದಿ:-ಮುಡಾ ಹಗರಣ: ಸಿಎಂ ಸಿದ್ದರಾಮಯ್ಯಗೆ ಮತ್ತೆ ಶಾಕ್ ನೀಡಿದ ಹೈಕೋರ್ಟ್
ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…
ಬೆಳಗಾವಿ : ಸರ್ಕಾರದಿಂದ ಪಡೆದ ಸಿಎ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡಲು ಈಗಿರುವ ಮೂರು ವರ್ಷಗಳ ಮಿತಿಯನ್ನು ಐದು ವರ್ಷಗಳಿಗೆ…
ಮೈಸೂರು : ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಹಾಗೂ ಮುಂಬೈನ ಬಾಂಧ್ರಾ ಪೊಲೀಸ್ ಅಧಿಕಾರಿ ಸೋಗಿನಲ್ಲಿ ನಗರದ ವೈದ್ಯರೊಬ್ಬರಿಗೆ…
ಮೈಸೂರು : ಜಾತಿ ನಿಂದನೆ, ಅಸ್ಪೃಶ್ಯತೆ ಆಚರಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರು ದಾಖಲು ಹಾಗೂ ತನಿಖೆ ನಡೆಸುವ ಉದ್ದೇಶದಿಂದ ಆರಂಭಗೊಂಡಿರುವ…
ಮೈಸೂರು : ಕರ್ನಾಟಕ ಪೊಲೀಸ್ ಅಕಾಡೆಮಿ ಮತ್ತು ಸಾವಿತ್ರಿಬಾಯಿ ಫುಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯ ನಡುವೆ ಒಡಂಬಡಿಕೆಗೆ…
ಬೆಳಗಾವಿ (ಸುವರ್ಣಸೌಧ) : ಇತ್ತೀಚೆಗೆ ನಿಧನರಾದ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…